ಮಜೂರಿನಲ್ಲಿ ಕಾಪು ತಾಲೂಕು ಪ್ರಜಾಸೇವಾ ಆಂದೋಲನ ಸಭೆ
ಮಜೂರು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆದ ಸಭೆ
(Kaup) ಕಾಪು : ಪ್ರಜಾಸೇವೆ ಇಲಾಖೆ ತಾಲೂಕು ಆಡಳಿತ ಕಾಪು ವತಿಯಿಂದ ಶನಿವಾರ ಮಜೂರು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಶನಿವಾರ ಕಾಪು ತಾಲೂಕು ಪ್ರಜಾಸೇವಾ ಆಂದೋಲನ ಸಭೆ ಜರಗಿತು.
ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿಯವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಪ್ರಜಾಸೇವಾ ಆಂದೋಲನ ಸಭೆಯಲ್ಲಿ ಒಟ್ಟು 76 ಅರ್ಜಿಗಳನ್ನು ಸ್ವೀಕರಿಸಲಾಯಿತು. ಮೂಲಭೂತ ಸೌಕರ್ಯಗಳಾದ ರಸ್ತೆ, ದಾರಿದೀಪ, ಕುಡಿಯುವ ನೀರು ಮತ್ತು ಮೆಸ್ಕಾಂ ಇಲಾಖೆ ಹಾಗೂ ಕಂದಾಯ ಇಲಾಖೆಯಲ್ಲಿ ಅಕ್ರಮ ಸಕ್ರಮ, ನಿವೇಶನ, ಹಕ್ಕುಪತ್ರ, ಸಮಾಜಿಕ ಭದ್ರತಾ ಯೋಜನೆಗಳಲ್ಲಿನ ಸಮಸ್ಯೆ ಬಗ್ಗೆ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ಪರಿಹಾರೋಪಾಯ ಕಂಡುಕೊಳ್ಳಲು ನಿರ್ಣಯಿಸಲಾಯಿತು.
ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಅಪರ ಜಿಲ್ಲಾಧಿಕಾರಿ ಅಬಿದ್ ಗಡ್ಯಾಲ್, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಸುಧಾಕರ್, ಕಾಪು ತಹಶೀಲ್ದಾರ ಅಂನತ ಶಂಕರ್, ಕಾಪು ತಾಲೂಕು ಕಾರ್ಯ ನಿರ್ವಹಣಾಧಿಕಾರಿ ವಿಜಯ ಕುಮಾರ್, ಕಾಪು ಪುರಸಭೆಯ ಮುಖ್ಯಾಧಿಕಾರಿ ನೀಲಕಂಠ ಮೇಸ್ತಾ, ಮಜೂರು ಗ್ರಾಮ ಪಂಚಾಯತ್ ಆಡಳಿತಾಧಿಕಾರಿ ವರುಣ್, ಕಾಪು ಪುರಸಭೆಯ ಅಧ್ಯಕ್ಷೆ ಮೋಹಿನಿ ಶೆಟ್ಟಿ, ಕಾಪು ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ನವೀನ್ ಚಂದ್ರ ಸುವರ್ಣ ಮತ್ತಿತರರು ಉಪಸ್ಥಿತರಿದ್ದರು.

