• Home  
  • ಸೋದೆ ಸಮೂಹ ಶಿಕ್ಷಣ ಸಂಸ್ಥೆಗಳಲ್ಲಿ ಸ್ವಾತಂತ್ರ್ಯ  ದಿನಾಚರಣೆ (Independence Day celebrations at Sode Group Educational Institutions)
- ಶಾಲಾ ಕಾಲೇಜು

ಸೋದೆ ಸಮೂಹ ಶಿಕ್ಷಣ ಸಂಸ್ಥೆಗಳಲ್ಲಿ ಸ್ವಾತಂತ್ರ್ಯ  ದಿನಾಚರಣೆ (Independence Day celebrations at Sode Group Educational Institutions)

Share: ಸೋದೆ ಸಮೂಹ ಶಿಕ್ಷಣ ಸಂಸ್ಥೆಗಳಲ್ಲಿ ಸ್ವಾತಂತ್ರ್ಯ  ದಿನಾಚರಣೆ  ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಬಲಿದಾನವನ್ನು ಸ್ಮರಿಸಿದ ಶಿಕ್ಷಣ ಸಂಸ್ಥೆ (Bantakal) ಬಂಟಕಲ್ : ಬಂಟಕಲ್ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯ, ನಿರಾಮಯ ಇನ್ಸಿಟ್ಯೂಟ್‌ ಆಫ್ ಹೆಲ್ತ್ ಸೈನ್ಸಸ್, ಇನ್ನಂಜೆ ಎಸ್ ವಿ ಎಚ್ ಪಿ ಯು ಕಾಲೇಜು ಮತ್ತು ಎಸ್ ವಿ ಎಸ್ ಆಂಗ್ಲ ಮಾಧ್ಯಮ ನರ್ಸರಿ ಮತ್ತು ಹಿರಿಯ ಪ್ರಾಥಮಿಕ ಶಾಲೆ, ಎಸ್ ವಿ ಎಚ್ ಆಂಗ್ಲ ಮಾಧ್ಯಮ ಪ್ರೌಢಶಾಲೆ ಮತ್ತು ಕಡಿಯಾಳಿ ಆಂಗ್ಲ […]

(Bantakal) ಬಂಟಕಲ್ : ಬಂಟಕಲ್ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯ, ನಿರಾಮಯ ಇನ್ಸಿಟ್ಯೂಟ್‌ ಆಫ್ ಹೆಲ್ತ್ ಸೈನ್ಸಸ್, ಇನ್ನಂಜೆ ಎಸ್ ವಿ ಎಚ್ ಪಿ ಯು ಕಾಲೇಜು ಮತ್ತು ಎಸ್ ವಿ ಎಸ್ ಆಂಗ್ಲ ಮಾಧ್ಯಮ ನರ್ಸರಿ ಮತ್ತು ಹಿರಿಯ ಪ್ರಾಥಮಿಕ ಶಾಲೆ, ಎಸ್ ವಿ ಎಚ್ ಆಂಗ್ಲ ಮಾಧ್ಯಮ ಪ್ರೌಢಶಾಲೆ ಮತ್ತು ಕಡಿಯಾಳಿ ಆಂಗ್ಲ ಮಾಧ್ಯಮ ಶಾಲೆ ಒಳಗೊಂಡಂತೆ ಸೋದೆ ಸಮೂಹ ಸಂಸ್ಥೆಗಳಲ್ಲಿ ೮೦ನೇ ಸ್ವಾತಂತ್ರ್ಯ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು.

  ಬಂಟಕಲ್ ಕಾಲೇಜಿನ ಆವರಣದಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಮಣಿಪಾಲದ ಟ್ಯಾಪ್‌ ಮಿ ಸಂಸ್ಥೆಯ ಶೈಕ್ಷಣಿಕ ಡೀನ್ ಡಾ. ಗುರುರಾಜ್ ಕಿದಿಯೂರು ಮುಖ್ಯ ಅತಿಥಿಗಳಾಗಿ ಆಗಮಿಸಿ ಧ್ವಜಾರೋಹಣ ನೆರವೇರಿಸಿದರು.

