ಡಿಕೆಶಿ ಮುಖ್ಯಮಂತ್ರಿ ಪದಗ್ರಹಣಕ್ಕೆ ಶ್ರೀ ಡಾ. ಪ್ರಣವಾನಂದ ಸ್ವಾಮೀಜಿಗೆ ಅಧಿಕೃತ ಆಹ್ವಾನ
ಇಂದು (ಬುಧವಾರ) ನಡೆಯಲಿರುವ ಪದಗ್ರಹಣ
(Bengaluru) ಬೆಂಗಳೂರು: ರಾಜ್ಯದ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಅವರ ಇಂದು (ಬುಧವಾರ) ಸಂಜೆ ನೆರವೇರಲಿರುವ ಪದಗ್ರಹಣ ಕಾರ್ಯಕ್ರಮಕ್ಕೆ ಬ್ರಹ್ಮಶ್ರೀ ನಾರಾಯಣಗುರು ಶಕ್ತಿಪೀಠದ ಪೀಠಾಧಿಪತಿಗಳು ಹಾಗೂ ಅತಿ ಹಿಂದುಳಿದ ಮಠಾಧೀಶರ ಮಹಾಸಭಾ ರಾಜ್ಯಾಧ್ಯಕ್ಷರಾದ ಶ್ರೀ ಶ್ರೀ ಶ್ರೀ ಡಾ. ಪ್ರಣವಾನಂದ ಸ್ವಾಮೀಜಿಯವರಿಗೆ ವಿಶೇಷ ಆಹ್ವಾನ ನೀಡಲಾಗಿದೆ.
ಮಂಗಳವಾರ ಸಂಜೆ ಮುಖ್ಯಮಂತ್ರಿಗಳ ಕಚೇರಿಯಿಂದ ವಿಶೇಷ ಆಹ್ವಾನ ಪತ್ರಿಕೆಯನ್ನು ಶ್ರೀ ಡಾ. ಪ್ರಣವಾನಂದ ಸ್ವಾಮೀಜಿಯವರಿಗೆ ತಲುಪಿಸಲಾಗಿದೆ.

