• Home  
  • ಕಾಪು ರಾಜೀವ್ ಭವನದಲ್ಲಿ ರಾಜೀವ್ ಗಾಂಧಿ ಪುಣ್ಯ ಸ್ಮರಣೆ (Rajiv Gandhi’s memorial service at Kaup Rajiv Bhavan)
- ರಾಜಕೀಯ

ಕಾಪು ರಾಜೀವ್ ಭವನದಲ್ಲಿ ರಾಜೀವ್ ಗಾಂಧಿ ಪುಣ್ಯ ಸ್ಮರಣೆ (Rajiv Gandhi’s memorial service at Kaup Rajiv Bhavan)

Share: ಕಾಪು ರಾಜೀವ್ ಭವನದಲ್ಲಿ ರಾಜೀವ್ ಗಾಂಧಿ ಪುಣ್ಯ ಸ್ಮರಣೆ ರಾಜೀವ್ ಗಾಂಧಿ ಆಧುನಿಕ ಭಾರತದ ನಿರ್ಮಾಣಕ್ಕೆ ದೂರದೃಷ್ಟಿಯ ನಾಯಕ : ವೈ. ಸುಕುಮಾರ್ (Kaup) ಕಾಪು: ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿ (ದಕ್ಷಿಣ) ವತಿಯಿಂದ ಭಾರತ ರತ್ನ, ಮಾಜಿ ಪ್ರಧಾನಿ ರಾಜೀವ್‌ ಗಾಂಧಿ ಅವರ ಪುಣ್ಯಸ್ಮರಣೆ ಕಾರ್ಯಕ್ರಮ ಗುರುವಾರ  ಕಾಪು ರಾಜೀವ್ ಭವನದಲ್ಲಿ ನಡೆಯಿತು.   ಈ ಸಂದರ್ಭದಲ್ಲಿ ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿ   ಅಧ್ಯಕ್ಷ ವೈ. ಸುಕುಮಾರ್ ಮಾತನಾಡಿ, ಮಾಜಿ ಪ್ರಧಾನಿ ರಾಜೀವ್‌ ಗಾಂಧಿ […]

(Kaup) ಕಾಪು: ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿ (ದಕ್ಷಿಣ) ವತಿಯಿಂದ ಭಾರತ ರತ್ನ, ಮಾಜಿ ಪ್ರಧಾನಿ ರಾಜೀವ್‌ ಗಾಂಧಿ ಅವರ ಪುಣ್ಯಸ್ಮರಣೆ ಕಾರ್ಯಕ್ರಮ ಗುರುವಾರ  ಕಾಪು ರಾಜೀವ್ ಭವನದಲ್ಲಿ ನಡೆಯಿತು.

  ಈ ಸಂದರ್ಭದಲ್ಲಿ ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿ   ಅಧ್ಯಕ್ಷ ವೈ. ಸುಕುಮಾರ್ ಮಾತನಾಡಿ, ಮಾಜಿ ಪ್ರಧಾನಿ ರಾಜೀವ್‌ ಗಾಂಧಿ ಅವರು ದೇಶದ ಅಭಿವೃದ್ಧಿ, ಯುವಜನತೆಗೆ ಅವಕಾಶಗಳು ಹಾಗೂ ಮಾಹಿತಿ ತಂತ್ರಜ್ಞಾನ ಕ್ಷೇತ್ರದ ಬೆಳವಣಿಗೆಯಲ್ಲಿ ಮಹತ್ವದ ಕೊಡುಗೆ ನೀಡಿದ್ದಾರೆ. ರಾಜೀವ್ ಗಾಂಧಿ ಅವರು ಪಂಚಾಯತ್ ರಾಜ್ ವ್ಯವಸ್ಥೆ ಬಲಪಡಿಸುವುದು, ಯುವಶಕ್ತಿಗೆ ಪ್ರೋತ್ಸಾಹ ನೀಡುವುದು ಹಾಗೂ ಆಧುನಿಕ ಭಾರತದ ನಿರ್ಮಾಣಕ್ಕೆ ದೂರದೃಷ್ಟಿಯ ಯೋಜನೆಗಳನ್ನು ಜಾರಿಗೆ ತಂದ ನಾಯಕರು. ಅವರ ಆದರ್ಶ ಮತ್ತು ಸೇವೆಯನ್ನು ಯುವ ಪೀಳಿಗೆ ಅನುಸರಿಸಬೇಕಾಗಿದೆ ಎಂದರು.

   ಈ ಸಂದರ್ಭ ಕಾಪು ವಿಧಾನಸಭಾ ಕ್ಷೇತ್ರ ಯುವ ಕಾಂಗ್ರೆಸ್ ಅಧ್ಯಕ್ಷರಾದ ಮೊಹಮ್ಮದ್ ನಿಯಾಜ್, ಕಾಪು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ನವೀನ್ ಚಂದ್ರ ಸುವರ್ಣ, ಕಾಪು ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾಂತಲತಾ ಶೆಟ್ಟಿ, ಹೆಜಮಾಡಿ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ಪ್ರಮೋದ್ ಚಂದ್ರ, ಪಲಿಮಾರು ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷರಾದ ಯಶವಂತ್‌ ಪೂಜಾರಿ, ಕಾಂಗ್ರೆಸ್ ಮುಖಂಡರುಗಳಾದ ರಾಜೇಶ್ ರಾವ್ ಪಾಂಗಾಳ, ನಯೀಮ್ ಕಟಪಾಡಿ, ಸಿಮ್ಮಿ ಡಿಸೋಜಾ, ಸುಚರಿತ ಪಡುಬಿದ್ರಿ, ಜ್ಯೋತಿ ಮೆನನ್, ಅಶ್ವಿನಿ, ಪ್ರೀತಿ ಸಾಲಿನ್ಸ್, ಮುಬಿನಾ ಬೇಗಂ, ಹಸನ್ ಕೋಡಿ, ಸತೀಶ್ ಉಚ್ಚಿಲ, ಬಾಬಣ್ಣ ನಾಯಕ್ ಮುಂತಾದವರು ಉಪಸ್ಥಿತರಿದ್ದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.