• Home  
  • ವಿದ್ಯಾರ್ಥಿನಿಯ ಕೈಯಲ್ಲಿ ಹೈಡ್ರೊವೀಡ್ ಗಾಂಜಾ:  ಮುಲ್ಕಿ ಪೊಲೀಸರ ದಾಳಿ (Hydroweed marijuana found in student’s hand: Mulki police raid)
- ಅಪರಾಧ

ವಿದ್ಯಾರ್ಥಿನಿಯ ಕೈಯಲ್ಲಿ ಹೈಡ್ರೊವೀಡ್ ಗಾಂಜಾ:  ಮುಲ್ಕಿ ಪೊಲೀಸರ ದಾಳಿ (Hydroweed marijuana found in student’s hand: Mulki police raid)

Share: ವಿದ್ಯಾರ್ಥಿನಿಯ ಕೈಯಲ್ಲಿ ಹೈಡ್ರೊವೀಡ್ ಗಾಂಜಾ:  ಮುಲ್ಕಿ ಪೊಲೀಸರ ದಾಳಿ   35 ಲಕ್ಷ ರೂ. ಮೌಲ್ಯದ ಮಾದಕ ವಸ್ತು ವಶ (Mulki) ಮುಲ್ಕಿ: ಕಾಲೇಜು ವಿದ್ಯಾರ್ಥಿನಿಯರನ್ನೇ ಬಳಸಿಕೊಂಡು ನಡೆಯುತ್ತಿರುವ ಮಾದಕ ದ್ರವ್ಯ ಜಾಲದ ವಿರುದ್ಧ ಮುಲ್ಕಿ ಪೊಲೀಸರು ಮಹತ್ವದ ಕಾರ್ಯಾಚರಣೆ ನಡೆಸಿದ್ದು, ಸುಮಾರು  35 ಲಕ್ಷ ರೂ. ಮೌಲ್ಯದ ಹೈಡ್ರೊವೀಡ್ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಪ್ರಕರಣ ಸಂಬಂಧ ಅಂತಿಮ ವರ್ಷದ BCA ವಿದ್ಯಾರ್ಥಿನಿಯೊಬ್ಬಳನ್ನು ಬಂಧಿಸಲಾಗಿದೆ.    ಬಂಧಿತೆಯನ್ನು ಸುಹಾನಾ (21) ಎಂದು ಗುರುತಿಸಲಾಗಿದ್ದು, ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ […]

(Mulki) ಮುಲ್ಕಿ: ಕಾಲೇಜು ವಿದ್ಯಾರ್ಥಿನಿಯರನ್ನೇ ಬಳಸಿಕೊಂಡು ನಡೆಯುತ್ತಿರುವ ಮಾದಕ ದ್ರವ್ಯ ಜಾಲದ ವಿರುದ್ಧ ಮುಲ್ಕಿ ಪೊಲೀಸರು ಮಹತ್ವದ ಕಾರ್ಯಾಚರಣೆ ನಡೆಸಿದ್ದು, ಸುಮಾರು  35 ಲಕ್ಷ ರೂ. ಮೌಲ್ಯದ ಹೈಡ್ರೊವೀಡ್ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಪ್ರಕರಣ ಸಂಬಂಧ ಅಂತಿಮ ವರ್ಷದ BCA ವಿದ್ಯಾರ್ಥಿನಿಯೊಬ್ಬಳನ್ನು ಬಂಧಿಸಲಾಗಿದೆ.

   ಬಂಧಿತೆಯನ್ನು ಸುಹಾನಾ (21) ಎಂದು ಗುರುತಿಸಲಾಗಿದ್ದು, ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಹುಲಿದೇವರ ಬನ ನಿವಾಸಿಯಾಗಿರುವ ಆಕೆ, ಪ್ರಸ್ತುತ ಕುಂದಾಪುರದ ಕಾಲೇಜೊಂದರಲ್ಲಿ BCA ಅಂತಿಮ ವರ್ಷದ ವ್ಯಾಸಂಗ ಮಾಡುತ್ತಿದ್ದಾಳೆ ಎಂದು ತಿಳಿದುಬಂದಿದೆ.

  ಮೇ 12ರಂದು ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಮುಲ್ಕಿ ರೈಲ್ವೆ ಸ್ಟೇಷನ್ ರಸ್ತೆಯಲ್ಲಿ ಹೈಡ್ರೊವೀಡ್ ಗಾಂಜಾವನ್ನು ಮಾರಾಟ ಉದ್ದೇಶದಿಂದ ಸಾಗಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಪಣಂಬೂರು ACP ತಂಡ ಹಾಗೂ ಮುಲ್ಕಿ ಠಾಣೆ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿದರು. ಕಾರ್ಯಾಚರಣೆಯ ವೇಳೆ ಆರೋಪಿತೆಯನ್ನು ಬಂಧಿಸಿ, ಆಕೆಯ ಬಳಿಯಿಂದ 1 ಕೆಜಿ 42 ಗ್ರಾಂ ತೂಕದ ಹೈಡ್ರೊವೀಡ್ ಗಾಂಜಾವನ್ನು ವಶಪಡಿಸಿಕೊಳ್ಳಲಾಯಿತು.

  ಇದರೊಂದಿಗೆ ಕೃತ್ಯಕ್ಕೆ ಬಳಸಿದ್ದ ಮೊಬೈಲ್ ಫೋನ್ ಹಾಗೂ ಇತರ ಸಾಮಗ್ರಿಗಳನ್ನೂ ಪೊಲೀಸರು ಜಪ್ತಿ ಮಾಡಿದ್ದಾರೆ. ವಶಪಡಿಸಿಕೊಂಡ ಮಾದಕ ವಸ್ತುವಿನ ಅಂದಾಜು ಮೌಲ್ಯ ಸುಮಾರು 35 ಲಕ್ಷ ರೂ. ಎಂದು ಪೊಲೀಸರು ತಿಳಿಸಿದ್ದಾರೆ.

   ಪ್ರಾಥಮಿಕ ತನಿಖೆಯಲ್ಲಿ ಆರೋಪಿತೆ ಚೆನ್ನೈನಿಂದ ಮಾದಕ ದ್ರವ್ಯವನ್ನು ತಂದು ಮಂಗಳೂರು ಭಾಗದಲ್ಲಿ ಅಕ್ರಮವಾಗಿ ಪೂರೈಕೆ ಮಾಡುತ್ತಿದ್ದಳು ಎಂಬ ಅಂಶ ಬೆಳಕಿಗೆ ಬಂದಿದೆ. ಹೆಚ್ಚಿನ ತನಿಖೆ ಮುಂದುವರಿದಿದ್ದು, ಈ ಜಾಲದ ಹಿಂದೆ ಇನ್ನೂ ಹಲವು ಮಂದಿಯ ಸಂಪರ್ಕ ಇರುವ ಸಾಧ್ಯತೆಯನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ.

Leave a comment

Your email address will not be published. Required fields are marked *

eMedia Kannada  @2025. All Rights Reserved.