• Home  
  • ಉಡುಪಿ: ಜಗದೊಡೆಯನ ಜನ್ಮಾಷ್ಟಮಿ ಸಂಭ್ರಮದ ಪ್ರಯುಕ್ತ ರಾಜ್ಯಮಟ್ಟದ ಛಾಯಾಚಿತ್ರ ಸ್ಪರ್ಧೆ (Udupi: State level photography competition on the occasion of Jagadodeya’s Janmashtami celebrations)
- competition

ಉಡುಪಿ: ಜಗದೊಡೆಯನ ಜನ್ಮಾಷ್ಟಮಿ ಸಂಭ್ರಮದ ಪ್ರಯುಕ್ತ ರಾಜ್ಯಮಟ್ಟದ ಛಾಯಾಚಿತ್ರ ಸ್ಪರ್ಧೆ (Udupi: State level photography competition on the occasion of Jagadodeya’s Janmashtami celebrations)

Share: ಉಡುಪಿ: ಜಗದೊಡೆಯನ ಜನ್ಮಾಷ್ಟಮಿ ಸಂಭ್ರಮದ ಪ್ರಯುಕ್ತ ರಾಜ್ಯಮಟ್ಟದ ಛಾಯಾಚಿತ್ರ ಸ್ಪರ್ಧೆ ಎಸ್ಕೆಪಿಎ ಉಡುಪಿ, ಕೃಷ್ಣ ಮಠ, ಶೀರೂರು ಮಠ, ಲಯನ್ಸ್ ಕ್ಲಬ್ ಮುನಿಯಾಲು ನೇತೃತ್ವದಲ್ಲಿ ಆಯೋಜನೆ (Udupi) ಉಡುಪಿ: ಉಡುಪಿ ಶ್ರೀ ಕೃಷ್ಣ ಮಠ, ಪರ್ಯಾಯ ಶ್ರೀ ಶೀರೂರು ಮಠ, ಆಶ್ರಯದಲ್ಲಿ  ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ಉಡುಪಿ ವಲಯದ ನೇತೃತ್ವದಲ್ಲಿ, ಲಯನ್ಸ್ ಕ್ಲಬ್ ಮುನಿಯಾಲು ಸಹಕಾರದೊಂದಿಗೆ  ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ  ಸ್ಪರ್ಧೆ-2026 ಕಲರ್ಸ್ ಆಫ್ ಶ್ರೀ ಕೃಷ್ಣ ರಾಜ್ಯ ಮಟ್ಟದ ಛಾಯಾಚಿತ್ರ ಸ್ಪರ್ಧೆಯನ್ನು […]

ಎಸ್ಕೆಪಿಎ ಉಡುಪಿ, ಕೃಷ್ಣ ಮಠ, ಶೀರೂರು ಮಠ, ಲಯನ್ಸ್ ಕ್ಲಬ್ ಮುನಿಯಾಲು ನೇತೃತ್ವದಲ್ಲಿ ಆಯೋಜನೆ

(Udupi) ಉಡುಪಿ: ಉಡುಪಿ ಶ್ರೀ ಕೃಷ್ಣ ಮಠ, ಪರ್ಯಾಯ ಶ್ರೀ ಶೀರೂರು ಮಠ, ಆಶ್ರಯದಲ್ಲಿ  ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ಉಡುಪಿ ವಲಯದ ನೇತೃತ್ವದಲ್ಲಿ, ಲಯನ್ಸ್ ಕ್ಲಬ್ ಮುನಿಯಾಲು ಸಹಕಾರದೊಂದಿಗೆ  ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ  ಸ್ಪರ್ಧೆ-2026 ಕಲರ್ಸ್ ಆಫ್ ಶ್ರೀ ಕೃಷ್ಣ ರಾಜ್ಯ ಮಟ್ಟದ ಛಾಯಾಚಿತ್ರ ಸ್ಪರ್ಧೆಯನ್ನು ಆಯೋಜಿಸಲಾಗಿದೆ.

  ಪ್ರಥಮ 10,000/-, ದ್ವಿತೀಯ 5,000/- ಹಾಗೂ 3,000/- ನಗದು ಬಹುಮಾನ ಮತ್ತು 5 ಸಮಾಧಾನಕರ ಬಹುಮಾನಗಳು, ಅಭಿನಂದನಾ ಪತ್ರ, ಸ್ಮರಣಿಕೆ ಗಳನ್ನೊಳಗೊಂಡಿದೆ. 

​  ಸ್ಪರ್ಧೆಯ ನಿಯಮಗಳು

*ಪ್ರತಿ ಸ್ಪರ್ಧಿಯು ಗರಿಷ್ಠ ನಾಲ್ಕು ಛಾಯಾಚಿತ್ರಗಳನ್ನು ಕಳುಹಿಸಬಹುದು. ಒಂದು ಛಾಯಾಚಿತ್ರದ ಗಾತ್ರ ಗರಿಷ್ಠ 4 MBಗಿಂತ ಹೆಚ್ಚು ಮೀರಬಾರದು. – ಮೊಬೈಲ್‌ ನಲ್ಲಿ ತೆಗೆದ ಛಾಯಾಚಿತ್ರಗಳನ್ನು ಸ್ಪರ್ಧೆಗೆ ಪರಿಗಣಿಸಲಾಗುವುದಿಲ್ಲ.

