• Home  
  • ಸೆಪ್ಟೆಂಬರ್ 4-6 :  ಜಗದೊಡೆಯ ಉಡುಪಿ ಶ್ರೀಕೃಷ್ಣನ ಜನ್ಮಾಷ್ಟಮಿ ಸಡಗರ (September 4-6 : Janmashtami Sadagara of Lord Krishna)
- fastival - ಧಾರ್ಮಿಕ

ಸೆಪ್ಟೆಂಬರ್ 4-6 :  ಜಗದೊಡೆಯ ಉಡುಪಿ ಶ್ರೀಕೃಷ್ಣನ ಜನ್ಮಾಷ್ಟಮಿ ಸಡಗರ (September 4-6 : Janmashtami Sadagara of Lord Krishna)

Share: ಸೆಪ್ಟೆಂಬರ್ 4-6 :  ಜಗದೊಡೆಯ ಉಡುಪಿ ಶ್ರೀಕೃಷ್ಣನ ಜನ್ಮಾಷ್ಟಮಿ ಸಡಗರ ಪರ್ಯಾಯ ಶಿರೂರು ಶ್ರೀ ವೇದವರ್ಧನ ತೀರ್ಥ ಶ್ರೀಗಳಿಂದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ (Udupi) ಜಗದೊಡೆಯ ಶ್ರೀಕೃಷ್ಣನ ಜನ್ಮಾಷ್ಟಮಿ ಅಂಗವಾಗಿ ಪರ್ಯಾಯ ಶಿರೂರು ಶ್ರೀ ವೇದವರ್ಧನ ತೀರ್ಥ ಶ್ರೀಗಳ ಆಯೋಜನೆಯಲ್ಲಿ ಉಡುಪಿಯಲ್ಲಿ ತಿಂಗಳಿಡೀ ನಡೆಯುತ್ತಿರುವ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸೆಪ್ಟೆಂಬರ್ 4 ರಿಂದ 6 ರವರೆಗೆ ವಿಶೇಷ ಮೆರುಗು ದೊರೆಯಲಿದೆ ಎಂದು ಪರ್ಯಾಯ ಶಿರೂರು ಶ್ರೀ ವೇದವರ್ಧನ ತೀರ್ಥ ಶ್ರೀಗಳು ಮಂಗಳವಾರ ಶ್ರೀ ಶೀರೂರು ಮಠದಲ್ಲಿ […]

(Udupi) ಜಗದೊಡೆಯ ಶ್ರೀಕೃಷ್ಣನ ಜನ್ಮಾಷ್ಟಮಿ ಅಂಗವಾಗಿ ಪರ್ಯಾಯ ಶಿರೂರು ಶ್ರೀ ವೇದವರ್ಧನ ತೀರ್ಥ ಶ್ರೀಗಳ ಆಯೋಜನೆಯಲ್ಲಿ ಉಡುಪಿಯಲ್ಲಿ ತಿಂಗಳಿಡೀ ನಡೆಯುತ್ತಿರುವ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸೆಪ್ಟೆಂಬರ್ 4 ರಿಂದ 6 ರವರೆಗೆ ವಿಶೇಷ ಮೆರುಗು ದೊರೆಯಲಿದೆ ಎಂದು ಪರ್ಯಾಯ ಶಿರೂರು ಶ್ರೀ ವೇದವರ್ಧನ ತೀರ್ಥ ಶ್ರೀಗಳು ಮಂಗಳವಾರ ಶ್ರೀ ಶೀರೂರು ಮಠದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

   ಸೆಪ್ಟೆಂಬರ್ 4ರ ರಾತ್ರಿ 12.12ಕ್ಕೆ ಶ್ರೀಕೃಷ್ಣನಿಗೆ ಅರ್ಘ್ಯ ಪ್ರದಾನ ನಡೆಯಲಿದ್ದು, ಸೆಪ್ಟೆಂಬರ್ 5ರಂದು ಬೆಳಗ್ಗೆ ಮಹಾಪೂಜೆ ಹಾಗೂ ಅನ್ನಸಂತರ್ಪಣೆ ನೆರವೇರಲಿದೆ. ಇದೇ ಸಂದರ್ಭದಲ್ಲಿ ರಾಜಾಂಗಣದಲ್ಲಿ ಹುಲಿವೇಷ ಕುಣಿತ ಸೇರಿದಂತೆ ವಿವಿಧ ಸ್ಪರ್ಧೆಗಳು ನಡೆಯಲಿವೆ.

