• Home  
  • ಧರ್ಮಸ್ಥಳದಲ್ಲಿ ಶ್ರೀ ಮಂಜುನಾಥ ಸ್ವಾಮಿ ದರ್ಶನ ಪಡೆದ ಉಪರಾಷ್ಟ್ರಪತಿ  ಸಿ. ಪಿ. ರಾಧಾಕೃಷ್ಣನ್ (Vice President C who had darshan of Shri Manjunath Swami at Dharamsthala. P. Radhakrishnan)
- ಧಾರ್ಮಿಕ

ಧರ್ಮಸ್ಥಳದಲ್ಲಿ ಶ್ರೀ ಮಂಜುನಾಥ ಸ್ವಾಮಿ ದರ್ಶನ ಪಡೆದ ಉಪರಾಷ್ಟ್ರಪತಿ  ಸಿ. ಪಿ. ರಾಧಾಕೃಷ್ಣನ್ (Vice President C who had darshan of Shri Manjunath Swami at Dharamsthala. P. Radhakrishnan)

Share: ಧರ್ಮಸ್ಥಳದಲ್ಲಿ ಶ್ರೀ ಮಂಜುನಾಥ ಸ್ವಾಮಿ ದರ್ಶನ ಪಡೆದ ಉಪರಾಷ್ಟ್ರಪತಿ  ಸಿ. ಪಿ. ರಾಧಾಕೃಷ್ಣನ್  ಉಪರಾಷ್ಟ್ರಪತಿ ಅವರನ್ನು ಸ್ವಾಗತಿಸಿದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ   (Dharmastala) ಧರ್ಮಸ್ಥಳ, ಮೇ 31: ಉಪರಾಷ್ಟ್ರಪತಿ ಸಿ. ಪಿ. ರಾಧಾಕೃಷ್ಣನ್ ಅವರು ಭಾನುವಾರ ಬೆಳಿಗ್ಗೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಉಪರಾಷ್ಟ್ರಪತಿಗಳನ್ನು ದೇಗುಲದಲ್ಲಿದಲ್ಲಿ ಸ್ವಾಗತಿಸಿದರು. ದೇವಸ್ಥಾನಕ್ಕೆ  […]

  (Dharmastala) ಧರ್ಮಸ್ಥಳ, ಮೇ 31: ಉಪರಾಷ್ಟ್ರಪತಿ ಸಿ. ಪಿ. ರಾಧಾಕೃಷ್ಣನ್ ಅವರು ಭಾನುವಾರ ಬೆಳಿಗ್ಗೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಉಪರಾಷ್ಟ್ರಪತಿಗಳನ್ನು ದೇಗುಲದಲ್ಲಿದಲ್ಲಿ ಸ್ವಾಗತಿಸಿದರು. ದೇವಸ್ಥಾನಕ್ಕೆ  ಆಗಮಿಸಿದ ಉಪರಾಷ್ಟ್ರಪತಿಯವರಿಗೆ ಸಾಂಪ್ರದಾಯಿಕ ಸ್ವಾಗತ ನೀಡಲಾಯಿತು.

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌ ಅವರು ಉಪರಾಷ್ಟ್ರಪತಿಯವರ ಜೊತೆಯಲ್ಲಿದ್ದರು.

  ಭೇಟಿಯ ವೇಳೆ ವೀರೇಂದ್ರ ಹೆಗ್ಗಡೆ ಅವರು ಧರ್ಮಸ್ಥಳ ಕ್ಷೇತ್ರದ ಧಾರ್ಮಿಕ ಚಟುವಟಿಕೆಗಳು ಹಾಗೂ ಶಿಕ್ಷಣ, ಆರೋಗ್ಯ ಮತ್ತು ಗ್ರಾಮೀಣಾಭಿವೃದ್ಧಿ ಕ್ಷೇತ್ರಗಳಲ್ಲಿ ಧರ್ಮಸ್ಥಳ ಆಡಳಿತ ಕೈಗೊಂಡಿರುವ ಕೈಗೊಂಡಿರುವ ವಿವಿಧ ಸಾಮಾಜಿಕ ಸೇವಾ ಕಾರ್ಯಕ್ರಮಗಳ ಕುರಿತು ಉಪರಾಷ್ಟ್ರಪತಿಗೆ ಮಾಹಿತಿ ನೀಡಿದರು.

   ಉಪರಾಷ್ಟ್ರಪತಿಯ ಈ ಭೇಟಿಯಲ್ಲಿ ಜನಪ್ರತಿನಿಧಿಗಳು, ದೇವಾಲಯದ ಅಧಿಕಾರಿಗಳು ಹಾಗೂ ಜಿಲ್ಲಾ ಆಡಳಿತದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

   ಕರ್ನಾಟಕ, ಗೋವಾ ಮತ್ತು ಕೇರಳ ರಾಜ್ಯಗಳ ಅಧಿಕೃತ ಪ್ರವಾಸದ ಅಂಗವಾಗಿ ಉಪರಾಷ್ಟ್ರಪತಿ ರಾಧಾಕೃಷ್ಣನ್ ಅವರು ಧರ್ಮಸ್ಥಳಕ್ಕೆ ಭೇಟಿ ನೀಡಿದ್ದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.