• Home  
  • ಭೋವಿ ಜನಾಂಗಕ್ಕೆ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ನಿರಾಕರಣೆ : ಪವನ್ ಕುಮಾರ್ ಶಿರ್ವ (Denial of Scheduled Caste Certificate for Bhovi race : Pawan Kumar Shirva)
- PROBLEMS

ಭೋವಿ ಜನಾಂಗಕ್ಕೆ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ನಿರಾಕರಣೆ : ಪವನ್ ಕುಮಾರ್ ಶಿರ್ವ (Denial of Scheduled Caste Certificate for Bhovi race : Pawan Kumar Shirva)

Share: ಭೋವಿ ಜನಾಂಗಕ್ಕೆ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ನಿರಾಕರಣೆ : ಪವನ್ ಕುಮಾರ್ ಶಿರ್ವ   ಉಡುಪಿ – ದಕ ಜಿಲ್ಲಾಡಳಿತದ ವಿರುದ್ಧ ಹೋರಾಟದ ಎಚ್ಚರಿಕೆ    (Kaup) ಕಾಪು: ಭೋವಿ ಜನಾಂಗದವರಿಗೆ ಪರಿಶಿಷ್ಟ ಜಾತಿ (ಎಸ್‌ಸಿ) ಪ್ರಮಾಣ ಪತ್ರ ನೀಡಲು ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾಡಳಿತ ನಿರಾಕರಿಸುತ್ತಿರುವ ಧೋರಣೆಯನ್ನು ಖಂಡಿಸಿ, ಸಮಸ್ಯೆ ಬಗೆಹರಿಯುವವರೆಗೆ ಅಹೋರಾತ್ರಿ ಪ್ರತಿಭಟನೆ ನಡೆಸುವುದಾಗಿ ಸಾಮಾಜಿಕ ಕಾರ್ಯಕರ್ತ ಪವನ್ ಕುಮಾರ್ ಶಿರ್ವ ಎಚ್ಚರಿಕೆ ನೀಡಿದರು.   ಕಾಪು ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ನಡೆದ […]

 (Kaup) ಕಾಪು: ಭೋವಿ ಜನಾಂಗದವರಿಗೆ ಪರಿಶಿಷ್ಟ ಜಾತಿ (ಎಸ್‌ಸಿ) ಪ್ರಮಾಣ ಪತ್ರ ನೀಡಲು ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾಡಳಿತ ನಿರಾಕರಿಸುತ್ತಿರುವ ಧೋರಣೆಯನ್ನು ಖಂಡಿಸಿ, ಸಮಸ್ಯೆ ಬಗೆಹರಿಯುವವರೆಗೆ ಅಹೋರಾತ್ರಿ ಪ್ರತಿಭಟನೆ ನಡೆಸುವುದಾಗಿ ಸಾಮಾಜಿಕ ಕಾರ್ಯಕರ್ತ ಪವನ್ ಕುಮಾರ್ ಶಿರ್ವ ಎಚ್ಚರಿಕೆ ನೀಡಿದರು.

  ಕಾಪು ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುಮಾರು 70 ಸಾವಿರಕ್ಕೂ ಅಧಿಕ ಭೋವಿ ಜನಾಂಗದವರು ವಾಸಿಸುತ್ತಿದ್ದು, ಪರಿಶಿಷ್ಟ ಜಾತಿ ಪ್ರಮಾಣ ಪತ್ರ ನೀಡಲು ಅಧಿಕಾರಿಗಳು ಹಿಂದೇಟು ಹಾಕುತ್ತಿರುವುದರಿಂದ ಶಾಲೆ ಮತ್ತು ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಸರ್ಕಾರದ ವಿವಿಧ ಸೌಲಭ್ಯಗಳಿಂದ ವಂಚಿತರಾಗುತ್ತಿದ್ದಾರೆ ಎಂದು ಆರೋಪಿಸಿದರು.

   ಅನೇಕ ಕುಟುಂಬಗಳಲ್ಲಿ ತಂದೆಗೆ ಪರಿಶಿಷ್ಟ ಜಾತಿ ಪ್ರಮಾಣ ಪತ್ರವಿದ್ದರೆ, ಮಕ್ಕಳಿಗೆ ಪ್ರವರ್ಗ 1 ಎಂದು ಜಾತಿ ಪ್ರಮಾಣ ಪತ್ರ ನೀಡುತ್ತಿರುವುದು ಗೊಂದಲಕ್ಕೆ ಕಾರಣವಾಗಿದೆ. ಇದರಿಂದ ವಿದ್ಯಾರ್ಥಿಗಳ ಶಿಕ್ಷಣ, ವಿದ್ಯಾರ್ಥಿವೇತನ, ಮೀಸಲಾತಿ ಸೇರಿದಂತೆ ವಿವಿಧ ಸರ್ಕಾರಿ ಸೌಲಭ್ಯಗಳನ್ನು ಪಡೆಯಲು ತೊಂದರೆಯಾಗುತ್ತಿದೆ ಎಂದು ಅವರು ತಿಳಿಸಿದರು.

  ಭೋವಿ ಜನಾಂಗಕ್ಕೆ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ನೀಡುವ ಕುರಿತು ಹೈಕೋರ್ಟ್ ಆದೇಶವಿದ್ದರೂ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾಡಳಿತ ಅದನ್ನು ಸಮರ್ಪಕವಾಗಿ ಜಾರಿಗೊಳಿಸುತ್ತಿಲ್ಲ ಎಂದು ಆರೋಪಿಸಿದ ಅವರು, ತಕ್ಷಣ ಸಮಸ್ಯೆ ಬಗೆಹರಿಸಿ ಅರ್ಹರಿಗೆ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ನೀಡಬೇಕು ಎಂದು ಆಗ್ರಹಿಸಿದರು.

  ಸಮಸ್ಯೆಗೆ ಶೀಘ್ರ ಪರಿಹಾರ ದೊರೆಯದಿದ್ದಲ್ಲಿ ಜಿಲ್ಲಾಡಳಿತದ ವಿರುದ್ಧ ಉಗ್ರ ಹಾಗೂ ಅಹೋರಾತ್ರಿ ಪ್ರತಿಭಟನೆ ಹಮ್ಮಿಕೊಳ್ಳುವುದಾಗಿ ಪವನ್ ಕುಮಾರ್ ಶಿರ್ವ ಎಚ್ಚರಿಕೆ ನೀಡಿದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.