ಕಾಪುವಿನ ಮಾರಿ ಅಮ್ಮನಿಗೊಂದು ಅಕ್ಷರ ನಮನ ಅಭಿಯಾನ
ನವದುರ್ಗಾ ಲೇಖನದ ಮಾತೃಕಾ ಶಕ್ತಿ ಪೂಜಾ ಕಾರ್ಯಕ್ರಮಕ್ಕೆ ಗಣ್ಯರಿಂದ ಚಾಲನೆ
(Kaup) ಕಾಪು : ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಮತ್ತು ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ನವದುರ್ಗಾ ಲೇಖನ ಯಜ್ಞ ಸಮಿತಿಯ ಸಹಕಾರದೊಂದಿಗೆ ಕಾಪುವಿನ ಅಮ್ಮನಿಗೊಂದು ಅಕ್ಷರ ನಮನ – ನವದುರ್ಗಾ ಲೇಖನ ಯಜ್ಞ ಮಹಾಅಭಿಯಾನದ ಅಂಗವಾಗಿ ಉಚ್ಚಂಗೀ ಸಹಿತ ಮಾರಿಯಮ್ಮ ದೇವಿಯ ಸನ್ನಿಧಿಯಲ್ಲಿ ಗುರುವಾರ ಮಾತೃಕಾ ಶಕ್ತಿ ಪೂಜೆ ಸಂಪನ್ನಗೊಂಡಿತು.
ಕಾಪುವಿನ ಅಮ್ಮನಿಗೊಂದು ಅಕ್ಷರ ನಮನ ಮಹಾ ಅಭಿಯಾನದ ಅಂಗವಾಗಿ ನಡೆದ ಸಾಮೂಹಿಕ ಪ್ರಾರ್ಥನೆಯಲ್ಲಿ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಪುರಸಭಾಧ್ಯಕ್ಷೆ ಮೋಹಿನಿ ಶೆಟ್ಟಿ, ಭಾರತ್ ಸ್ಕೌಟ್ ಗೈಡ್ ಆಯುಕ್ತ ಜಯಕರ ಶೆಟ್ಟಿ ಇಂದ್ರಾಳಿ, ಮುಂಬಯಿಯ ಉದ್ಯಮಿ ಕೃಷ್ಣ ವೈ. ಶೆಟ್ಟಿ ಮುಂಬಯಿ, ವಿ.ಎಸ್.ಎಸ್ ಶಿಕ್ಷಣ ಸಂಸ್ಥೆಯ ಚೇರ್ಮನ್ ಪ್ರತಾಪ್ ಹೆಗ್ಡೆ ಮಾರಾಳಿ, ಕಾಪು ಸಿಎ ಬ್ಯಾಂಕ್ ಅಧ್ಯಕ್ಷ ಕಾಪು ದಿವಾಕರ ಶೆಟ್ಟಿ, ನವೀನ್ ಚಂದ್ರ ಆಳ್ವ ತಿರುವೈಲುಗುತ್ತು, ಸಂಪತ್ ಕುಮಾರ್ ಶೆಟ್ಟಿ ದೀಪ ಪ್ರಜ್ವಲಿಸಿದರು.