  *ಪೋಟೋಶಾಪ್‌ ನಲ್ಲಿ ತಿರುಚಲಾದ ಮತ್ತು ವಾಟರ್ ಮಾರ್ಕ್ ಇದ್ದ ಚಿತ್ರಗಳನ್ನು ಸ್ಪರ್ಧೆಗೆ ಪರಿಗಣಿಸಲಾಗುವುದಿಲ್ಲ.

  * ಒಂದು ಬಾರಿ ನೋಂದಣಿಯಾದ ಛಾಯಾಚಿತ್ರಗಳನ್ನು ಬದಲಾಯಿಸಲು ಅವಕಾಶವಿರುವುದಿಲ್ಲ.

  *ಸ್ಪರ್ಧೆಯಲ್ಲಿ ಭಾಗವಹಿಸಲು ಎಲ್ಲರಿಗೂ ಮುಕ್ತ ಅವಕಾಶ.

  *ಛಾಯಾಚಿತ್ರವನ್ನು ಇಮೇಲ್ ಮೂಲಕ ಕಳುಹಿಸುವಾಗ ತಮ್ಮ ಭಾವಚಿತ್ರ, ಹೆಸರು, ವಿಳಾಸ, ದೂರವಾಣಿ ಹಾಗೂ ನೋಂದಣಿ ಸಂಖ್ಯೆಯನ್ನು ಕಡ್ಡಾಯವಾಗಿ ನಮೂದಿಸತಕ್ಕದ್ದು.

 *ತೀರ್ಪುಗಾರರ ತೀರ್ಮಾನವೇ ಅಂತಿಮ. ಉಡುಪಿ ಶ್ರೀ ಕೃಷ್ಣ ಮಠದ ಪರಿಸರದಲ್ಲಿ ನಡೆಯುವ ಶ್ರೀ ಕೃಷ್ಣ ಜನ್ಮಾಷ್ಟಮಿ (04-0​9-2026) ಹಾಗೂ ರಥಬೀದಿಯಲ್ಲಿ ನಡೆಯುವ ವಿಟ್ಲಪಿಂಡಿ ಮಹೋತ್ಸವದ (05-0​9-2026) ಛಾಯಾಚಿತ್ರಗಳಿಗೆ ಮಾತ್ರ ಅವಕಾಶ.

 *ಛಾಯಾಚಿತ್ರವನ್ನು ಕಳುಹಿಸಲು ಕೊನೆಯ ದಿನಾಂಕ 15-09-2026. – ಫಲಿತಾಂಶವನ್ನು ದಿನಾಂಕ 25-09-2026 ರಂದು ಪ್ರಕಟಿಸಲಾಗುವುದು.

  ಛಾಯಾಚಿತ್ರಗಳನ್ನು ಕಳುಹಿಸಬೇಕಾದ ವಿಳಾಸ: rameshyelluru@gmail.com, ನೋಂದಾಯಿಸಲು ಕೊನೆಯ ದಿನಾಂಕ 01-09-2026 ನೋಂದಾಯಿಸಿದ ಎಲ್ಲಾ ಛಾಯಾಗ್ರಾಹಕರಿಗೆ ಒಂದು ಟಿ-ಶರ್ಟ್ ಉಚಿತ. ಟಿ-ಶರ್ಟ್ ಧರಿಸಿ ಛಾಯಾಗ್ರಹಣವನ್ನು ಮಾಡತಕ್ಕದ್ದು. ಛಾಯಾಚಿತ್ರವನ್ನು ಯಾವುದೇ ಪೂರ್ವಾನುಮತಿ ಇಲ್ಲದೆ ಬಳಸುವ ಹಕ್ಕನ್ನು ಪಡೆದಿರುತ್ತೇವೆ.

  ಚಿತ್ರ : ರಾಜ್ಯಮಟ್ಟದ ಛಾಯಾಚಿತ್ರ ಸ್ಪರ್ಧೆಯ ಪ್ರಚಾರದ ಬಿತ್ತಿ ಚಿತ್ರವನ್ನು ಪರ್ಯಾಯ ಶೀರೂರು  ಶ್ರೀ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಬುಧವಾರದಂದು ಬಿಡುಗಡೆಗೊಳಿಸಿದರು.

    ಈ ಸಂದರ್ಭದಲ್ಲಿ ಎಸ್ ಕೆಪಿಎ ಉಡುಪಿ  ವಲಯದ ಅಧ್ಯಕ್ಷ ದಿವಾಕರ ಹಿರಿಯಡ್ಕ, ಮಾಜಿ ಅಧ್ಯಕ್ಷ ಜನಾರ್ದನ್ ಕೊಡವೂರು, ಸದಸ್ಯರಾದ ಸುರಭಿ ರತನ್ ಶೆಟ್ಟಿ, ಶ್ರೀಶ ಬಲ್ಲಾಳ್ ಹಾಗೂ ಶ್ರೀಮಠದ ಛಾಯಾಗ್ರಾಹಕ ಕೃತಿಕ್ ಭಟ್  ಉಪಸ್ಥಿತರಿದ್ದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.