ಕಾಪು ತಾಲೂಕು ಭಜನಾ ಪರಿಷತ್ ಅಧ್ಯಕ್ಷರಾಗಿ ಅರುಣ್ ಶೆಟ್ಟಿ ಪಾದೂರು ಆಯ್ಕೆ
ಶ್ರೀ ಕ್ಷೇತ್ರ ಧರ್ಮಸ್ಥಳದ ಆಯೋಜನೆಯ ಭಜನಾ ಪರಿಷತ್
(Kaup) ಕಾಪು: ಶ್ರೀ ಕ್ಷೇತ್ರ ಧರ್ಮಸ್ಥಳದ ಆಯೋಜನೆಯ ಕಾಪು ತಾಲೂಕು ಮಟ್ಟದ ಭಜನಾ ಪರಿಷತ್ ರಚನೆಯು ಕಾಪು ವೀರಭದ್ರ ಸಭಾಭವನದಲ್ಲಿ ನಡೆದಿದ್ದು, ಮಜೂರು ಶ್ರೀ ರಾಮ ಭಜನಾ ಮಂಡಳಿಯ ಅಧ್ಯಕ್ಷರಾದ ಅರುಣ್ ಶೆಟ್ಟಿ ಪಾದೂರುವರು ಸರ್ವ ಸಮ್ಮತದಿಂದ ಕಾಪು ತಾಲೂಕು ಭಜನಾ ಪರಿಷತ್ ಅಧ್ಯಕ್ಷರಾಗಿ ಆಯ್ಕೆ ಆಗಿದ್ದಾರೆ.
ಉಪಾಧ್ಯಕ್ಷರಾಗಿ ಕೆಮುಂಡೇಲು ಭಜನಾ ಮಂಡಳಿಯ ಚಂದ್ರಶೇಖರ್ ಹಾಗೂ ಉದ್ಯಾವರ ಶ್ರೀ ರಾಮ ಭಜನಾ ಮಂಡಳಿಯಿಂದ ರವಿಯವರನ್ನು ಆಯ್ಕೆ ಮಾಡಲಾಯಿತು. ಕಾರ್ಯದರ್ಶಿಯಾಗಿ ನಾಗೇಶ್ ರವರನ್ನು ಆಯ್ಕೆ ಮಾಡಲಾಗಿದೆ.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ನಾಗರಾಜ್ ಶೆಟ್ಟಿಯವರು ಶ್ರೀ ಕ್ಷೇತ್ರ ದರ್ಮಸ್ಥಳದಂದ ನಡೆಯುತ್ತಿರುವ ಭಜನಾ ಪರಿಷತ್ ನ ಕಾರ್ಯ ವೈಖರಿ ಬಗ್ಗೆ ಸಮರ್ಪಕ ಮಾಹಿತಿ ನೀಡಿದರು.
ಈ ಸಂದರ್ಭ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾಪು ತಾಲೂಕು ಯೋಜನಾಧಿಕಾರಿ ಶ್ರೀಮತಿ ಮಮತಾ ಶೆಟ್ಟಿ, ಹೆಜಮಾಡಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ದಯಾನಂದ ಹೆಜಮಾಡಿ, ಜಿಲ್ಲಾ ಜನಜಾಗೃತಿ ವೇದಿಕೆಯ ನಿಕಟ ಪೂರ್ವ ಅಧ್ಯಕ್ಷ ನವೀನ್ ಅಮೀನ್ ಶಂಕರಪುರ, ಪಡುಬಿದ್ರಿ ಆದಿಶಕ್ತಿ ದೈವಸ್ಥಾನದ ಮೊಕ್ತೇಸರ ಸುಧಾಕರ್, ಕನ್ನಡ ಸಾಹಿತ್ಯ ಪರಿಷತ್ ಕಾಪು ತಾಲೂಕು ಅಧ್ಯಕ್ಷ ಪುಂಡಲೀಕ ಮರಾಠೆ, ಕಾಪು ತಾಲೂಕಿನ ವಿವಿಧ ಭಾಗದ ಭಜನಾ ತಂಡದ ಪದಾಧಿಕಾರಿಗಳು ಉಪಸ್ಥಿತರಿದ್ದರು.

