• Home  
  • ಬಂಟ್ವಾಳ: ಚಲಿಸುತ್ತಿದ್ದ ಶಾಲಾ ಬಸ್ ಮೇಲೆ ಬೃಹತ್ ಮರ ಉರುಳಿ ಬಿದ್ದು ದುರಂತ (Bantwal: Tragedy as a huge tree falls on a moving school bus)
- ಅಪಘಾತ

ಬಂಟ್ವಾಳ: ಚಲಿಸುತ್ತಿದ್ದ ಶಾಲಾ ಬಸ್ ಮೇಲೆ ಬೃಹತ್ ಮರ ಉರುಳಿ ಬಿದ್ದು ದುರಂತ (Bantwal: Tragedy as a huge tree falls on a moving school bus)

Share: ಬಂಟ್ವಾಳ: ಚಲಿಸುತ್ತಿದ್ದ ಶಾಲಾ ಬಸ್ ಮೇಲೆ ಬೃಹತ್ ಮರ ಉರುಳಿ ಬಿದ್ದು ದುರಂತ  ಎಲ್ ಕೆಜಿ ಬಾಲಕಿ ಮೃತ್ಯು, ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ (Bantwala) ಬಂಟ್ವಾಳ: ತಾಲೂಕಿನ ಬರಿಮಾರು ಗ್ರಾಮದ ಕಲ್ಲೆಟ್ಟಿ ದೈವಸ್ಥಾನದ ಬಳಿ ಮಂಗಳವಾರ ಸಂಜೆ ಚಲಿಸುತ್ತಿದ್ದ ಶಾಲಾ ಬಸ್ ಮೇಲೆ ಬೃಹತ್ ಗಾತ್ರದ ಮರ ಉರುಳಿ ಬಿದ್ದ ಪರಿಣಾಮ 5 ರ ಹರೆಯದ ಹೆಣ್ಣು ಮಗು ಮೃತ ಪಟ್ಟರೆ, ಇಬ್ಬರು ವಿದ್ಯಾರ್ಥಿನಿಯರ ಸಹಿತ ಚಾಲಕ  ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.    ಬಿಳಿಯೂರಿನ […]

(Bantwala) ಬಂಟ್ವಾಳ: ತಾಲೂಕಿನ ಬರಿಮಾರು ಗ್ರಾಮದ ಕಲ್ಲೆಟ್ಟಿ ದೈವಸ್ಥಾನದ ಬಳಿ ಮಂಗಳವಾರ ಸಂಜೆ ಚಲಿಸುತ್ತಿದ್ದ ಶಾಲಾ ಬಸ್ ಮೇಲೆ ಬೃಹತ್ ಗಾತ್ರದ ಮರ ಉರುಳಿ ಬಿದ್ದ ಪರಿಣಾಮ 5 ರ ಹರೆಯದ ಹೆಣ್ಣು ಮಗು ಮೃತ ಪಟ್ಟರೆ, ಇಬ್ಬರು ವಿದ್ಯಾರ್ಥಿನಿಯರ ಸಹಿತ ಚಾಲಕ  ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

   ಬಿಳಿಯೂರಿನ ತೋಟ ನಿವಾಸಿ ನಿವಾಸಿ ಚಂದ್ರಹಾಸ್ ಅವರ ಪುತ್ರಿ, ಎಲ್ ಕೆಜಿ ವಿದ್ಯಾರ್ಥಿನಿ ಚಿರಣ್ವಿ (5) ಮೃತಪಟ್ಟ ದುರ್ದೈವಿ ಬಾಲಕಿಯಾಗಿದ್ದು,

