• Home  
  •    ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರ  ಆರೋಗ್ಯಕ್ಕಾಗಿ ಕಾಪು ಹೊಸ ಮಾರಿಗುಡಿಯಲ್ಲಿ ಸಾಮೂಹಿಕ ಪ್ರಾರ್ಥನೆ (Mass prayer for the health of Dr. M.N. Rajendra Kumar at the new Marigudi temple in Kapu.)
- health - ಧಾರ್ಮಿಕ

   ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರ  ಆರೋಗ್ಯಕ್ಕಾಗಿ ಕಾಪು ಹೊಸ ಮಾರಿಗುಡಿಯಲ್ಲಿ ಸಾಮೂಹಿಕ ಪ್ರಾರ್ಥನೆ (Mass prayer for the health of Dr. M.N. Rajendra Kumar at the new Marigudi temple in Kapu.)

Share:   ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರ  ಆರೋಗ್ಯಕ್ಕಾಗಿ ಕಾಪು ಹೊಸ ಮಾರಿಗುಡಿಯಲ್ಲಿ ಸಾಮೂಹಿಕ ಪ್ರಾರ್ಥನೆ ಶ್ರೀ ಹೊಸ ಮಾರಿಗುಡಿಯ ತಂತ್ರಿ ಕುಮಾರಗುರು ತಂತ್ರಿ  ನೇತೃತ್ವದಲ್ಲಿ ಪ್ರಾರ್ಥನೆ    (Kaup) ಕಾಪು : ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷರು ಹಾಗೂ ನವೋದಯ ಸ್ವಸ ಹಾಯ ಗುಂಪುಗಳ ಸಂಸ್ಥಾಪಕ, ಸಹಕಾರ ರತ್ನ ಡಾ. ಎಂ. ಎನ್. ರಾಜೇಂದ್ರ ಕುಮಾರ್ ಅವರ ಆರೋಗ್ಯಕ್ಕಾಗಿ ಮತ್ತು ದೀರ್ಘಾಯುಷ್ಯ ಕ್ಕಾಗಿ ಕಾಪು ಶ್ರೀ ಹೊಸ ಮಾರಿಗುಡಿಯಲ್ಲಿ ಗುರುವಾರ ಸಂಜೆ […]

   (Kaup) ಕಾಪು : ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷರು ಹಾಗೂ ನವೋದಯ ಸ್ವಸ ಹಾಯ ಗುಂಪುಗಳ ಸಂಸ್ಥಾಪಕ, ಸಹಕಾರ ರತ್ನ ಡಾ. ಎಂ. ಎನ್. ರಾಜೇಂದ್ರ ಕುಮಾರ್ ಅವರ ಆರೋಗ್ಯಕ್ಕಾಗಿ ಮತ್ತು ದೀರ್ಘಾಯುಷ್ಯ ಕ್ಕಾಗಿ ಕಾಪು ಶ್ರೀ ಹೊಸ ಮಾರಿಗುಡಿಯಲ್ಲಿ ಗುರುವಾರ ಸಂಜೆ ಸಂಜೆ ವಿಶೇಷ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಾಯಿತು.

 ಶ್ರೀ ಹೊಸ ಮಾರಿಗುಡಿಯ ಪ್ರಧಾನ ತಂತ್ರಿ ವಿದ್ವಾನ್ ಕೊರಂಗ್ರಪಾಡಿ ಕುಮಾರಗುರು ತಂತ್ರಿ ಅವರ ನೇತೃತ್ವದಲ್ಲಿ ಪ್ರಧಾನ ಅರ್ಚಕ ವೇದ ಮೂರ್ತಿ ಶ್ರೀನಿವಾಸ ತಂತ್ರಿ ಕಲ್ಯ ಅವರ ಉಪಸ್ಥಿತಿಯಲ್ಲಿ ವಿಶೇಷ ಪೂಜಾ ವಿಧಿವಿಧಾನಗಳು ಹಾಗೂ ಸಾಮೂಹಿಕ ಪ್ರಾರ್ಥನೆ ನೆರವೇರಿಸಲಾಯಿತು.

  ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿ ಅಧ್ಯಕ್ಷ ವಾಸುದೇವ ಶೆಟ್ಟಿ, ನವದುರ್ಗಾ ಲೇಖನ ಯಜ್ಞ ಸಮಿತಿ ಅಧ್ಯಕ್ಷ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಡಾ. ದೇವಿಪ್ರಸಾದ್ ಶೆಟ್ಟಿ ಬೆಳಪು, ಕಾಪು ಸಿಎ ಬ್ಯಾಂಕ್ ಅಧ್ಯಕ್ಷ ಕಾಪು ದಿವಾಕರ ಶೆಟ್ಟಿ, ಉದಯ ಸುಂದರ ಶೆಟ್ಟಿ, ಯೋಗೀಶ್ ಶೆಟ್ಟಿ ಬಾಲಾಜಿ, ಅಭಿವೃದ್ಧಿ ಸಮಿತಿ ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ ಕಲ್ಯ, ನವೋದಯ ಸ್ವಸಹಾಯ ಗುಂಪುಗಳ ಮೇಲ್ವಿಚಾರಕ ಹರಿನಾಥ್, ಸಹಾಯಕ ಮೇಲ್ವಿಚಾರಕ ಕೃಷ್ಣ, ಅನಿತಾ ಉದಯ್ ಕುಮಾರ್‌ ಸಹಿತ ಸ್ವಸಹಾಯ ಗುಂಪುಗಳ ಒಕ್ಕೂಟದ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.  

Leave a comment

Your email address will not be published. Required fields are marked *

eMedia Kannada  @2025. All Rights Reserved.