• Home  
  • ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿಯವರಿಗೆ  ಕುಂದಾಪುರ ಸರಕಾರಿ ಆಸ್ಪತ್ರೆಯ ವೈದ್ಯ  ಡಾ. ಮಹೇಂದ್ರ ಶೆಟ್ಟಿ ಹಲ್ಲೆ (Journalist Srikanth Hemmadi was attacked by Dr. Mahendra Shetty, a doctor at Kundapur Government Hospital).
- ಅಪರಾಧ

ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿಯವರಿಗೆ  ಕುಂದಾಪುರ ಸರಕಾರಿ ಆಸ್ಪತ್ರೆಯ ವೈದ್ಯ  ಡಾ. ಮಹೇಂದ್ರ ಶೆಟ್ಟಿ ಹಲ್ಲೆ (Journalist Srikanth Hemmadi was attacked by Dr. Mahendra Shetty, a doctor at Kundapur Government Hospital).

Share: ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿಯವರಿಗೆ  ಕುಂದಾಪುರ ಸರಕಾರಿ ಆಸ್ಪತ್ರೆಯ ವೈದ್ಯ  ಡಾ. ಮಹೇಂದ್ರ ಶೆಟ್ಟಿ ಹಲ್ಲೆ ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲು (Kundapura) ಕುಂದಾಪುರ : ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯ, ಕನ್ನಡಪ್ರಭ ವರದಿಗಾರ ಶ್ರೀಕಾಂತ್ ಹೆಮ್ಮಾಡಿ ಇವರ ಮೇಲೆ ಇಂದು ಬೆಳಗ್ಗೆ ಶೆರೋನ್ ಹೋಟೆಲ್ ಬಳಿ ಡಾ. ಮಹೇಂದ್ರ ಶೆಟ್ಟಿ ಅವರು ಹಲ್ಲೆ ಮಾಡಿದ್ದು, ಶ್ರೀಕಾಂತ್ ಅವರನ್ನು ಕುಂದಾಪುರ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.    ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಕ್ರಿಯ […]

(Kundapura) ಕುಂದಾಪುರ : ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯ, ಕನ್ನಡಪ್ರಭ ವರದಿಗಾರ ಶ್ರೀಕಾಂತ್ ಹೆಮ್ಮಾಡಿ ಇವರ ಮೇಲೆ ಇಂದು ಬೆಳಗ್ಗೆ ಶೆರೋನ್ ಹೋಟೆಲ್ ಬಳಿ ಡಾ. ಮಹೇಂದ್ರ ಶೆಟ್ಟಿ ಅವರು ಹಲ್ಲೆ ಮಾಡಿದ್ದು, ಶ್ರೀಕಾಂತ್ ಅವರನ್ನು ಕುಂದಾಪುರ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

   ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಕ್ರಿಯ ಸದಸ್ಯ ಹಾಗೂ ಕನ್ನಡಪ್ರಭ ಪತ್ರಿಕೆಯ ಕುಂದಾಪುರ ವರದಿಗಾರ ಶ್ರೀಕಾಂತ್ ಹೆಮ್ಮಾಡಿ ಮೇಲಿನ ಹಲ್ಲೆಯನ್ನು ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ತೀವ್ರವಾಗಿ ಖಂಡಿಸಿದೆ.

  ಕುಂದಾಪುರ ಸರಕಾರಿ ಆಸ್ಪತ್ರೆಯ ವರದಿಗೆ ಸಂಬಂಧಿಸಿ ಅಲ್ಲಿನ ವೈದ್ಯಾಧಿಕಾರಿಯಾಗಿದ್ದ ಡಾ. ಮಹೇಂದ್ರ ಶೆಟ್ಟಿ, ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಮೇಲೆ ಏಕಾಏಕಿ ಹಲ್ಲೆ ನಡೆಸಿದ್ದಾರೆ.

  ಈ ಪ್ರಕರಣವನ್ನು ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿ, ಆರೋಪಿ ವಿರುದ್ಧ ಕಠಿಣ ಕಾನೂನು ಕ್ರಮ ಜರಗಿಸಬೇಕು ಎಂದು ಕಾರ್ಯನಿರತ ಪತ್ರಕರ್ತರ ಸಂಘದಿಂದ ಆಗ್ರಹಿಸಿದ್ದಾರೆ.

  ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a comment

Your email address will not be published. Required fields are marked *

eMedia Kannada  @2025. All Rights Reserved.