• Home  
  • ಆ.1. ಉಚ್ಚಿಲದಲ್ಲಿ ಕಾಪು ಕಸಾಪ ದಿಂದ ಪ್ರತಿಭಾ ಪುರಸ್ಕಾರ – ಅಭಿನಂದನಾ ಸಮಾರಂಭ (August 1. Talent Award from Kaup Kasapa in Uchilla – Congratulatory Ceremony)
- ಸಂಘ, ಸಂಸ್ಥೆಗಳು - ಸನ್ಮಾನ, ಅಭಿನಂದನೆ - ಸಹಾಯ ಹಸ್ತ

ಆ.1. ಉಚ್ಚಿಲದಲ್ಲಿ ಕಾಪು ಕಸಾಪ ದಿಂದ ಪ್ರತಿಭಾ ಪುರಸ್ಕಾರ – ಅಭಿನಂದನಾ ಸಮಾರಂಭ (August 1. Talent Award from Kaup Kasapa in Uchilla – Congratulatory Ceremony)

Share: ಆ.1. ಉಚ್ಚಿಲದಲ್ಲಿ ಕಾಪು ಕಸಾಪ ದಿಂದ ಪ್ರತಿಭಾ ಪುರಸ್ಕಾರ – ಅಭಿನಂದನಾ ಸಮಾರಂಭ   ಉಚ್ಚಿಲ ಮಹಾಲಕ್ಷ್ಮೀ ಆಂಗ್ಲ ಮಾಧ್ಯಮ ಶಾಲಾ ಸಭಾಂಗಣದಲ್ಲಿ ನಡೆಯಲಿರುವ ಕಾರ್ಯಕ್ರಮ   (Uchila) ಉಚ್ಚಿಲ: ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕಾಪು ತಾಲೂಕು ಘಟಕದ ವತಿಯಿಂದ 2025- 26ನೇ ಶೈಕ್ಷಣಿಕ ಸಾಲಿನಲ್ಲಿ ಕಾಪು ತಾಲೂಕು ವ್ಯಾಪ್ತಿಯ ಎಸ್‌ಎಸ್‌ಎಲ್‌ ಸಿ ಮತ್ತು ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಕನ್ನಡ ಭಾಷಾ ಪಾಠದಲ್ಲಿ ಪೂರ್ಣ ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಹಾಗೂ ರಾಜ್ಯ ಮಟ್ಟದಲ್ಲಿ ರ್ಯಾಂಕ್‌ ಗಳಿಸಿದ […]

  (Uchila) ಉಚ್ಚಿಲ: ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕಾಪು ತಾಲೂಕು ಘಟಕದ ವತಿಯಿಂದ 2025- 26ನೇ ಶೈಕ್ಷಣಿಕ ಸಾಲಿನಲ್ಲಿ ಕಾಪು ತಾಲೂಕು ವ್ಯಾಪ್ತಿಯ ಎಸ್‌ಎಸ್‌ಎಲ್‌ ಸಿ ಮತ್ತು ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಕನ್ನಡ ಭಾಷಾ ಪಾಠದಲ್ಲಿ ಪೂರ್ಣ ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಹಾಗೂ ರಾಜ್ಯ ಮಟ್ಟದಲ್ಲಿ ರ್ಯಾಂಕ್‌ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ಅಭಿನಂದನಾ ಕಾರ್ಯಕ್ರಮ ಆಗಸ್ಟ್ 1 ಶನಿವಾರ ಉಚ್ಚಿಲ ಮಹಾಲಕ್ಷ್ಮೀ ಆಂಗ್ಲ ಮಾಧ್ಯಮ ಶಾಲಾ ಸಭಾಂಗಣದಲ್ಲಿ ಬೆಳಿಗ್ಗೆ 11 ಗಂಟೆಗೆ ಜರಗಲಿದೆ.

  ಕಾರ್ಯಕ್ರಮವನ್ನು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಉದ್ಘಾಟಿಸಲಿದ್ದು, ಕಸಾಪ ಉಡುಪಿ ಜಿಲ್ಲಾ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಆಶಯ ನುಡಿಗಳನ್ನಾಡುವರು.

    ಮುಖ್ಯ ಅತಿಥಿಗಳಾಗಿ ಉಡುಪಿ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಡಾ. ಎಲ್ಲಮ್ಮ, ದಕ್ಷಿಣ ಕನ್ನಡ ಮೊಗವೀರ ಹಿತಸಾಧನಾ ವೇದಿಕೆ ಉಚ್ಚಿಲ ಇದರ ಅಧ್ಯಕ್ಷ ಸತೀಶ್ ಆರ್ ಸಾಲಿಯಾನ್, ಮಹಾಲಕ್ಷ್ಮೀ ಆಂಗ್ಲ ಮಾಧ್ಯಮ ಶಾಲಾ ಸಂಚಾಲಕರಾದ ಗಂಗಾಧರ ಎಚ್, ಮುಖ್ಯೋಪಾಧ್ಯಾಯಿನಿ ಶ್ರೀಮತಿ ನವ್ಯಾ , ಕಸಾಪ ಜಿಲ್ಲಾ ಗೌರವ ಕಾರ್ಯದರ್ಶಿ ಸುಬ್ರಹ್ಮಣ್ಯ ಶೆಟ್ಟಿ, ಜಿಲ್ಲಾ ಗೌರವ ಕೋಶಾಧ್ಯಕ್ಷರಾದ ಮನೋಹರ ಪಿ, ಜಿಲ್ಲಾ ಪ್ರತಿನಿಧಿ ಕಟ್ಟಿಂಗೇರಿ ದೇವದಾಸ್ ಹೆಬ್ಬಾರ್ ಭಾಗವಹಿಸುವರು. ಎಂದು ಕಾಪು ತಾಲೂಕು ಕಸಾಪ ಅಧ್ಯಕ್ಷ ಬಿ. ಪುಂಡಲೀಕ ಮರಾಠೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a comment

Your email address will not be published. Required fields are marked *

eMedia Kannada  @2025. All Rights Reserved.