• Home  
  • ಬಂಟ್ವಾಳ: ಕಾರಿನಲ್ಲಿ ಎಂಡಿಎಂಎ ಸಾಗಾಟ ಪತ್ತೆ: ಮೂವರ ಬಂಧನ (Bantwal: MDMA found in car, three arrested)
- ಅಪರಾಧ

ಬಂಟ್ವಾಳ: ಕಾರಿನಲ್ಲಿ ಎಂಡಿಎಂಎ ಸಾಗಾಟ ಪತ್ತೆ: ಮೂವರ ಬಂಧನ (Bantwal: MDMA found in car, three arrested)

Share: ಬಂಟ್ವಾಳ: ಕಾರಿನಲ್ಲಿ ಎಂಡಿಎಂಎ ಸಾಗಾಟ ಪತ್ತೆ: ಮೂವರ ಬಂಧನ ಮೆಲ್ಕಾರ್ ಪ್ರೈ ಓವರ್ ನಲ್ಲಿ ಬಂಟ್ವಾಳ ನಗರ ಠಾಣಾ ಪೊಲೀಸರ ಕಾರ್ಯಾಚರಣೆ (Bantwala) ಬಂಟ್ವಾಳ: ಕಾರೊಂದರಲ್ಲಿ ಅಕ್ರಮವಾಗಿ ಮಾದಕ ವಸ್ತು ಎಂಡಿಎಂಎ ಸಾಗಾಟ ಮಾಡುತ್ತಿರುವುದನ್ನು ಬಂಟ್ವಾಳ ನಗರ ಠಾಣಾ ಪೊಲೀಸರು ಮೆಲ್ಕಾರ್ ಪ್ರೈ ಓವರ್ ನಲ್ಲಿ ಪತ್ತೆ ಹಚ್ಚಿದ್ದು, ಈ ಸಂಬಂಧವಾಗಿ ಮೂವರನ್ನು ಬಂಧಿಸಿದ್ದಾರೆ.     ಪುದು ಗ್ರಾಮದ ನಿವಾಸಿ ಎ. ಜುಬೈರ್ (39), ಸಜಿಪಮುನ್ನೂರು ಗ್ರಾಮದ ನಿವಾಸಿ ಮೊಹಮ್ಮದ್ ಸವಾದ್ (36)  ಬಿ. ಮೂಡ ಗ್ರಾಮದ […]

(Bantwala) ಬಂಟ್ವಾಳ: ಕಾರೊಂದರಲ್ಲಿ ಅಕ್ರಮವಾಗಿ ಮಾದಕ ವಸ್ತು ಎಂಡಿಎಂಎ ಸಾಗಾಟ ಮಾಡುತ್ತಿರುವುದನ್ನು ಬಂಟ್ವಾಳ ನಗರ ಠಾಣಾ ಪೊಲೀಸರು ಮೆಲ್ಕಾರ್ ಪ್ರೈ ಓವರ್ ನಲ್ಲಿ ಪತ್ತೆ ಹಚ್ಚಿದ್ದು, ಈ ಸಂಬಂಧವಾಗಿ ಮೂವರನ್ನು ಬಂಧಿಸಿದ್ದಾರೆ.

    ಪುದು ಗ್ರಾಮದ ನಿವಾಸಿ ಎ. ಜುಬೈರ್ (39), ಸಜಿಪಮುನ್ನೂರು ಗ್ರಾಮದ ನಿವಾಸಿ ಮೊಹಮ್ಮದ್ ಸವಾದ್ (36)  ಬಿ. ಮೂಡ ಗ್ರಾಮದ ನಿವಾಸಿ ಬಿ.ಎಂ. ರಶೀದ್ ಯಾನೆ ಮಾರಿಮುತ್ತು ಬಂಧಿತ ಆರೋಪಿಗಳಾಗಿದ್ದಾರೆ.
  ಬಂಟ್ವಾಳ ನಗರ ಪೊಲೀಸ್ ಠಾಣಾ ಪಿಎಸ್ ಐ ಮತ್ತವರ ಸಿಬ್ಬಂದಿಗಳು  ಮೆಲ್ಕಾರ್ ಪ್ರೈ ಓವರ್ ಬಳಿ ವಾಹನ ತಪಾಸಣೆಯಲ್ಲಿ ನಿರತರಾಗಿದ್ದಾಗ ಅನುಮಾನಾಸ್ಪದವಾಗಿ ಬಂದ ಕಾರೊಂದನ್ನು ತಪಾಸಣೆಗಾಗಿ ನಿಲ್ಲಿಸಿದ್ದು, ಕಾರಿನಲ್ಲಿ ಚಾಲಕ ಹಾಗೂ ಇಬ್ಬರು ಪ್ರಯಾಣಿಕರಿದ್ದರು.
  ಕಾರನ್ನು ಪರಿಶೀಲಿಸಿದಾಗ ಮನೋದ್ರೇಕಕಾರಿ ವಸ್ತು ಸೇವನೆ ಮಾಡಲು ಬಳಸುವ ಸಾಧನ ಕಂಡುಬಂದಿದ್ದು, ಈ ಬಗ್ಗೆ ಅವರನ್ನು ವಿಚಾರಿಸಿದಾಗ ಮಾದಕ ವಸ್ತು ಎಂಡಿಎಂಎ ಅಕ್ರಮವಾಗಿ ಸಾಗಿಸುತ್ತಿರುವುದು ಬೆಳಕಿಗೆ ಬಂದಿದೆ.
  ತಕ್ಷಣ ಮೂವರನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದಾಗ ತಾವುಗಳು ಎಂಡಿಎಂಎ ಎಂಬ ಮಾದಕ ದ್ರವ್ಯವನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡುವ ಉದ್ದೇಶದಿಂದ ಸಾಗಿಸುತ್ತಿರುವುದಾಗಿ ಆರೋಪಿಗಳು ಒಪ್ಪಿಕೊಂಡಿದ್ದಾರೆ,
  ಆರೋಪಿಗಳ ಬಳಿ ಹಾಗೂ ಕಾರಿನಲ್ಲಿ ಸುಮಾರು 7.64 ಲಕ್ಷ ರೂಪಾಯಿ ಮೌಲ್ಯದ ಒಟ್ಟು 76 ಗ್ರಾಂ. 40 ಮಿಲಿಗ್ರಾಂ ಎಂಡಿಎಂಎ ಮಾದಕವಸ್ತು ಹಾಗೂ ಮಾದಕ ವಸ್ತು ಸೇವನೆ ಮಾಡಲು ಉಪಯೋಗಿಸುವ ಸಾಧನ, 3 ಮೊಬೈಲ್  ಹಾಗೂ ಕೃತ್ಯಕ್ಕೆ ಬಳಸಿದ ಕಾರನ್ನು ಪೊಲೀಸರು ಸ್ವಾಧೀನ ಪಡಿಸಿಕೊಂಡಿದ್ದಾರೆ.

ಈ ಬಗ್ಗೆ ಬಂಟ್ವಾಳ ನಗರ ಠಾಣೆಯಲ್ಲಿ ಕೇಸು ದಾಖಲಾಗಿದೆ‌. 

Leave a comment

Your email address will not be published. Required fields are marked *

eMedia Kannada  @2025. All Rights Reserved.