• Home  
  • “ಯಶೋ ಮಾಧ್ಯಮ-2026” ಪ್ರಶಸ್ತಿಗೆ ಸುಬ್ರಮಣ್ಯ.ಜಿ ಕುರ್ಯ ಆಯ್ಕೆ (Subramanya.G. Kurya selected for “Yasho Madhyamik-2026” award)
- ಸಂಘ, ಸಂಸ್ಥೆಗಳು

“ಯಶೋ ಮಾಧ್ಯಮ-2026” ಪ್ರಶಸ್ತಿಗೆ ಸುಬ್ರಮಣ್ಯ.ಜಿ ಕುರ್ಯ ಆಯ್ಕೆ (Subramanya.G. Kurya selected for “Yasho Madhyamik-2026” award)

Share: “ಯಶೋ ಮಾಧ್ಯಮ-2026″ ಪ್ರಶಸ್ತಿಗೆ ಸುಬ್ರಮಣ್ಯ.ಜಿ ಕುರ್ಯ ಆಯ್ಕೆ ಕಲ್ಯಾಣಪುರ ಹಿಂದೂ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿರುವ ಸನ್ಮಾನ   (Benagaluru) ಬೆಂಗಳೂರು: ಬೆಂಗಳೂರು ರಾಜಾಜಿನಗರದ ಸ್ಪಂದನ ಸೇವಾ ಸಂಸ್ಥೆ ವತಿಯಿಂದ ಪ್ರತಿ ವರ್ಷದಂತೆ ಉಡುಪಿ ಜಿಲ್ಲೆಯ ಒಬ್ಬ ಪತ್ರಕರ್ತರಿಗೆ ನೀಡುವ “ಯಶೋ ಮಾಧ್ಯಮ” ಪ್ರಶಸ್ತಿಯನ್ನು ಈ ಬಾರಿ ಉಡುಪಿ ಜಿಲ್ಲಾ ಪತ್ರಕರ್ತರ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಹಾಗೂ ವಿಜಯ ಕರ್ನಾಟಕ ಉಡುಪಿ ಜಿಲ್ಲಾ ವರದಿಗಾರ ಸುಬ್ರಮಣ್ಯ. ಜಿ ಕುರ್ಯ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಸ್ಪಂದನಾ […]

ಕಲ್ಯಾಣಪುರ ಹಿಂದೂ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿರುವ ಸನ್ಮಾನ

  (Benagaluru) ಬೆಂಗಳೂರು: ಬೆಂಗಳೂರು ರಾಜಾಜಿನಗರದ ಸ್ಪಂದನ ಸೇವಾ ಸಂಸ್ಥೆ ವತಿಯಿಂದ ಪ್ರತಿ ವರ್ಷದಂತೆ ಉಡುಪಿ ಜಿಲ್ಲೆಯ ಒಬ್ಬ ಪತ್ರಕರ್ತರಿಗೆ ನೀಡುವ “ಯಶೋ ಮಾಧ್ಯಮ” ಪ್ರಶಸ್ತಿಯನ್ನು ಈ ಬಾರಿ ಉಡುಪಿ ಜಿಲ್ಲಾ ಪತ್ರಕರ್ತರ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಹಾಗೂ ವಿಜಯ ಕರ್ನಾಟಕ ಉಡುಪಿ ಜಿಲ್ಲಾ ವರದಿಗಾರ ಸುಬ್ರಮಣ್ಯ. ಜಿ ಕುರ್ಯ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಸ್ಪಂದನಾ ಸೇವಾ ಸಂಸ್ಥೆಯ ಖಜಾಂಚಿ ರಜನಿ.ವಿ. ಪೈ ಹೇಳಿದರು.

 ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದಿನಾಂಕ ಜೂನ್‌ 15 ರಸೋಮವಾರ ಬೆಳಿಗ್ಗೆ 10 ಗಂಟೆಗೆ ಉಡುಪಿ ಕಲ್ಯಾಣಪುರದ ಹಿಂದೂ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ಉಚಿತ ಪುಸ್ತಕ ವಿತರಣಾ ಸಮಾರಂಭದಲ್ಲಿ “ಯಶೋ ಮಾಧ್ಯಮ-2026” ಪ್ರಶಸ್ತಿಯನ್ನು ವಿತರಿಸಲಾಗುವುದು ಎಂದು ಹೇಳಿದರು.

ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.

  ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಹರಿರಾಮ್ ಶಂಕರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.

  ಮುಖ್ಯ ಅತಿಥಿಗಳಾಗಿ ಪತ್ರಕರ್ತರಾದ ಜನಾರ್ದನ್ ಕೊಡವೂರು, ಕಲ್ಯಾಣಪುರ ಶ್ರೀವೆಂಕಟರಮಣ ದೇವಸ್ಥಾನದ ಆಡಳಿತ ಮೊಕ್ತೇಸರ ರಾಮರಾಯ್ ಕಿಣಿ, ಹಿಂದೂ ಹಿರಿಯ ಪ್ರಾಥಮಿಕ ಶಾಲೆಯ ಆಡಳಿತಾಧಿಕಾರಿ ಸುಬ್ರಮಣ್ಯ ಕಾರಂತ್, ಉದ್ಯಾನವನ ವಿನ್ಯಾಸಗಾರರಾದ ಲೋಕೇಶ್ ಪೂಜಾರಿ, ಮಣಿಪಾಲ ಕಾಲೇಜ್ ಆಫ್ ನರ್ಸಿಂಗ್ ನ ಸಹಾಯಕ ಪ್ರಾಧ್ಯಾಪಕ ಡಾ. ಮರಿಯಾ ಪಾಯಸ್, ಸ್ಪಂದನಾ ಸೇವಾ ಸಂಸ್ಥೆಯ ಖಜಾಂಚಿ ಶ್ರೀಮತಿ ರಜನಿ ವಿ.ಪೈ, ಕಾರ್ಯದರ್ಶಿ ಸಂತೋಷ್ ಕಾಮತ್ ಉಪಸ್ಥಿತರಿರುವರು.

   ಕಲ್ಯಾಣಪುರ ಶ್ರೀವೆಂಕಟರಮಣ ದೇವಸ್ಥಾನಕ್ಕೆ ನೂತನವಾಗಿ ಆಯ್ಕೆಯಾದ ಆಡಳಿತ ಮಂಡಳಿಯವರನ್ನು ಸ್ಪಂದನಾ ಸೇವಾ ಸಂಸ್ಥೆಯಿಂದ ಗೌರವಿಸಲಾಗುವುದು ಎಂದು ರಜನಿ.ವಿ. ಪೈ ಹೇಳಿದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.