ಮಾತೃಕಾ ಶಕ್ತಿ ಪೂಜಾ ಕಾರ್ಯಕ್ರಮದ ಅಂಗವಾಗಿ ಬೆಂಗಳೂರು ಎಂ.ಆರ್.ಜಿ. ಗ್ರೂಫ್ ಚೇರ್ಮನ್ ಕೆ. ಪ್ರಕಾಶ್ ಶೆಟ್ಟಿ, ಮುಂಬಯಿ ವಿ.ಕೆ. ಗ್ರೂಫ್ ಆಫ್ ಕಂಪೆನಿ ಚೇರ್ಮನ್ ಕೆ. ಎಂ. ಶೆಟ್ಟಿ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಕರ್ನಾಟಕ ಬ್ಯಾಂಕ್ ಮುಖ್ಯ ಮಹಾ ಪ್ರಬಂಧಕ ಚಂದ್ರಶೇಖರ್, ಶಂಕರ್ ಇಲೆಕ್ಟ್ರಿಕಲ್ಸ್ ಆಡಳಿತ ನಿರ್ದೇಶಕ ರಾಜೇಶ್ ಶೆಟ್ಟಿ, ಉಮಾಕೃಷ್ಣ ಶೆಟ್ಟಿ ಮುಂಬಯಿ, ಕೃಷ್ಣಪ್ರಸಾದ್ ಕ್ಯಾಶ್ಯೂಸ್ ನ ವ್ಯವಸ್ಥಾಪಕ ನಿರ್ದೇಶಕ ಸಂಪತ್ ಕುಮಾರ್ ಶೆಟ್ಟಿ, ಯೂನಿಯನ್ ಆಫ್ ಇಂಡಿಯಾ ಸೀನಿಯರ್ ಪ್ಯಾನೆಲ್ ಕೌನ್ಸಿಲ್ ಶ್ವೇತಾ ಕೃಷ್ಣಪ್ಪ, ದೇವಿಪ್ರಸಾದ್ ಕನ್ ಸ್ಟ್ರಕ್ಷನ್ಸ್ ಆಡಳಿತ ನಿರ್ದೇಶಕಿ ಬೀನಾ ವಾಸುದೇವ ಶೆಟ್ಟಿ ದೀಪ ಬೆಳಗಿಸಿದರು.
ಹೊಸ ಮಾರಿಗುಡಿಯ ಪ್ರಧಾನ ತಂತ್ರಿ ವಿದ್ವಾನ್ ಕೆ.ಪಿ. ಕುಮಾರಗುರು ತಂತ್ರಿ, ಪ್ರಧಾನ ಅರ್ಚಕ ವೇ. ಮೂ. ಶ್ರೀನಿವಾಸ ತಂತ್ರಿ ಕಲ್ಯ ಕಾಪುವಿನ ಅಮ್ಮನಿಗೊಂದು ಅಕ್ಷರ ನಮನ ಚಾಲನೆ ಪ್ರಯುಕ್ತ ಮಾತೃಕಾ ಶಕ್ತಿ ಪೂಜೆಯ ಧಾರ್ಮಿಕ ಕಾರ್ಯಕ್ರಮಗಳ ಧಾರ್ಮಿಕ ಪೌರೋಹಿತ್ಯ ವಹಿಸಿದ್ದರು.
ಶ್ರೀ ಹೊಸ ಮಾರಿಗುಡಿ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಪ್ರತಿನಿಧಿ ಶೇಖರ್ ಸಾಲ್ಯಾನ್, ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿ, ವ್ಯವಸ್ಥಾಪನಾ ಸಮಿತಿ, ನವದುರ್ಗಾ ಲೇಖನ ಯಜ್ಞ ಸಮಿತಿ, ಕಾಪು ಚಾರಿಟೇಬಲ್ ಟ್ರಸ್ಟ್ ನ ಪದಾಧಿಕಾರಿಗಳು ಮತ್ತು ಟ್ರಸ್ಟಿಗಳು ಉಪಸ್ಥಿತರಿದ್ದರು.
ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿ ಮತ್ತು ಕಾಪು ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಭಗವಾನ್ ದಾಸ್ ಕೆ. ಪ್ರಸ್ತಾವನೆಗೈದರು. ನವದುರ್ಗಾ ಲೇಖನ ಯಜ್ಞ ಸಮಿತಿ ಅಧ್ಯಕ್ಷ ಐಕಳಬಾವ ಡಾ. ದೇವಿಪ್ರಸಾದ್ ಶೆಟ್ಟಿ ಬೆಳಪು ನವದುರ್ಗಾ ಲೇಖನ ಯಜ್ಞ ಮಹಾಅಭಿಯಾನದ ಕುರಿತಾಗಿ ಮಾಹಿತಿ ನೀಡಿದರು. ಕಾರ್ಯಾಧ್ಯಕ್ಷ ಯೋಗೀಶ್ ಶೆಟ್ಟಿ ಬಾಲಾಜಿ ವಂದಿಸಿದರು. ದಾಮೋದರ ಶರ್ಮ ಬಾರ್ಕೂರು, ಸತೀಶ್ ಶೆಟ್ಟಿ ಗುಡ್ಡೆಚ್ಚಿ ಕಾರ್ಯಕ್ರಮ ನಿರೂಪಿಸಿದರು.

