• Home  
  • ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಕೇಂದ್ರ ವಿತ್ತ ಸಚಿವೆ ನಿರ್ಮಲ ಸೀತಾರಾಮನ್ ಭೇಟಿ (Union Finance Minister Nirmala Sitharaman visits Uchila Sri Mahalakshmi Temple)‌
- ಧಾರ್ಮಿಕ

ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಕೇಂದ್ರ ವಿತ್ತ ಸಚಿವೆ ನಿರ್ಮಲ ಸೀತಾರಾಮನ್ ಭೇಟಿ (Union Finance Minister Nirmala Sitharaman visits Uchila Sri Mahalakshmi Temple)‌

Share: ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಕೇಂದ್ರ ವಿತ್ತ ಸಚಿವೆ ನಿರ್ಮಲ ಸೀತಾರಾಮನ್ ಭೇಟಿ ದೇವಳದ ಆವರಣದಲ್ಲಿ ಸಸಿ ನೆಟ್ಟ ಸಚಿವೆ ನಿರ್ಮಲಾ ಸೀತಾರಾಮನ್ (Uchila) ಉಚ್ಚಿಲ : ಮೊಗವೀರ ಮಹಾಜನ ಸಂಘ ಸಂಚಾಲಿತ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಶನಿವಾರ ಬೆಳಿಗ್ಗೆ ಕೇಂದ್ರ ವಿತ್ತ ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮನ್  ಭೇಟಿ ನೀಡಿದರು.   ದೇವಸ್ಥಾನದ ವತಿಯಿಂದ ಸಚಿವೆ ನಿರ್ಮಲಾ ಸೀತಾರಾಮನ್ ರವರಿಗೆ ಪೂರ್ಣ ಕುಂಭ ಸ್ವಾಗತ ನೀಡಲಾಯಿತು. ಸಮಿತಿಯ ಮಹಿಳಾ ಸದಸ್ಯರು ಕಳಶ ದೊಂದಿಗೆ ಸಚಿವರನ್ನು […]

(Uchila) ಉಚ್ಚಿಲ : ಮೊಗವೀರ ಮಹಾಜನ ಸಂಘ ಸಂಚಾಲಿತ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಶನಿವಾರ ಬೆಳಿಗ್ಗೆ ಕೇಂದ್ರ ವಿತ್ತ ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮನ್  ಭೇಟಿ ನೀಡಿದರು.

  ದೇವಸ್ಥಾನದ ವತಿಯಿಂದ ಸಚಿವೆ ನಿರ್ಮಲಾ ಸೀತಾರಾಮನ್ ರವರಿಗೆ ಪೂರ್ಣ ಕುಂಭ ಸ್ವಾಗತ ನೀಡಲಾಯಿತು. ಸಮಿತಿಯ ಮಹಿಳಾ ಸದಸ್ಯರು ಕಳಶ ದೊಂದಿಗೆ ಸಚಿವರನ್ನು ಸ್ವಾಗತಿಸಿದರು.

  ದೇವಳದ ಪ್ರಧಾನ ಅರ್ಚಕ ಕೆ. ವಿ. ರಾಘವೇಂದ್ರ ಉಪಾಧ್ಯಾಯರವರು ಶ್ರೀ ಮಹಾಲಕ್ಷ್ಮಿಗೆ ವಿಶೇಷ ಪೂಜೆ ಸಲ್ಲಿಸಿ ಪ್ರಸಾದ ವಿತರಿಸಿದರು.

ದಕ್ಷಿಣಕನ್ನಡ ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ ಕೋಟ್ಯಾನ್ ಬೆಳ್ಳಂಪಳ್ಳಿಯವರು ಸಚಿವೆ ನಿರ್ಮಲಾ ಸೀತಾರಾಮನ್  ರವರನ್ನು ದೇವಳದ ವತಿಯಿಂದ ಸನ್ಮಾನಿಸಿದರು.

ನಿರ್ಮಲಾ ಸೀತಾರಾಮನ್‌ ರವರು ದೇವಳದ ಆವರಣದಲ್ಲಿ ಸಸಿಯೊಂದನ್ನು ನೆಟ್ಟು ವನಮಹೋತ್ಸವ ಆಚರಿಸಿದರು.

ಈ ಸಂದರ್ಭ  ದೇವಳದ ಆಡಳಿತ ಮಂಡಳಿ ಅಧ್ಯಕ್ಷ ಗಿರಿಧರ್ ಸುವರ್ಣ, ಪ್ರಧಾನ ಕಾರ್ಯದರ್ಶಿ ಶರಣ್ ಕುಮಾರ್ ಮಟ್ಟು, ಶಾಸಕರಾದ ಗುರ್ಮೆ ಸುರೇಶ್‌ ಶೆಟ್ಟಿ, ಯಶ್ಪಾಲ್‌ ಸುವರ್ಣ, ಆಡಳಿತ ಮಂಡಳಿ ಸದಸ್ಯರಾದ  ನಾರಾಯಣ ಸಿ. ಕರ್ಕೇರ, ಮೋಹನ್ ಬಂಗೇರ ಕಾಪು,  ಯಾದವ್ ವಿ.ಕೆ, ಸತೀಶ್ ಸಾಲ್ಯಾನ್, ದಿನೇಶ್ ಎರ್ಮಾಳ್, ಮನೋಜ್ ಕಾಂಚನ್, ಸುಜಿತ್ ಕುಮಾರ್ ಕಾಪು, ಶಾಂಭವಿ ಕುಲಾಲ್, ಸಾವಿತ್ರಿ, ಆಶಾ ಮನೋಹರ್, ಶುಭ ಯೋಗೇಶ್, ದೇವಳದ ಪ್ರಧಾನ ಪ್ರಬಂಧಕ ಸತೀಶ್‌  ಮತ್ತಿತರರು ಉಪಸ್ಥಿತರಿದ್ದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.