  ಇವರು ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಬಲಿದಾನವನ್ನು ಸ್ಮರಿಸಿದರು.

   ಸೋದೆ ಸಮೂಹ ಶಿಕ್ಷಣ ಸಂಸ್ಥೆಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಡಾ. ರಾಧಾಕೃಷ್ಣ ಎಸ್ ಐತಾಳ್, ಸಂಸ್ಥೆಯ ಪ್ರಾಂಶುಪಾಲರಾದ ಡಾ. ನಾಗರಾಜ್ ಭಟ್, ನಿರಾಮಯ ಕಾಲೇಜ್ ಆಫ್ ನರ್ಸಿಂಗ್ ಮತ್ತು ಅಲೈಡ್ ಹೆಲ್ತ್ ಸೈನ್ಸ್ ಸಂಸ್ಥೆಯ ನಿರ್ದೇಶಕರಾದ ಡಾ. ನವೀನ್ ಬಲ್ಲಾಳ್, ನಿರಾಮಯ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ರೋಶನಿ ರೊಡ್ರಿಗಸ್, ಅಲೈಡ್ ಹೆಲ್ತ್ ಸೈನ್ಸಸ್ ಪ್ರಾಂಶುಪಾಲರಾದ ಶಿವಶಂಕರ್ ಪೈ ಮತ್ತು ಇಂಜಿನಿಯರಿಂಗ್ ಕಾಲೇಜಿನ ಡೀನ್‌ಗಳು ಉಪಸ್ಥಿತರಿದ್ದರು.

  ಇನ್ನಂಜೆ ವಿದ್ಯಾಸಂಸ್ಥೆಗಳಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಶ್ರೀ ಸೋದೆ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಗಳಾದ ರತ್ನಕುಮಾರ್ ರವರು ಧ್ವಜಾರೋಹಣವನ್ನು ನಡೆಸಿಕೊಟ್ಟರು.

   ಈ ಸಂದರ್ಭದಲ್ಲಿ ಭಾರತವನ್ನು ವಿಶ್ವದ ಶಕ್ತಿಶಾಲಿ ದೇಶವನ್ನಾಗಿ ರೂಪಿಸಲು ಪ್ರತಿಯೊಬ್ಬರು ಕಾರ್ಯಪ್ರವೃತ್ತರಾಗಬೇಕೆಂದು ತಿಳಿಸಿದರು.

   ಈ ಸಂದರ್ಭದಲ್ಲಿ ಇನ್ನಂಜೆ ವಿದ್ಯಾಸಂಸ್ಥೆಗಳ ಪ್ರಾಂಶುಪಾಲರು, ಅಧ್ಯಾಪಕರು, ಸಿಬ್ಬಂದಿಗಳು  ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.

  ಕಡಿಯಾಳಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಶ್ರೀ ಸೋದೆ ವಾದಿರಾಜ ಮಠ ಶಿಕ್ಷಣ ಪ್ರತಿಷ್ಠಾನದ  ಉಪಾಧ್ಯಕ್ಷರಾದ ಪಿ ಶ್ರೀನಿವಾಸ ತಂತ್ರಿಗಳು ಧ್ವಜಾರೋಹಣ ನಡೆಸಿಕೊಟ್ಟರು.

 ಇವರು ಸ್ವಾತಂತ್ರ್ಯ ದಿನಾಚರಣೆಯ ಮಹತ್ವ ಮತ್ತು ಯುವ ಜನತೆಯ ಜವಾಬ್ದಾರಿಯ ಬಗ್ಗೆ ತಿಳಿಸಿದರು.

   ಈ ಸಂದರ್ಭದಲ್ಲಿ ಶಾಲಾ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.

Leave a comment

Your email address will not be published. Required fields are marked *

eMedia Kannada  @2025. All Rights Reserved.