ಎರ್ಮಾಳು ತೆಂಕ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಪ್ರಾರಂಭೋತ್ಸವ
ಕಾರ್ಯಕ್ರಮ ಉದ್ಘಾಟಿಸಿದ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಶಿವಪ್ರಸಾದ್ ಶೆಟ್ಟಿ ಎಲ್ಲದಡಿ
(Yermal Thenka) ಎರ್ಮಾಳು ತೆಂಕ : ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ, ಎರ್ಮಾಳು ತೆಂಕ ಇದರ 2026 – 27 ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವ ಹಾಗೂ ಪೋಷಕ, ಶಿಕ್ಷಕರ ಮಹಾಸಭೆಯು ಸೋಮವಾರ ನೆರವೇರಿತು.
ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಶಿವಪ್ರಸಾದ್ ಶೆಟ್ಟಿ ಎಲ್ಲದಡಿ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿ, ವಿಜ್ಞಾನ ಪ್ರಯೋಗದ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಇದೇ ಸಂದರ್ಭದಲ್ಲಿ ಇಲಾಖೆಯಿಂದ ಸರಬರಾಜಾಗಿರುವ ಉಚಿತ ಪಠ್ಯಪುಸ್ತಕಗಳನ್ನು ವಿದ್ಯಾರ್ಥಿಗಳಿಗೆ ವಿತರಿಸಲಾಯಿತು.
ಕ್ಷೇತ್ರ ಸಂಪನ್ಮೂಲ ಅಧಿಕಾರಿ ಶ್ರೀಮತಿ ಪದ್ಮಶ್ರೀ ಅವರು ಕಾರ್ಯಕ್ರಮದ ಉದ್ದೇಶವನ್ನು ಪ್ರಾಸ್ತಾವಿಕ ನುಡಿಗಳೊಂದಿಗೆ ಪೋಷಕರಿಗೆ ತಿಳಿಸಿದರು.
ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಸುರೇಖಾ ಹಾಗೂ ಹಿರಿಯ ಶಿಕ್ಷಕಿ ಶ್ರೀಮತಿ ರಜನಿ ಉಪಸ್ಥಿತರಿದ್ದು ಶುಭ ಹಾರೈಸಿದರು.
ಎಸ್. ಡಿ.ಎಂ.ಸಿ ಅಧ್ಯಕ್ಷೆ ಶ್ರೀಮತಿ ಗುಲಾಯವರು ಅಧ್ಯಕ್ಷತೆ ವಹಿಸಿದ್ದರು.
ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ವಿನೋದ ಸ್ವಾಗತಿಸಿದರು. ಸಹ ಶಿಕ್ಷಕಿ ಶ್ರೀಮತಿ ಚೈತ್ರ ಕಾರ್ಯಕ್ರಮ ನಿರೂಪಿಸಿದರು. ಸಹ ಶಿಕ್ಷಕಿ ಶ್ರೀಮತಿ ಯಶೋಧ ವಂದಿಸಿದರು.

