ಪೊಲಿಪು ಸರ್ಕಾರಿ ಪ್ರೌಢ ಕಾಲೇಜಿನಲ್ಲಿ ಸ್ವಾಸ್ಥ ಸಂಕಲ್ಪ ಕಾರ್ಯಕ್ರಮ
ಕಾರ್ಯಕ್ರಮ ಉದ್ಘಾಟಿಸಿ, ಸಮರ್ಪಕ ಮಾಹಿತಿ ನೀಡಿದ ಪತ್ರಕರ್ತ ರಾಕೇಶ್ ಕುಂಜೂರು
(Polipu) ಪೊಲಿಪು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ ರಿಜಿಸ್ಟರ್ ಕಾಪು ತಾಲೂಕು, ಆಯೋಜನೆಯಲ್ಲಿಪೊಲಿಪು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾಸ್ಥ ಸಂಕಲ್ಪ ಕಾರ್ಯಕ್ರಮ ನೆರವೇರಿತು.
ಕಾರ್ಯಕ್ರಮವನ್ನು ಉದಯವಾಣಿ ಪತ್ರಿಕೆಯ ವರದಿಗಾರ ರಾಕೇಶ್ ಕುಂಜೂರು ಉದ್ಘಾಟಿಸಿದರು.
ರಾಕೇಶ್ ಕುಂಜೂರುರವರು ಯೋಜನೆಯ ಕಾರ್ಯಕ್ರಮಗಳ ಬಗ್ಗೆ ಹಾಗೂ ಮಕ್ಕಳಲ್ಲಿ ದುಶ್ಚಟದ ಬಗ್ಗೆ ಆಗುವ ಪರಿಣಾಮಗಳ ಬಗ್ಗೆ ಸಮರ್ಪಕ ಮಾಹಿತಿ, ಮಾರ್ಗದರ್ಶನ ನೀಡಿದರು.
ಈ ಕಾರ್ಯಕ್ರಮದಲ್ಲಿ ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಶುಭ ಮೇಡಂ, ಜ್ಞಾನವಿಕಾಸ ಸಮನ್ವಯಾಧಿಕಾರಿ ಶ್ರೀಮತಿ ಸವಿತಾ, ಸೇವಾ ಪ್ರತಿನಿಧಿ ಜ್ಯೋತಿ, ಶಿಕ್ಷಕರು ಮಕ್ಕಳು ಉಪಸ್ಥಿತರಿದ್ದರು.

