ಕಾಪು ಶ್ರೀ ಹೊಸ ಮಾರಿಗುಡಿಗೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ
ನಿರ್ಮಲಾ ಸೀತಾರಾಮನ್ ರವರಿಗೆ ರಕ್ಷಾ ರೂಪದಲ್ಲಿ ದೇವಿಯ ಸೀರೆ ಪ್ರಸಾದವಾಗಿ ನೀಡಿದ ಆಡಳಿತ ಮಂಡಳಿ
(Kaup) ಕಾಪು : ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಶನಿವಾರ ಕಾಪು ಶ್ರೀ ಹೊಸ ಮಾರಿಗುಡಿಗೆ ಭೇಟಿ ನೀಡಿ, ಉಚ್ಚಂಗಿ ಸಹಿತ ಮಾರಿಯಮ್ಮ ದೇವಿಯ ದರುಶನ ಪಡೆದರು.
ಶ್ರೀ ಹೊಸ ಮಾರಿಗುಡಿಯ ಪ್ರಧಾನ ತಂತ್ರಿ ಕುಮಾರಗುರು ತಂತ್ರಿ ಕೊರಂಗ್ರಪಾಡಿ, ಪ್ರಧಾನ ಅರ್ಚಕ ವೇದಮೂರ್ತಿ ಶ್ರೀನಿವಾಸ ತಂತ್ರಿ ಕಲ್ಯ ಅವರು ಮಾರಿಯಮ್ಮನಿಗೆ ವಿಶೇಷ ಪುಜೆ ಸಲ್ಲಿಸಿ ಪ್ರಸಾದ ನೀಡಿದರು.
ರಕ್ಷಾ ರೂಪದಲ್ಲಿ ದೇವಿಯ ಸೀರೆಯನ್ನು ಪ್ರಸಾದವಾಗಿ ನೀಡಲಾಯಿತು. ಮಾರಿಗುಡಿಯ ವತಿಯಿಂದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಹೊಸ ಮಾರಿಗುಡಿ ವತಿಯಿಂದ ಸನ್ಮಾನಿಸಲಾಯಿತು.
ಈ ಸಂದರ್ಭ ಕಾಪು ಶಾಸಕ ಮತ್ತು ಅಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷ ಗುರ್ಮೆ ಸುರೇಶ್ ಶೆಟ್ಟಿ, ಉಡುಪಿ ಶಾಸಕ ಯಶಪಾಲ್ ಸುವರ್ಣ, ಶ್ರೀ ಹೊಸ ಮಾರಿಗುಡಿ ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಡಿಕೆರೆ ರತ್ನಾಕರ ಶೆಟ್ಟಿ, ಕಾರ್ಯನಿರ್ವಹಣಾಧಿಕಾರಿ ರವಿಕಿರಣ್, ವ್ಯವಸ್ಥಪನಾ ಸಮಿತಿಯ ಮಾಜಿ ಅಧ್ಯಕ್ಷ ರಮೇಶ್ ಹೆಗ್ಡೆ ಕಲ್ಯ, ಸದಸ್ಯರಾದ ಶೇಖರ ಸಾಲ್ಯಾನ್, ರವೀಂದ್ರ ಮಲ್ಲಾರು, ಜಯಲಕ್ಷ್ಮೀ ಎಸ್. ಶೆಟ್ಟಿ, ಚರಿತಾ ದೇವಾಡಿಗ, ಬಿಜೆಪಿ ಮುಖಂಡರಾದ ಶಿಲ್ಪಾ ಜಿ. ಸುವರ್ಣ, ಗೀತಾಂಜಲಿ ಎಂ. ಸುವರ್ಣ, ಜೆಡಿಎಸ್ ಮುಖಂಡ ಜಯರಾಮ ಆಚಾರ್ಯ, ಪ್ರಬಂಧಕ ಗೋವರ್ಧನ್ ಸೇರಿಗಾರ್ ಮತ್ತಿತರರು ಉಪಸ್ಥಿತರಿದ್ದರು.

