ಬೆಳಪು ನಿರ್ಮಾಣ ಹಂತದ ಸ್ನಾತಕೋತ್ತರ ಕೇಂದ್ರಕ್ಕೆ ಉಪ ಮುಖ್ಯಮಂತ್ರಿ ಭೇಟಿ
ಶೇ.80 ಕಾಮಗಾರಿ ಮುಗಿದಿದ್ದು, ಅನುದಾನ ಕೊರತೆಯಿಂದ 20 ಶೇ. ಕಾಮಗಾರಿ ಬಾಕಿ ಉಳಿದಿದೆ
(Belapu) ಬೆಳಪು : ಬೆಳಪು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಸ್ನಾತಕೋತ್ತರ ಕೇಂದ್ರಕ್ಕೆ ಉಪ ಮುಖ್ಯಮಂತ್ರಿ, ಕಂದಾಯ ಹಾಗೂ ಕ್ರೀಡಾ ಸಚಿವರಾದ ಡಾ. ಜಿ ಪರಮೇಶ್ವರ್ ಅವರು ಭೇಟಿ ನೀಡಿದರು.
ಸ್ನಾತಕೋತ್ತರ ಕೇಂದ್ರದ ಶೇ.80 ಕಾಮಗಾರಿ ಮುಗಿದಿದ್ದು, ಅನುದಾನ ಕೊರತೆಯಿಂದ 20 ಶೇಖಡಾ ಕಾಮಗಾರಿ ಬಾಕಿ ಇರುವುದರಿಂದ ಬಾಕಿ ಅನುದಾನವನ್ನು ಶೀಘ್ರವಾಗಿ ಮಂಜೂರು ಗೊಳಿಸುವುದರ ಜೊತೆಗೆ ಸ್ಥಳೀಯರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕ್ರಿಡಾ ವಿದ್ಯಾಲಯ ಆರಂಭಿಸುವಂತೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಪ್ರಸ್ತಾಪಿಸಿದರು.
ಈ ಸಂದರ್ಭ ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಬೆಳಪು ಗ್ರಾ.ಪಂ. ಮಾಜಿ ಅಧ್ಯಕ್ಷ ಡಾ. ದೇವಿಪ್ರಸಾದ್ ಶೆಟ್ಟಿ ಬೆಳಪು, ಉಡುಪಿ ಜಿಲ್ಲಾ ಕಾಂಗ್ರೆಸ್ ಮುಖಂಡರಾದ ಕಿಶನ್ ಹೆಗ್ಡೆ ಕೊಳ್ಕೆಬೈಲು, ವಿಶ್ವಾಸ್ ವಿ ಅಮೀನ್, ನವೀನ್ ಎನ್ ಶೆಟ್ಟಿ, ಹರೀಶ್ ನಾಯ್ಕ್ ಮತ್ತು ಅಧಿಕಾರಿ ವರ್ಗದವರು ಉಪಸ್ಥಿತರಿದ್ದರು.