  ಸೆಪ್ಟೆಂಬರ್ 5ರಂದು ಮಧ್ಯಾಹ್ನ 3.30ಕ್ಕೆ ಚಿನ್ನದ ರಥದಲ್ಲಿ ಶ್ರೀಕೃಷ್ಣನ ಮೃಣ್ಮಯ ಮೂರ್ತಿಯ ಮೆರವಣಿಗೆ ನಡೆಯಲಿದೆ. ವಿಟ್ಲಪಿಂಡಿ–ಶ್ರೀಕೃಷ್ಣಲೀಲೋತ್ಸವದ ಅಂಗವಾಗಿ ರಥಬೀದಿಯ ವಿಶೇಷ ವೇದಿಕೆಯಲ್ಲಿ ಆಹ್ವಾನಿತ ಮಲ್ಲಯುದ್ಧ ಪ್ರವೀಣರಿಂದ ‘ಮಲ್ಲಯುದ್ಧʼ ಪ್ರದರ್ಶನ ಆಯೋಜಿಸಲಾಗಿದೆ. ಉತ್ಸವದ ಪ್ರಮುಖ ಆಕರ್ಷಣೆಗಳಲ್ಲಿ ಇದೂ ಒಂದಾಗಲಿದೆ.

  ಅಷ್ಟಮಿ ವಿಟ್ಲಪಿಂಡಿ ಉತ್ಸವದ ಅಂಗವಾಗಿ ಎರಡು  ದಿನಗಳ ಕಾಲ ವಿಶೇಷ ವೇದಿಕೆಯಲ್ಲಿ ಹುಲಿವೇಷ ಸ್ಪರ್ಧೆ ನಡೆಯಲಿದ್ದು, ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನೂ ಆಯೋಜಿಸಲಾಗಿದೆ. ಮಕ್ಕಳಿಗಾಗಿ ಮುದ್ದುಕೃಷ್ಣ ವೇಷ ಸ್ಪರ್ಧೆ, ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಿದ್ದು, ಅಂತರ್‌ ರಾಷ್ಟ್ರೀಯ ಮಟ್ಟದ ಕಲಾವಿದರಿಂದಲೂ ಜನ್ಮಾಷ್ಟಮಿ ಪರ್ವಕಾಲದಲ್ಲಿ ವಿವಿಧ ಕಲಾ ಪ್ರದರ್ಶನಗಳನ್ನು ಏರ್ಪಡಿಸಲಾಗಿದೆ.

  ಸೆಪ್ಟೆಂಬರ್ 6ರಂದು ಮಾಸಪೂರ್ತಿ ನಡೆದ ಜಗದೊಡೆಯ ಶ್ರೀಕೃಷ್ಣನ ಜನ್ಮಾಷ್ಟಮಿ ಸಂಭ್ರಮದ ಸಮಾರೋಪ ಸಮಾರಂಭ ನಡೆಯಲಿದೆ. ಇದೇ ಸಂದರ್ಭದಲ್ಲಿ ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಗುವುದು. ಅಷ್ಟಮಂಗಲ ಪ್ರಶ್ನೆಯ ಅನುಸಾರದಂತೆ ಸೆಪ್ಟೆಂಬರ್ 6ರಂದು ಕೋಟಿ ತುಳಸಿ ಅರ್ಚನೆ ಕೈಗೊಳ್ಳಲಾಗಿದೆ ಎಂದು ಶಿರೂರು ಶ್ರೀಗಳು ತಿಳಿಸಿದರು.

  ಭಕ್ತಿ, ಧಾರ್ಮಿಕ ಆಚರಣೆ, ಸಾಂಸ್ಕೃತಿಕ ವೈಭವ ಹಾಗೂ ಜನಪದ ಕಲಾ ಪ್ರದರ್ಶನಗಳ ಸಮ್ಮಿಲನದೊಂದಿಗೆ ಈ ಬಾರಿಯ ಜನ್ಮಾಷ್ಟಮಿ ಹಾಗೂ ವಿಟ್ಲಪಿಂಡಿ ಉತ್ಸವವನ್ನು ವೈಭವೋಪೇತವಾಗಿ ಆಚರಿಸಲು ಸಿದ್ಧತೆಗಳು ನಡೆಯುತ್ತಿವೆ ಎಂದು ಶ್ರೀ ಮಠದ ದಿವಾನ ಉದಯ ಸರಳತ್ತಾಯರು ಮಾಹಿತಿ ನೀಡಿದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.