ಪೆರಾಜೆ ಸಾದಿಕುಕ್ಕು ನಿವಾಸಿ ಗಣೇಶ್ ಗೌಡ ಅವರ ಪುತ್ರಿ ಅನ್ವಿ,ಪೆರ್ನೆ ನಿವಾಸಿ  ಕ್ಷಿತಿ ರೈ ಹಾಗು ಬಸ್ ಚಾಲಕ ಗಾಯಗೊಂಡಿದ್ದು, ಗಂಭೀರ ಸ್ವರೂಪದ ಗಾಯಗೊಂಡಿರುವ ಅನ್ವಿಯನ್ನು ತಕ್ಷಣ ಮಂಗಳೂರಿನ ಎ.ಜೆ. ಆಸ್ಪತ್ರೆಗೆ ದಾಖಲಿಸಲಾಗಿದ್ದರೆ, ಗಾಯಾಳು ಕ್ಷಿತಿ ರೈ ಹಾಗೂ ಬಸ್ ಚಾಲಕ ಕಲ್ಲಡ್ಕದ ಪುಷ್ಪರಾಜರವರಿಗೆ ಆಸ್ಪತ್ರೆಯಲ್ಲಿಚಿಕಿತ್ಸೆ ಕೊಡಿಸಲಾಗುತ್ತಿದೆ.

  ಘಟನೆಯಿಂದ ತೀವ್ರ ಗಾಯಗೊಂಡಿದ್ದ ಬಾಲಕಿ ಚಿರಣ್ವಿಯನ್ನು ತಕ್ಷಣವೇ ಆಸ್ಪತ್ರೆಗೆ ರವಾನಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾಳೆಂದು  ತಿಳಿದು ಬಂದಿದೆ.

  ಸಂಜೆ ಕಲ್ಲಡ್ಕ ಶಾಲೆಯಿಂದ ಶಾಲಾ ಮಕ್ಕಳನ್ನು  ಕರೆದುಕೊಂಡು  ಮಾಣಿ, ಅಲ್ಲಿಂದ ಬರಣಿಕೆರೆ, ಬರಿಮಾರು, ಕಲ್ಲೆಟ್ಟಿ ಮಾರ್ಗವಾಗಿ ಬುಡೋಳಿ ಮೂಲಕ ಪೆರ್ನೆಗೆ ತೆರಳುತ್ತಿದ್ದ ಶಾಲಾ ಬಸ್ ಮೇಲೆ, ಕಲ್ಲಟ್ಟಿ ದೈವಸ್ಥಾನದ ರಸ್ತೆ ಬದಿಯಲ್ಲಿದ್ದ ಬೃಹತ್ ಮರ ಏಕಾಏಕಿ ಬುಡ ಸಮೇತ ಉರುಳಿ ಬಿದ್ದಿದೆ.

  ಈ ಸಂದರ್ಭ ಮಳೆಯೊಂದಿಗೆ ಬೀಸಿದ ಬಿರುಗಾಳಿಯ ತೀವ್ರತೆಗೆ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ.

  ಮರ ಬಿದ್ದ ರಭಸಕ್ಕೆ ಬಸ್ನ ಮೇಲ್ಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಹಠಾತ್ ನಡೆದ ಈ ಘಟನೆಯಿಂದ ಬಸ್ನೊಳಗೆ ಆತಂಕದ ವಾತಾವರಣ ನಿರ್ಮಾಣವಾಯಿತು.

  ಸ್ಥಳೀಯರು ಕೂಡಲೇ ಧಾವಿಸಿ ಎಲ್ಲಾ    ಬಸ್ಸಿನೊಳಗಿಂದ ವಿದ್ಯಾರ್ಥಿಗಳನ್ನು ಹೊರತೆಗೆದು ಆಸ್ಪತ್ರೆಗೆ ಸಾಗಿಸಲು ನೆರವಾದರು.

  ಇದೇ ವೇಳೆ ಕಲ್ಲೆಟ್ಟಿ ದೇವಸ್ಥಾನದ ಮೇಲೂ  ಮರ ಉರುಳಿ ಬಿದ್ದಿದ್ದು, ದೇವಸ್ಥಾನಕ್ಕೆ ಕೂಡ ಹಾನಿಯಾಗಿದೆ.ಘಟನೆಯಿಂದಾಗಿ ಪರಿಸರದಲ್ಲಿ ವಿದ್ಯುತ್ ಸಂಪರ್ಕ ಹಾಗೂ ಸಂಚಾರಕ್ಕೂ ಅಡಚಣೆ ಉಂಟಾಗಿತ್ತು.

