• Home  
  • ಮಜೂರು : ಗಾಳಿ ಮಳೆಗೆ ಮನೆಗೆ ಮರ ಬಿದ್ದು ಹಾನಿ (Mazur: Tree falls on house due to wind and rain, causing damage)
- PROBLEMS

ಮಜೂರು : ಗಾಳಿ ಮಳೆಗೆ ಮನೆಗೆ ಮರ ಬಿದ್ದು ಹಾನಿ (Mazur: Tree falls on house due to wind and rain, causing damage)

Share: ಮಜೂರು : ಗಾಳಿ ಮಳೆಗೆ ಮನೆಗೆ ಮರ ಬಿದ್ದು ಹಾನಿ ಘಟನಾ ಸ್ಥಳಕ್ಕೆ ಭೇಟಿ ನೀಡಿದ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಮಜೂರು ಗ್ರಾಮ ಪಂಚಾಯತ್ ಅಧಿಕಾರಿಗಳು (Kaup) ಕಾಪು : ಸೋಮವಾರ ರಾತ್ರಿ ಸುರಿದ ಗಾಳಿ ಮಳೆಗೆ ಮಜೂರು ಗ್ರಾಮದ ಉಳಿಯಾರು ದೇವಳ ಬಳಿಯ ಪುಷ್ಪಾ ನಾರಾಯಣ ಮೂಲ್ಯರ ಮನೆಗೆ ಮರ ಬಿದ್ದು ಲಕ್ಷಾಂತರ ರೂಪಾಯಿ ಹಾನಿ ಸಂಭವಿಸಿದೆ.    ಭಾರೀ ಗಾಳಿ ಮಳೆಗೆ ಮನೆಯ ಮೇಲೆ ಅಶ್ವತ್ಥ ಮರ ಹಾಗೂ 2 […]

ಘಟನಾ ಸ್ಥಳಕ್ಕೆ ಭೇಟಿ ನೀಡಿದ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಮಜೂರು ಗ್ರಾಮ ಪಂಚಾಯತ್ ಅಧಿಕಾರಿಗಳು

(Kaup) ಕಾಪು : ಸೋಮವಾರ ರಾತ್ರಿ ಸುರಿದ ಗಾಳಿ ಮಳೆಗೆ ಮಜೂರು ಗ್ರಾಮದ ಉಳಿಯಾರು ದೇವಳ ಬಳಿಯ ಪುಷ್ಪಾ ನಾರಾಯಣ ಮೂಲ್ಯರ ಮನೆಗೆ ಮರ ಬಿದ್ದು ಲಕ್ಷಾಂತರ ರೂಪಾಯಿ ಹಾನಿ ಸಂಭವಿಸಿದೆ.

   ಭಾರೀ ಗಾಳಿ ಮಳೆಗೆ ಮನೆಯ ಮೇಲೆ ಅಶ್ವತ್ಥ ಮರ ಹಾಗೂ 2 ತೆಂಗಿನ ಮರ ಬಿದ್ದಿದೆ. ಮನೆಯ ಗೋಡೆ, ಮೆಟ್ಟಿಲುಗಳಿಗೆ ಹಾನಿಯಾಗಿದೆ. ಅದೃಷ್ಟವಶಾತ್ ಈ ಸಂದರ್ಭ ಯಾವುದೇ ಸಾವು, ನೋವು ಸಂಭವಿಸಿಲ್ಲ.  

  ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಸಹಿತ ಮಜೂರು ಗ್ರಾಮ ಪಂಚಾಯತ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

Leave a comment

Your email address will not be published. Required fields are marked *

eMedia Kannada  @2025. All Rights Reserved.