• Home  
  • ಪಡುಬಿದ್ರಿ ಬ್ಲೂ ಫ್ಲ್ಯಾಗ್ ಬೀಚ್‌ಗೆ ಸಚಿವ ಕೆ. ಜೆ. ಜಾರ್ಜ್ ಭೇಟಿ ( Energy and Tourism Minister K. J. George visits Padubidri Blue Flag Beach)
- Technology - ರಾಜಕೀಯ

ಪಡುಬಿದ್ರಿ ಬ್ಲೂ ಫ್ಲ್ಯಾಗ್ ಬೀಚ್‌ಗೆ ಸಚಿವ ಕೆ. ಜೆ. ಜಾರ್ಜ್ ಭೇಟಿ ( Energy and Tourism Minister K. J. George visits Padubidri Blue Flag Beach)

Share: ಪಡುಬಿದ್ರಿ ಬ್ಲೂ ಫ್ಲ್ಯಾಗ್ ಬೀಚ್‌ಗೆ ಸಚಿವ ಕೆ. ಜೆ. ಜಾರ್ಜ್ ಭೇಟಿ  ದೇಶ-ವಿದೇಶದ ಪ್ರವಾಸಿಗರನ್ನು ಆಕರ್ಷಿಸುವ ನಟ್ಟಿನಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದ ಸಚಿವರು (Padubidri) ಪಡುಬಿದ್ರಿ, ಸೆ. 6: ಕರ್ನಾಟಕದ ಕರಾವಳಿ ಪ್ರದೇಶದಲ್ಲಿ ಪ್ರವಾಸೋದ್ಯಮ ಮೂಲಸೌಕರ್ಯವನ್ನು ಮತ್ತಷ್ಟು ಬಲಪಡಿಸುವ ಹಾಗೂ ಪ್ರವಾಸಿಗರಿಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಇಂಧನ ಮತ್ತು ಪ್ರವಾಸೋದ್ಯಮ ಸಚಿವ ಕೆ.ಜೆ. ಜಾರ್ಜ್ ಅವರು ಪಡುಬಿದ್ರಿ ಬ್ಲೂ ಫ್ಲ್ಯಾಗ್ ಬೀಚ್‌ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.   ಬೀಚ್‌ನಲ್ಲಿರುವ ಪ್ರವಾಸೋದ್ಯಮ ಸೌಲಭ್ಯಗಳು, ಮೂಲಸೌಕರ್ಯ […]

(Padubidri) ಪಡುಬಿದ್ರಿ, ಸೆ. 6: ಕರ್ನಾಟಕದ ಕರಾವಳಿ ಪ್ರದೇಶದಲ್ಲಿ ಪ್ರವಾಸೋದ್ಯಮ ಮೂಲಸೌಕರ್ಯವನ್ನು ಮತ್ತಷ್ಟು ಬಲಪಡಿಸುವ ಹಾಗೂ ಪ್ರವಾಸಿಗರಿಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಇಂಧನ ಮತ್ತು ಪ್ರವಾಸೋದ್ಯಮ ಸಚಿವ ಕೆ.ಜೆ. ಜಾರ್ಜ್ ಅವರು ಪಡುಬಿದ್ರಿ ಬ್ಲೂ ಫ್ಲ್ಯಾಗ್ ಬೀಚ್‌ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

  ಬೀಚ್‌ನಲ್ಲಿರುವ ಪ್ರವಾಸೋದ್ಯಮ ಸೌಲಭ್ಯಗಳು, ಮೂಲಸೌಕರ್ಯ ಹಾಗೂ ಪ್ರವಾಸಿಗರಿಗೆ ಕಲ್ಪಿಸಲಾಗಿರುವ ವ್ಯವಸ್ಥೆಗಳ ಕುರಿತು ಸಚಿವರು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.

   ಕರಾವಳಿ ಪ್ರವಾಸೋದ್ಯಮಕ್ಕೆ ಹೆಚ್ಚಿನ ಉತ್ತೇಜನ ನೀಡುವ ಉದ್ದೇಶದಿಂದ ಬೀಚ್‌ಗಳ ಅಭಿವೃದ್ಧಿ, ಮೂಲಸೌಕರ್ಯ ವೃದ್ಧಿ ಹಾಗೂ ಪ್ರವಾಸಿಗರಿಗೆ ಉತ್ತಮ ಅನುಭವ ಕಲ್ಪಿಸುವ ಕ್ರಮಗಳ ಕುರಿತು ಈ ಸಂದರ್ಭದಲ್ಲಿ ಚರ್ಚೆ ನಡೆಯಿತು.

  ಪಡುಬಿದ್ರಿ ಬ್ಲೂ ಫ್ಲ್ಯಾಗ್ ಬೀಚ್ ಅನ್ನು ಇನ್ನಷ್ಟು ಅಭಿವೃದ್ಧಿಪಡಿಸಿ, ದೇಶ-ವಿದೇಶದ ಪ್ರವಾಸಿಗರನ್ನು ಆಕರ್ಷಿಸುವ ಪ್ರಮುಖ ಪ್ರವಾಸಿ ತಾಣವಾಗಿ ರೂಪಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವ ಬಗ್ಗೆ ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ಸಂದರ್ಭ ಮಾಜಿ ಶಾಸಕ ಜೆ ಆರ್‌ ಲೋಬೋ, ಉಡುಪಿ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಅಶೋಕ್‌ ಕುಮಾರ್‌ ಕೊಡವೂರು, ಕರಾವಳಿ ಪ್ರಾಧಿಕಾರದ ಅಧ್ಯಕ್ಷ ಎಂಎ ಗಫೂರ್, ಕಾಪು ಕಾಂಗ್ರೆಸ್‌ ಅಧ್ಯಕ್ಷ ವೈ ಸುಕುಮಾರ್‌, ಕಾಂಗ್ರೆಸ್‌ ಮುಖಂಡರುಗಳಾದ ಕರುಣಾಕರ ಪೂಜಾರಿ, ನವೀನ್‌ ಎನ್‌ ಶೆಟ್ಟಿ, ಅಶೋಕ್‌ ಸಾಲ್ಯಾನ್‌, ನಿಯಾಜ್‌, ರಮೀಜ್‌ ಹುಸೈನ್‌, ತಸ್ಲೀನ್‌ ಅರಹಾ, ವಿಶ್ವಾಸ್‌ ಅಮೀನ್‌, ಕೇಶವ ಸಾಲ್ಯಾನ್‌ ಮತ್ತಿತರರು ಉಪಸ್ಥಿತರಿದ್ದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.