• Home  
  • ಕ್ಷುಲ್ಲಕ ಜಗಳ : ಮಲ್ಪೆ ಪಡುಕೆರೆ ಬೋಟ್ ನಲ್ಲಿ ಕೊಲೆಯಲ್ಲಿ ಅಂತ್ಯ.(Petty fight: Malpe Padukere boat ends in murder)
- ಅಪರಾಧ - ಕರಾವಳಿ

ಕ್ಷುಲ್ಲಕ ಜಗಳ : ಮಲ್ಪೆ ಪಡುಕೆರೆ ಬೋಟ್ ನಲ್ಲಿ ಕೊಲೆಯಲ್ಲಿ ಅಂತ್ಯ.(Petty fight: Malpe Padukere boat ends in murder)

Share: ಕ್ಷುಲ್ಲಕ ಜಗಳ : ಮಲ್ಪೆ ಪಡುಕೆರೆ ಬೋಟ್ ನಲ್ಲಿ ಕೊಲೆಯಲ್ಲಿ ಅಂತ್ಯ. ಕೆಲವೇ ತಾಸುಗಳಲ್ಲಿ‌ ಆರೋಪಿಯನ್ನು ಬಂಧಿಸಿದ ಮಲ್ಪೆ ಪೊಲೀಸರು. (Malpe) ಮಲ್ಪೆ : ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕೊಡವೂರು ಗ್ರಾಮದ ಪಡುಕೆರೆ ದಕ್ಕೆಯಲ್ಲಿ ಮೀನುಗಾರಿಕಾ ಬೋಟ್‌ನಲ್ಲಿ ನಡೆದ ಗಲಾಟೆ ಬಳಿಕ ಅಭಿಷೇಕ್ ಎಂಬಾತನನ್ನು ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿಯನ್ನು ಮಲ್ಪೆ ಪೊಲೀಸರು ಬಂಧಿಸಿದ್ದಾರೆ.   ಆರೋಪಿಯನ್ನು ಗೋವಿಂದ ಎಂದು ಗುರುತಿಸಲಾಗಿದ್ದು, ಆಗಸ್ಟ್ 25ರ ಮುಂಜಾನೆ ಅಭಿಷೇಕ್‌ನನ್ನು ಕೊಲೆ ಮಾಡಿ ಸ್ಥಳದಿಂದ ಪರಾರಿಯಾಗಿದ್ದ ಎನ್ನಲಾಗಿದೆ. […]

(Malpe) ಮಲ್ಪೆ : ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕೊಡವೂರು ಗ್ರಾಮದ ಪಡುಕೆರೆ ದಕ್ಕೆಯಲ್ಲಿ ಮೀನುಗಾರಿಕಾ ಬೋಟ್‌ನಲ್ಲಿ ನಡೆದ ಗಲಾಟೆ ಬಳಿಕ ಅಭಿಷೇಕ್ ಎಂಬಾತನನ್ನು ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿಯನ್ನು ಮಲ್ಪೆ ಪೊಲೀಸರು ಬಂಧಿಸಿದ್ದಾರೆ.

  ಆರೋಪಿಯನ್ನು ಗೋವಿಂದ ಎಂದು ಗುರುತಿಸಲಾಗಿದ್ದು, ಆಗಸ್ಟ್ 25ರ ಮುಂಜಾನೆ ಅಭಿಷೇಕ್‌ನನ್ನು ಕೊಲೆ ಮಾಡಿ ಸ್ಥಳದಿಂದ ಪರಾರಿಯಾಗಿದ್ದ ಎನ್ನಲಾಗಿದೆ.

  ಆಗಸ್ಟ್ 24ರ ರಾತ್ರಿ ಬೋಟ್‌ನಲ್ಲಿ ಗೋವಿಂದ ಹಾಗೂ ಅಭಿಷೇಕ್ ನಡುವೆ ಗಲಾಟೆ ನಡೆದಿತ್ತು. ಬಳಿಕ ಗಲಾಟೆ ವಿಕೋಪಕ್ಕೆ ತಿರುಗಿ, ಮರುದಿನ ಬೆಳಗಿನ ಜಾವ ಗೋವಿಂದ ಅಭಿಷೇಕ್‌ನನ್ನು ಕೊಲೆ ಮಾಡಿ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

  ಮಾಹಿತಿ ಪಡೆದ ತಕ್ಷಣ ಮಲ್ಪೆ ಪೊಲೀಸ್ ಠಾಣೆಯ ಉಪನಿರೀಕ್ಷಕ (ಕಾ&ಸು) ಅನಿಲ್ ಕುಮಾರ್ ಡಿ. ಅವರು ಸಿಬ್ಬಂದಿಗಳಾದ ಹೆಚ್‌ಸಿ ಆದರ್ಶ ಹಾಗೂ ಪಿಸಿ ಕುಬೇರ ಅವರೊಂದಿಗೆ ಆರೋಪಿಯ ಪತ್ತೆಗೆ ಕಾರ್ಯಾಚರಣೆ ನಡೆಸಿದರು.

  ಉಡುಪಿಯ ರೈಲು ನಿಲ್ದಾಣದತ್ತ ತೆರಳಿದ್ದ ಪೊಲೀಸರಿಗೆ ಆರೋಪಿ ಗೋವಿಂದ ಹೈದರಾಬಾದ್ ಅಥವಾ ಮುಂಬೈಗೆ ತೆರಳಲು ರೈಲು ಹತ್ತಲು ಮುಂದಾಗಿದ್ದ ವೇಳೆ ಸಿಕ್ಕಿಬಿದ್ದಿದ್ದು, ಆತನನ್ನು ತಕ್ಷಣ ವಶಕ್ಕೆ ಪಡೆಯಲಾಗಿದೆ.

  ವಿಚಾರಣೆ ವೇಳೆ ಗೋವಿಂದ ಕಳೆದ ಸುಮಾರು 15 ವರ್ಷಗಳಿಂದ ಮನೆಗೆ ತೆರಳದೆ ಮುಂಬೈ, ಹೈದರಾಬಾದ್ ಸೇರಿದಂತೆ ವಿವಿಧೆಡೆಗಳಲ್ಲಿ ಕೆಲಸ ಮಾಡಿಕೊಂಡು ವಾಸಿಸುತ್ತಿದ್ದ ಎನ್ನುವುದು ತಿಳಿದುಬಂದಿದೆ.

  ಈ ಕುರಿತು ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಗೋವಿಂದನನ್ನು ವಶಕ್ಕೆ ಪಡೆಯಲಾಗಿದೆ.

Leave a comment

Your email address will not be published. Required fields are marked *

eMedia Kannada  @2025. All Rights Reserved.