ಕರಂದಾಡಿ: ಹಳೆ ವಿದ್ಯಾರ್ಥಿ ಸಂಘದ ವತಿಯಿಂದ – ಕಾಪು ಪುರಸಭಾಧ್ಯಕ್ಷರಿಗೆ ಗೌರವ ಸನ್ಮಾನ
(Majuru) ಮಜೂರು; ಇತ್ತೀಚೆಗೆ ಕಾಪು ಪುರಸಭೆ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀ ರಾಮ ಹಿರಿಯ ಪ್ರಾಥಮಿಕ ಶಾಲೆ, ಮಜೂರು – ಕರಂದಾಡಿ ಇದರ ಹಳೆವಿದ್ಯಾರ್ಥಿ ಸಂಘದ ಕ್ರೀಡಾ ಕಾರ್ಯದರ್ಶಿ ಮೋಹಿನಿ ಶೆಟ್ಟಿ ಗುಜ್ಜಿ – ಮಲ್ಲಾರು ಇವರಿಗೆ ಹಳೇ ವಿದ್ಯಾರ್ಥಿ ಸಂಘದ ವತಿಯಿಂದ ಗೌರವಿಸಿ ಸನ್ಮಾನಿಸಲಾಯಿತು.
ನಮ್ಮ ಶಾಲೆಯ ಹೆಮ್ಮೆಯ ಹಳೆ ವಿದ್ಯಾರ್ಥಿ ಕಾಪು ಪುರಸಭೆಯ ನೂತನ ಅಧ್ಯಕ್ಷೆಯ ಜವಾಬ್ದಾರಿಯನ್ನು ಲಭಿಸಿರುವುದು ನಮಗೆಲ್ಲರಿಗೂ ಅಭಿಮಾನವಾಗಿದೆ ಎಂದು ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕೆ. ವಾಸುದೇವ ರಾವ್ ಹೇಳಿದರು.
ಈ ಸಂದರ್ಭದಲ್ಲಿ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಪಿ. ರವಿರಾಜ್ ಶೆಟ್ಟಿ ಪಂಜಿತ್ತೂರು, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಕೆ. ಪದ್ಮನಾಭ ಶಾನುಭಾಗ್, ನಿವೃತ್ತ ಮುಖ್ಯೋಪಾಧ್ಯಾಯ ನಿರ್ಮಲ್ ಕುಮಾರ್ ಹೆಗ್ಡೆ, ಶಾಲಾ ಶಿಕ್ಷಕರಾದ ಸತ್ಯವತಿ, ಪ್ರಕಾಶ್, ಹಳೆ ವಿದ್ಯಾರ್ಥಿ ಸಂಘದ ಕೋಶಾಧಿಕಾರಿ ನಾಗಭೂಷಣ ರಾವ್ ಹಾಗೂ ಹಳೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಹಳೆ ವಿದ್ಯಾರ್ಥಿ ಸಂಘ ಪ್ರಧಾನ ಕಾರ್ಯದರ್ಶಿ ಎಂ.ಕೆ. ಇಬ್ರಾಹಿಂ ಕರಂದಾಡಿ ಸ್ವಾಗತಿಸಿ, ದನ್ಯವಾದ ಸಲ್ಲಿಸಿದರು.

