ಬಂಟಕಲ್ ಉಡುಪಿ :ಬಂಟಕಲ್ ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ
ಕಾಲೇಜಿನ ಆವರಣದಲ್ಲಿ ನಡೆದ ಸಮಾರಂಭ
(Bantakal) ಬಂಟಕಲ್ : ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ 13 ನೇ ವರ್ಷದ ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ ಕಾಲೇಜಿನ ಆವರಣದಲ್ಲಿ ಆಯೋಜಿಸಲಾಗಿತ್ತು.
ಶ್ರೀ ಸೋದೆ ವಾದಿರಾಜ ಮಠ ಶಿಕ್ಷಣ ಸಂಸ್ಥೆಗಳ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ. ರಾಧಾಕೃಷ್ಣ ಎಸ್ ಐತಾಳ್ ಇವರು ಮಾತನಾಡಿ, ವಿದ್ಯಾರ್ಥಿಗಳು ಕಾಲೇಜು ಹಾಗೂ ಉಪನ್ಯಾಸಕರ ಬಗ್ಗೆ ವ್ಯಕ್ತಪಡಿಸಿದ ಸಕಾರಾತ್ಮಕ ಅಭಿಪ್ರಾಯದ ಬಗ್ಗೆ ಸಂತಸ ವ್ಯಕ್ತ ಪಡಿಸಿದರು. ವಿದ್ಯಾರ್ಥಿಗಳ ವಿನಯ ಶೀಲತೆಯು ಅವರ ವ್ಯಕ್ತಿತ್ವ ಮತ್ತು ಪದವಿಯ ಮೌಲ್ಯವನ್ನು ಹೆಚ್ಚಿಸುತ್ತದೆ ಎಂದ ಅವರು, ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಸದಾ ವಿನಯ ಮತ್ತು ಸರಳತೆಯನ್ನು ಕಾಪಾಡಿಕೊಳ್ಳಬೇಕೆಂದು ಸಲಹೆ ನೀಡಿದರು.
ಶ್ರೀ ಸೋದೆ ವಾದಿರಾಜ ಮಠ ಶಿಕ್ಷಣ ಪ್ರತಿಷ್ಠಾನ ಇದರ ಕಾರ್ಯದರ್ಶಿ ರತ್ನಕುಮಾರ್ ರವರು ಉದ್ಯೋಗ ಜೀವನದ ಅನುಭವವನ್ನು ಹಂಚಿಕೊಂಡರು. ವಿದ್ಯಾರ್ಥಿಗಳು ಉದ್ಯಮಿಗಳಾಗಿ ಇತರರಿಗೆ ಉದ್ಯೋಗಾವಕಾಶಗಳನ್ನು ನೀಡಬೇಕು ಎಂದ ಅವರು, ಜೊತೆಗೆ ಸಂಸ್ಥೆಗೆ ಬಲಿಷ್ಠ ಹಳೆ ವಿದ್ಯಾರ್ಥಿಗಳ ಸಂಘವನ್ನು ನಿರ್ಮಿಸುವ ಅಗತ್ಯತೆಯಿದ್ದು ಸಂಸ್ಥೆಯೊಂದಿಗೆ ಕೈ ಜೋಡಿಸಬೇಕು ಎಂದರು.
ಸಂಸ್ಥೆಯ ಪ್ರಾಂಶುಪಾಲ ಡಾ. ನಾಗರಾಜ್ ಭಟ್ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಭವಿಷ್ಯದಲ್ಲಿ ಯಶಸ್ಸನ್ನು ಕಾಣಲು ಹೆಚ್ಚು ಶ್ರಮ ಪಡಬೇಕೆಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳ ಅತ್ಯುತ್ತಮ ಪ್ರಾಜೆಕ್ಟ್ ಗಳಿಗೆ ಬಹುಮಾನವನ್ನು ನೀಡಲಾಯಿತು.

