ಬಿ.ಸಿ.ರೋಡ್: ಬ್ರಹ್ಮಶ್ರೀ ನಾರಾಯಣಗುರು ವೃತ್ತ ಲೋಕಾರ್ಪಣೆ, ವಿದ್ಯಾರ್ಥಿವೇತನ ವಿತರಣೆ
ವೃತ್ತ ಲೋಕಾರ್ಪಣೆ ಗೈದ ಸಂಸದ ಕ್ಯಾ. ಬ್ರಿಜೇಶ್ ಚೌಟ
(Bantwala) ಬಂಟ್ವಾಳ: ಬಿ.ಸಿ. ರೋಡಿನ ಹೃದಯಭಾಗದಲ್ಲಿ ನೂತನವಾಗಿ ನಿರ್ಮಾಣಗೊಂಡ “ಬ್ರಹ್ಮಶ್ರೀ ನಾರಾಯಣಗುರು ವೃತ್ತ”ದ ಲೋಕಾರ್ಪಣೆ, ಬ್ರಹ್ಮಶ್ರೀ ನಾರಾಯಣಗುರುಗಳ 172 ನೇ ಜನ್ಮದಿನಾಚರಣೆ ಅಂಗವಾಗಿ ಗುರು ಪೂಜೋತ್ದವ ಹಾಗೂ ವಿದ್ಯಾರ್ಥಿವೇತನ ವಿತರಣೆ ಭಾನುವಾರ ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘ ವತಿಯಿಂದ ನಡೆಯಿತು.
ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ನಿರ್ಮಿಸಲಾದ “ಬ್ರಹ್ಮಶ್ರೀ ನಾರಾಯಣಗುರು ವೃತ್ತ” ವನ್ನು ಕೇಂದ್ರ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ಅವರ ಗೌರವ ಉಪಸ್ಥಿತಿಯಲ್ಲಿ ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ಉದ್ಘಾಟಿಸುವ ಮೂಲಕ ಲೋಕಾರ್ಪಣೆ ಗೊಳಿಸಿದರು.
ಈ ವೃತ್ತದ ನಿರ್ವಹಣೆಯನ್ನು ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘ ವಹಿಸಲಿದೆ.
ಈ ಸಂದರ್ಭ ಶಾಸಕ ರಾಜೇಶ್ ನಾಯ್ಕ್, ಮಾಜಿ ಸಚಿವ ಬಿ.ರಮಾನಾಥ ರೈ, ಬಿಲ್ಲವ ಸಂಘದ ಅಧ್ಯಕ್ಷ ಭುವನೇಶ್ ಪಚ್ಚಿನಡ್ಕ,ಬೂಡಾ ಅಧ್ಯಕ್ಷ ಬೇಬಿಕುಂದರ್, ಮಾಜಿ ಶಾಸಕರಾದ ಎ.ರುಕ್ಮಯ ಪೂಜಾರಿ, ಕೆ.ಪದ್ಮನಾಭ ಕೊಟ್ಟಾರಿ, ಬಿಲ್ಲವ ಸಂಘದ ಪದಾಧಿಕಾರಿಗಳು ಹಾಗೂ ಹಲವಾರು ಪ್ರಮುಖರು ಉಪಸ್ಥಿತರಿದ್ದರು.
ಬಳಿಕ ಗಾಣದಪಡ್ಪ ಬ್ರಹ್ಮಶ್ರೀ ನಾರಾಯಣಗುರು ಮಂದಿರದ ಸಭಾಭವನದಲ್ಲಿ ನಡೆದ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಂಸದ ಕ್ಯಾ.ಬ್ರಿಜೇಶ್ ಚೌಟ, ಮೌನ ಕ್ರಾಂತಿಯ ಮೂಲಕ ಸಮಾಜಕ್ಕೆ ಬೆಳಕಾದ ಶ್ರೇಷ್ಠ ದಾರ್ಶನಿಕ ಬ್ರಹ್ಮಶ್ರೀ ನಾರಾಯಣಗುರುಗಳ ಸಂದೇಶ, ತತ್ವ ಪಾಲನೆಯನ್ನು ಪ್ರತಿಯೊಬ್ಬರು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವುದು ಇಂದಿನ ಅಗತ್ಯವಾಗಿದೆ ಎಂದರು.
