• Home  
  • ಉಚ್ಚಿಲ ಸರಸ್ವತಿ ಮಂದಿರ ಶಾಲೆಯಲ್ಲಿ ಮಾದಕ ದ್ರವ್ಯ, ಬಳಕೆ ವಿರೋಧಿ ಜಾಗೃತಿ ಅಭಿಯಾನ (Anti-drug abuse awareness campaign at Uchilla Saraswati Mandir School)
- ಶಾಲಾ ಕಾಲೇಜು

ಉಚ್ಚಿಲ ಸರಸ್ವತಿ ಮಂದಿರ ಶಾಲೆಯಲ್ಲಿ ಮಾದಕ ದ್ರವ್ಯ, ಬಳಕೆ ವಿರೋಧಿ ಜಾಗೃತಿ ಅಭಿಯಾನ (Anti-drug abuse awareness campaign at Uchilla Saraswati Mandir School)

Share: ಉಚ್ಚಿಲ ಸರಸ್ವತಿ ಮಂದಿರ ಶಾಲೆಯಲ್ಲಿ ಮಾದಕ ದ್ರವ್ಯ, ಬಳಕೆ ವಿರೋಧಿ ಜಾಗೃತಿ ಅಭಿಯಾನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಮುಖ್ಯೋಪಾಧ್ಯಾಯ ಬಾಬುರಾಯ ಆಚಾರ್ಯ  (Uchila) ಉಚ್ಚಿಲ: ಉಚ್ಚಿಲ ಸರಸ್ವತಿ ಮಂದಿರ ಶಾಲೆಯಲ್ಲಿ ಮಾದಕ ಅಂತರಾಷ್ಟ್ರೀಯ ಮಾದಕ ದ್ರವ್ಯ ಬಳಕೆ ವಿರೋಧಿ ದಿನ ಹಾಗೂ ವಿಶ್ವ ತಂಬಾಕು ರಹಿತ ದಿನ ಜಾಗೃತಿ ಅಭಿಯಾನ ಕಾರ್ಯಕ್ರಮ ನೆರವೇರಿತು. ಪಡುಬಿದ್ರಿ ಪೊಲೀಸ್ ಠಾಣೆಯ ಎಎಸ್ಐ ಅನಿಲ್ ಕುಮಾರ್ ಟಿ ನಾಯಕ್ ಮುಖ್ಯ ಅತಿಥಿಯಾಗಿ ಆಗಮಿಸಿ, ಮಾದಕ ದ್ರವ್ಯ ಸೇವಿಸುವುದರಿಂದ ಆಗುವ ಅನಾಹುತಗಳ ಬಗ್ಗೆ […]

 (Uchila) ಉಚ್ಚಿಲ: ಉಚ್ಚಿಲ ಸರಸ್ವತಿ ಮಂದಿರ ಶಾಲೆಯಲ್ಲಿ ಮಾದಕ ಅಂತರಾಷ್ಟ್ರೀಯ ಮಾದಕ ದ್ರವ್ಯ ಬಳಕೆ ವಿರೋಧಿ ದಿನ ಹಾಗೂ ವಿಶ್ವ ತಂಬಾಕು ರಹಿತ ದಿನ ಜಾಗೃತಿ ಅಭಿಯಾನ ಕಾರ್ಯಕ್ರಮ ನೆರವೇರಿತು.

ಪಡುಬಿದ್ರಿ ಪೊಲೀಸ್ ಠಾಣೆಯ ಎಎಸ್ಐ ಅನಿಲ್ ಕುಮಾರ್ ಟಿ ನಾಯಕ್ ಮುಖ್ಯ ಅತಿಥಿಯಾಗಿ ಆಗಮಿಸಿ, ಮಾದಕ ದ್ರವ್ಯ ಸೇವಿಸುವುದರಿಂದ ಆಗುವ ಅನಾಹುತಗಳ ಬಗ್ಗೆ ಹಾಗೂ ತಂಬಾಕುಗಳ ಪರಿಣಾಮದ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.

  ಪಡುಬಿದ್ರಿ ಠಾಣಾ ಸಿಬ್ಬಂದಿ ಶ್ರೀಮತಿ ರುಕ್ಮಿಣಿಯವರು ಪೋಕ್ಸೋ ಕಾಯ್ದೆ ಬಗ್ಗೆ ಮಾಹಿತಿ ನೀಡಿದರು.

ಮುಖ್ಯ ಅತಿಥಿ ಹಾಗೂ ಪಡುಬಿದ್ರಿ ರೋಟರಿ ಕ್ಲಬ್ಬಿನ ಅಧ್ಯಕ್ಷರಾದ ರೋಟೇರಿಯನ್ ಸುನಿಲ್ ಕುಮಾರ್ ಮಾತನಾಡಿ, ಇಂದು ವಿದ್ಯಾರ್ಥಿಗಳು ಎದುರಿಸುತ್ತಿರುವ ಆಹಾರ ಸಮಸ್ಯೆಗಳು ಹಾಗೂ ಮಾದಕ ದ್ರವ್ಯಗಳ ಬಗ್ಗೆ ಸಮಯೋಚಿತವಾಗಿ ಮಾತನಾಡಿದರು.

ಸರಸ್ವತಿ ಮಂದಿರ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಬಾಬುರಾಯ ಆಚಾರ್ಯರವರು ಅಧ್ಯಕ್ಷತೆ ವಹಿಸಿದ್ದರು.

  ಶಾಲಾ ವಿದ್ಯಾರ್ಥಿ ನಾಯಕಿ ಶಹಮ ಹಾಗೂ ರೋಟರಿ ಕಾರ್ಯದರ್ಶಿ ಪವನ್ ಸಾಲಿಯನ್ ಉಪಸ್ಥಿತರಿದ್ದರು.

 ಬಾಬುರಾಯ ಆಚಾರ್ಯರವರು ವಿಶ್ವ ತಂಬಾಕು ರಹಿತ ದಿನದ ಪ್ರತಿಜ್ಞಾ ವಿಧಿ ಬೋಧಿಸಿದರು.

  ಶ್ರೀಮತಿ ಮಮತಾ ನಿರೂಪಿಸಿದರು. ವಿಜಯಲಕ್ಷ್ಮಿ ವಂದಿಸಿದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.