ಬಂಟಕಲ್ ತಾಂತ್ರಿಕ ಕಾಲೇಜಿನ ತೇಜಸ್ ನಾಯಕ್‌ಗೆ ಐಎಸ್‌ಟಿಇ “ಉತ್ತಮ ವಿದ್ಯಾರ್ಥಿ ಪ್ರಶಸ್ತಿ”
ಪ್ರಶಸ್ತಿಗೆ ಹರ್ಷ ವ್ಯಕ್ತಪಡಿಸಿದ ಆಡಳಿತ ಮಂಡಳಿ ಮತ್ತು ಪ್ರಾಂಶುಪಾಲರು
(Bantakal) ಬಂಟಕಲ್ : ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯ, ಬಂಟಕಲ್, ಉಡುಪಿ ಇಲ್ಲಿನ ಅಂತಿಮ ವರ್ಷದ ಗಣಕಯಂತ್ರ ವಿಭಾಗದ ವಿದ್ಯಾರ್ಥಿ ತೇಜಸ್ ನಾಯಕ್ ರವರು ಐಎಸ್‌ಟಿಇ ಕರ್ನಾಟಕ ರಾಜ್ಯ ವಿಭಾಗದ 2026 ನೇ ಸಾಲಿನ “ಉತ್ತಮ ವಿದ್ಯಾರ್ಥಿ ಪ್ರಶಸ್ತಿ”ಗೆ ಆಯ್ಕೆಯಾಗಿದ್ದಾರೆ.
ವಿದ್ಯಾರ್ಥಿಯು ಕಾಲೇಜಿನ ಐಎಸ್‌ಟಿಇ ವಿದ್ಯಾರ್ಥಿ ಘಟಕದಿಂದ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುವಲ್ಲಿ ಅತ್ಯಂತ ಸಕ್ರಿಯವಾಗಿ ತೊಡಗಿಸಿಕೊಂಡಿರುವುದನ್ನು ಪರಿಗಣಿಸಿ ಈ ಪ್ರಶಸ್ತಿಯನ್ನು ಕರ್ನಾಟಕ ಐಎಸ್‌ಟಿಇ ವತಿಯಿಂದ ನೀಡಲಾಗಿದೆ.
19 ಆಗಸ್ಟ್ (ಬುಧವಾರ) ರಂದು ಬೀದರ್‌ನ ಲಿಂಗರಾಜ ಅಪ್ಪ ಇಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದ 22ನೇ ಕರ್ನಾಟಕ ರಾಜ್ಯ ಮಟ್ಟದ ಐಎಸ್‌ಟಿಇ ವಿದ್ಯಾರ್ಥಿ ಸಮ್ಮೇಳನದಲ್ಲಿ ಈ ಪ್ರಶಸ್ತಿಯನ್ನು ನೀಡಲಾಯಿತು.
ಈ ಪ್ರಶಸ್ತಿಯು ತಮ್ಮ ವಿದ್ಯಾಸಂಸ್ಥೆಯ ವಿದ್ಯಾರ್ಥಿಗೆ ದೊರಕಿರುವುದಕ್ಕೆ ಆಡಳಿತ ಮಂಡಳಿ ಮತ್ತು ಪ್ರಾಂಶುಪಾಲರು ಹರ್ಷ ವ್ಯಕ್ತಪಡಿಸಿದ್ದಾರೆ.

