• Home  
  • ಅಯೋಧ್ಯೆ ಶ್ರೀರಾಮ ಮಂದಿರದಲ್ಲಿ ಹಣದ ದುರ್ಬಳಕೆ: ಕಾಪುವಿನಲ್ಲಿ ಕಾಂಗ್ರೆಸ್‌ ಬೃಹತ್ ಜಾಥಾ, ಪ್ರತಿಭಟನಾ ಸಭೆ (Misuse of money in Ayodhya Shri Ram temple: Congress holds huge rally, protest meeting in Kapu)
- ರಾಜಕೀಯ

ಅಯೋಧ್ಯೆ ಶ್ರೀರಾಮ ಮಂದಿರದಲ್ಲಿ ಹಣದ ದುರ್ಬಳಕೆ: ಕಾಪುವಿನಲ್ಲಿ ಕಾಂಗ್ರೆಸ್‌ ಬೃಹತ್ ಜಾಥಾ, ಪ್ರತಿಭಟನಾ ಸಭೆ (Misuse of money in Ayodhya Shri Ram temple: Congress holds huge rally, protest meeting in Kapu)

Share: ಅಯೋಧ್ಯೆ ಶ್ರೀರಾಮ ಮಂದಿರದಲ್ಲಿ ಹಣದ ದುರ್ಬಳಕೆ: ಕಾಪುವಿನಲ್ಲಿ ಕಾಂಗ್ರೆಸ್‌ ಬೃಹತ್ ಜಾಥಾ, ಪ್ರತಿಭಟನಾ ಸಭೆ  ಕೆಪಿಸಿಸಿ ಪ್ರಚಾರ ಸಮಿತಿ ರಾಜ್ಯಾಧ್ಯಕ್ಷ, ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ನೇತೃತ್ವದಲ್ಲಿ ನಡೆದ ಪ್ರತಿಭಟನೆ (Kaup) ಕಾಪು : ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಹುಂಡಿ ಹಣದ ದುರ್ಬಳಕೆ ನಡೆದಿದೆ ಎಂದು ಆರೋಪಿಸಿ, ಸಂಬಂಧಪಟ್ಟ ಟ್ರಸ್ಟಿಗಳು, ಸಿಬ್ಬಂದಿ ಹಾಗೂ ಪರೋಕ್ಷವಾಗಿ ಸಹಕರಿಸಿದವರ ವಿರುದ್ಧ ಸ್ವತಂತ್ರ ತನಿಖೆ ನಡೆಸಿ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿ […]

(Kaup) ಕಾಪು : ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಹುಂಡಿ ಹಣದ ದುರ್ಬಳಕೆ ನಡೆದಿದೆ ಎಂದು ಆರೋಪಿಸಿ, ಸಂಬಂಧಪಟ್ಟ ಟ್ರಸ್ಟಿಗಳು, ಸಿಬ್ಬಂದಿ ಹಾಗೂ ಪರೋಕ್ಷವಾಗಿ ಸಹಕರಿಸಿದವರ ವಿರುದ್ಧ ಸ್ವತಂತ್ರ ತನಿಖೆ ನಡೆಸಿ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಮಂಗಳವಾರ ಸಂಜೆ ಕಾಪುವಿನಲ್ಲಿ ಬೃಹತ್ ಪ್ರತಿಭಟನಾ ಜಾಥಾ ಮತ್ತು ಸಭೆ ನಡೆಯಿತು.

   ಕೆಪಿಸಿಸಿ ಪ್ರಚಾರ ಸಮಿತಿ ರಾಜ್ಯಾಧ್ಯಕ್ಷ, ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ನೇತೃತ್ವದಲ್ಲಿ ಸಾವಿರಕ್ಕೂ ಅಧಿಕ ಕಾಂಗ್ರೆಸ್ ಕಾರ್ಯಕರ್ತರು ಪೊಲೀಸ್ ವೃತ್ತ ನಿರೀಕ್ಷಕರ ಕಚೇರಿ ಮುಂಭಾಗದಿಂದ ಕಾಪು  ಪೇಟೆಯವರೆಗೆ ರಾಮ ದೇವರ ಭಜನೆ ಮತ್ತು ದೊಂದಿ ಬೆಳಕಿನ ಪ್ರದರ್ಶನದೊಂದಿಗೆ ಮೆರವಣಿಗೆ ನಡೆಸಿದರು.

  ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಆಡಳಿತ ಮೊಕ್ತೇಸರ ನಡಿಕೆರೆ ರತ್ನಾಕರ ಶೆಟ್ಟಿ ಮೆರವಣಿಗೆಗೆ ಚಾಲನೆ ನೀಡಿದರು.

  ಕೆಪಿಸಿಸಿ ಪ್ರಚಾರ ಸಮಿತಿ ರಾಜ್ಯಾಧ್ಯಕ್ಷ, ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ವಾಗ್ಮಿಗಳಾದ ಲಕ್ಷ್ಮೀಶ ಉಬ್ಬರಡ್ಕ, ಸುಧೀರ್ ಕುಮಾರ್ ಮುರೊಳ್ಳಿ ದಿಕ್ಸೂಚಿ ಭಾಷಣ ಮಾಡಿದರು.

  ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಕಾಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವೈ. ಸುಕುಮಾರ್, ಪಕ್ಷದ ಮುಖಂಡರಾದ ಕಾಪು ದಿವಾಕರ ಶೆಟ್ಟಿ, ನವೀನ್ ಚಂದ್ರ ಶೆಟ್ಟಿ, ನವೀನ್ ಚಂದ್ರ ಸುವರ್ಣ, ಶಿವಾಜಿ‌ ಸುವರ್ಣ, ಪ್ರಶಾಂತ್ ಜತ್ತನ್ನ, ನವೀನ್ ಎನ್.‌ ಶೆಟ್ಟಿ, ಸರಸು ಡಿ. ಬಂಗೇರ, ರಾಜೇಶ್ ರಾವ್ ಪಾಂಗಾಳ, ಸುನೀಲ್ ಬಂಗೇರ, ವಿಕ್ರಂ ಕಾಪು, ಅಬ್ದುಲ್ ಅಜೀಜ್, ಶಾಂತಲತಾ ಶೆಟ್ಟಿ, ಮಹಮ್ಮದ್ ನಿಯಾಝ್  ಪುರಸಭೆ ಸದಸ್ಯರು, ಮಾಜಿ ಜನಪ್ರತಿನಿಧಿಗಳು, ಪಕ್ಷದ ವಿವಿಧ ಘಟಕಗಳ ಪದಾಧಿಕಾರಿಗಳು ಪಾಲ್ಗೊಂಡಿದ್ದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.