Share: ಕಲ್ಯಾಣ್ ಲೋಕಸಭಾ ಕ್ಷೇತ್ರದ ಸಂಸದ ಡಾ. ಶ್ರೀಕಾಂತ್ ಶಿಂಧೆ ಕಾಪು ಶ್ರೀ ಹೊಸ ಮಾರಿಗುಡಿಗೆ ಭೇಟಿ (Kalyan Lok Sabha MP Dr. Shrikant Shinde visits Kapu Sri Hosa Marigudi) ಕಲ್ಯಾಣ್ ಲೋಕಸಭಾ ಕ್ಷೇತ್ರದ ಸಂಸದ ಡಾ. ಶ್ರೀಕಾಂತ್ ಶಿಂಧೆ ಕಾಪು ಶ್ರೀ ಹೊಸ ಮಾರಿಗುಡಿಗೆ ಭೇಟಿ ವ್ಯವಸ್ಥಾಪನ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ವತಿಯಿಂದ ಗೌರವ (Kaup) ಕಾಪು: ಮಹಾರಾಷ್ಟ್ರದ ಹಾಲಿ ಉಪಮುಖ್ಯಮಂತ್ರಿ ಹಾಗೂ ಮಾಜಿ ಮುಖ್ಯಮಂತ್ರಿ  ಏಕನಾಥ್ ಶಿಂಧೆ ಅವರ […]

ಕಲ್ಯಾಣ್ ಲೋಕಸಭಾ ಕ್ಷೇತ್ರದ ಸಂಸದ ಡಾ. ಶ್ರೀಕಾಂತ್ ಶಿಂಧೆ ಕಾಪು ಶ್ರೀ ಹೊಸ ಮಾರಿಗುಡಿಗೆ ಭೇಟಿ

(Kaup) ಕಾಪು: ಮಹಾರಾಷ್ಟ್ರದ ಹಾಲಿ ಉಪಮುಖ್ಯಮಂತ್ರಿ ಹಾಗೂ ಮಾಜಿ ಮುಖ್ಯಮಂತ್ರಿ  ಏಕನಾಥ್ ಶಿಂಧೆ ಅವರ ಪುತ್ರ ಕಲ್ಯಾಣ್ ಲೋಕಸಭಾ ಕ್ಷೇತ್ರದ ಸಂಸದ ಡಾ. ಶ್ರೀಕಾಂತ್ ಶಿಂಧೆಯ ಕಾಪು ಶ್ರೀ ಹೊಸ ಮಾರಿಗುಡಿಗೆ ಭೇಟಿ ನೀಡಿ ಉಚ್ಚಂಗಿ ಸಹಿತ ಮಾರಿಯಮ್ಮ ದೇವಿಯ ದರುಶನ ಪಡೆದರು.

   ಮಾರಿಗುಡಿಯ ಪ್ರಧಾನ ಅರ್ಚಕರಾದ ವೇದಮೂರ್ತಿ ಶ್ರೀನಿವಾಸ ತಂತ್ರಿ ಕಲ್ಯ ಅವರು ಮಾರಿ ಅಮ್ಮನ ಅನುಗ್ರಹ ಪ್ರಸಾದ ನೀಡಿದರು.

 ವ್ಯವಸ್ಥಾಪನ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ವತಿಯಿಂದ ಡಾ. ಶ್ರೀಕಾಂತ್ ಶಿಂಧೆಯವರನ್ನು ಗೌರವಿಸಲಾಯಿತು.

  ಈ ಸಂದರ್ಭ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ, ಪ್ರಬಂಧಕ ಗೋವರ್ಧನ್ ಸೇರಿಗಾರ ಮತ್ತು ಸಿಬ್ಬಂದಿ ಲಕ್ಷ್ಮಣ್ ಶೆಟ್ಟಿ ಮಂಡೇಡಿ ಹಾಗೂ ಮಾರಿಯಮ್ಮನ ಭಕ್ತಾಧಿಗಳು ಉಪಸ್ಥಿತರಿದ್ದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.