   ಸುದ್ದಿ ತಿಳಿದ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

  ಮರ ತೆರವುಗೊಳಿಸಿ ಸಂಚಾರ ಸುಗಮಗೊಳಿಸುವ ಕಾರ್ಯ ನಡೆಯುತ್ತಿದ್ದು, ಬಾಲಕಿಯ ದುರಂತ ಸಾವು ಶಾಲಾ ಆಡಳಿತ ಮಂಡಳಿ, ಶಿಕ್ಷಕರು ಹಾಗೂ ಇಡೀ ಪರಿಸರ  ತೀವ್ರ ಶೋಕದ ವಾತಾವರಣವನ್ನು ಸೃಷ್ಟಿಸಿದೆ.

 ಜಿಲ್ಲಾಧಿಕಾರಿ ಭೇಟಿ:

   ಸುದ್ದಿ ತಿಳಿದ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ. ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿಪರಿಶೀಲನೆ ನಡೆಸಿದರು.

   ಈ ಸಂದರ್ಭ ಬಂಟ್ವಾಳ ತಹಶೀಲ್ದಾರ್ ಮಂಜುನಾಥ್, ಸ್ಥಳೀಯ ಕಂದಾಯಾಧಿಕಾರಿಗಳು ಹಿರಿಯ ಪೊಲೀಸ್ ಅಧಿಕಾರಿಗಳು ಕೂಡ ಭೇಟಿ ನೀಡಿ ಸ್ಥಳೀಯರಿಂದ ಮಾಹಿತಿ ಪಡೆದರು.

   ಶಾಸಕ  ನಾಯ್ಕ್ ತುರ್ತು ಸ್ಪಂದನೆ:

   ಅಗತ್ಯದ ಕೆಲಸದ ನಿಮಿತ್ತ ಬೆಂಗಳೂರಿನಲ್ಲಿದ್ದ  ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಮಾಹಿತಿ ತಿಳಿಯುತ್ತಿದ್ದಂತೆ ಅಧಿಕಾರಿಗಳು ಹಾಗೂ ವೈದ್ಯರನ್ನು ಸಂಪರ್ಕಿಸಿ ಗಾಯಾಳು ಮಕ್ಕಳಿಗೆ ತುರ್ತು ಚಿಕಿತ್ಸೆ ದೊರೆಯುವಂತೆ ಸೂಚಿಸಿದರು.

   ಗಂಭೀರವಾಗಿ ಗಾಯಗೊಂಡಿರುವ ಅನ್ವಿಗೆ ಮಂಗಳೂರಿನ ಎ.ಜೆ. ಆಸ್ಪತ್ರೆಯಲ್ಲಿ ಅಗತ್ಯ ವೈದ್ಯಕೀಯ ಸೌಲಭ್ಯ ಕಲ್ಪಿಸಲು ಆಸ್ಪತ್ರೆಯ ವೈದ್ಯರೊಂದಿಗೆ ನೇರವಾಗಿ ಸಮಾಲೋಚನೆ ನಡೆಸಿದ ಶಾಸಕರು, ಚಿಕಿತ್ಸೆಯಲ್ಲಿ ಯಾವುದೇ ವಿಳಂಬವಾಗದಂತೆ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.

   ಸಚಿವ ಯು. ಟಿ. ಖಾದರ್, ಮಾಜಿ ಬಿ. ರಮಾನಾಥ ರೈ ಅವರು ಘಟನೆಯ ಬಗ್ಗೆ ದಿಗ್ಬ್ರಮೆ ವ್ಯಕ್ತಪಡಿಸಿದ್ದು, ಮೃತ ಬಾಲಕಿಯ ಕುಟುಂಬಕ್ಕೆ ಸಂತಾಪ ಸೂಚಿಸಿದ್ದಾರೆ.

Leave a comment

Your email address will not be published. Required fields are marked *

eMedia Kannada  @2025. All Rights Reserved.