ಅಧ್ಯಕ್ಷತೆಯನ್ನು ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಭುವನೇಶ್ ಪಚ್ಚಿನಡ್ಕ ವಹಿದ್ದರು.
ಸಂಘದ ಮಾಜಿ ಅಧ್ಯಕ್ಷ ಕೆ. ಹರಿಕೃಷ್ಣ ಬಂಟ್ವಾಳರವರು ಪ್ರಾಸ್ತಾವಿಕವಾಗಿ ಮಾತನಾಡಿದರು.
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ,
ಮಾಜಿ ಸಚಿವ ಬಿ.ರಮಾನಾಥ ರೈ, ಬಂಟ್ವಾಳ ನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷ ಬೇಬಿ ಕುಂದರ್ ಅತಿಥಿಗಳಾಗಿ ಭಾಗವಹಿಸಿ ಶುಭ ಹಾರೈಸಿದರು.
ವೇದಿಕೆಯಲ್ಲಿ ಸಂಘದ ಜೊತೆ ಕಾರ್ಯದರ್ಶಿ ಆನಂದ ಸಾಲಿಯಾನ್ ಶಂಭೂರು, ಕೋಶಾಧಿಕಾರಿ ಸುನೀಲ್ ಎಸ್. ಕುಂದರ್ ಮೊಡಂಕಾಪು, ಲೆಕ್ಕ ಪರಿಶೋಧಕ ಪ್ರಶಾಂತ್ ಕೋಟ್ಯಾನ್ ಸಂಚಯಗಿರಿ, ತಾಲೂಕು ಬಿಲ್ಲವ ಮಹಿಳಾ ಸಮಿತಿ ಅಧ್ಯಕ್ಷೆ ರಾಗಿಣಿ ಮಾಧವ, ಯುವವಾಹಿನಿ ಅಧ್ಯಕ್ಷ ಕಿರಣ್ ಪೂಂಜರಕೋಡಿ ಉಪಸ್ಥಿತರಿದ್ದರು.
ಪ್ರೇಮನಾಥ ಕರ್ಕೇರ ವಿದ್ಯಾರ್ಥಿವೇತನ ಪುರಸ್ಕೃತರ ಪಟ್ಟಿ ವಾಚಿಸಿದರು.
ಬಿಲ್ಲವ ಸಮಾಜ ಸೇವಾ ಸಂಘ ಉಪಾಧ್ಯಕ್ಷ ಜಯಪ್ರಕಾಶ್ ಜೆ.ಎಸ್. ಜಕ್ರಿಬೆಟ್ಟು ಸ್ವಾಗತಿಸಿದರು.
ಇಂಜಿನಿಯರ್ ಸುಜಯ್ ಲೋಬೊ ಅವರನ್ನು ಸನ್ಮಾನಿಸಲಾಯಿತು.
ಯುವವಾಹಿನಿ ಮಾಜಿ ಅಧ್ಯಕ್ಷ ದಿನೇಶ ಸುವರ್ಣ ರಾಯಿ ಕಾರ್ಯಕ್ರಮ ನಿರ್ವಹಿಸಿದರು. ಬಿಲ್ಲವ ಸಂಘದ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ಪೂಜಾರಿ ಮೆಲ್ಕಾರ್ ವಂದಿಸಿದರು.
ಗುರುಮಂದಿರದಲ್ಲಿ ಬೆಳಿಗ್ಗೆ ಗಂಟೆ 7ರಿಂದ 8.30 ಭಜನಾ ಕಾರ್ಯಕ್ರಮ, ಗುರು ಪೂಜೆ, ಮಹಾಪೂಜೆ ನಡೆಯಿತು.
ಮಧ್ಯಾಹ್ನ ಅನ್ನಸಂತರ್ಪಣೆ, ಬಳಿಕ “ದೇಯಿ ಬೈದೇತಿ”ಚಲನಚಿತ್ರ ಪ್ರದರ್ಶನ ನಡೆಯಿತು.

