ಅ. 2-3- 4: ಕಾಪು ಕಾಂಗ್ರೆಸ್ ನಿಂದ ಭಾರತ್ ಜೋಡೋ ರ್ಯಾಲಿ, ಭಾರತ್ ಜೋಡೋ ಟ್ರೋಫಿ-2026 ಕ್ರೀಡೆ
ಕಾಪು ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ
(Kaup) ಕಾಪು : ಕಾಪು ಕಾಂಗ್ರೆಸ್ ಪಕ್ಷದ ವತಿಯಿಂದ ಅಕ್ಟೋಬರ್ 2 ರಂದು ಮಾದಕ ವ್ಯಸನ ಮುಕ್ತ ಸಮಾಜಕ್ಕಾಗಿ ಬೃಹತ್ ಭಾರತ್ ಜೋಡೋ ರ್ಯಾಲಿ ಮತ್ತು ಅಕ್ಟೋಬರ್ 3 ರಂದು ಹೆಜಮಾಡಿ ಗ್ರಾಮೀಣ ಕಾಂಗ್ರೆಸ್ ಸಮಿತಿ ವತಿಯಿಂದ ಭಾರತ್ ಜೋಡೋ ಟ್ರೋಫಿ-2026 ಕ್ರಿಕೇಟ್ ಹಾಗೂ ಮಹಿಳಾ ಥ್ರೋ ಬಾಲ್ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ ಎಂದು ಹೆಜಮಾಡಿ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ಪ್ರಬೋದ್ ಚಂದ್ರ ಹೆಜಮಾಡಿ ತಿಳಿಸಿದರು.
ಅವರು ಕಾಪು ಪ್ರೆಸ್ ಕ್ಲಬ್ ನಲ್ಲಿ ಮಂಗಳವಾರ ಜರಗಿದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಅಕ್ಟೋಬರ್ 2ರಂದು ಸಂಜೆ 4 ಗಂಟೆಗೆ ಕಾಪುವಿನ ರಾಜೀವ್ ಭವನದಿಂದ ಹೆಜಮಾಡಿ ರಾಜೀವ್ ಗಾಂಧಿ ಕ್ರೀಡಾಂಗಣದವರೆಗೆ ಸುಮಾರು 200 ವಾಹನಗಳೊಂದಿಗೆ ನಡೆಯಲಿರುವ ಭಾರತ್ ಜೋಡೋ ರ್ಯಾಲಿ ಮತ್ತು ಅಕ್ಟೋಬರ್ 3 ಮತ್ತು 4 ರಂದು ಹೆಜಮಾಡಿಯ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ನಡೆಯಲಿರುವ ಭಾರತ್ ಜೋಡೋ ಟ್ರೋಫಿ ಹಾಗೂ ಮಹಿಳಾ ಥ್ರೋ ಬಾಲ್ ಪಂದ್ಯಾವಳಿಗೆ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಚಾಲನೆ ನೀಡಲಿದ್ದಾರೆ.
ಕ್ರೀಡಾ ಮಹೋತ್ಸವದಲ್ಲಿ ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿ (ದಕ್ಷಿಣ) ವ್ಯಾಪ್ತಿಯ ವಿವಿಧ ಗ್ರಾಮೀಣ ಕಾಂಗ್ರೆಸ್ ಸಮಿತಿಗಳಿಂದ 19 ಕ್ರಿಕೆಟ್ ತಂಡಗಳು ಹಾಗೂ 15 ಮಹಿಳಾ ಥೋಬಾಲ್ ತಂಡಗಳು ಭಾಗವಹಿಸಲಿವೆ. ಪಕ್ಷದ ಕಾರ್ಯಕರ್ತರು, ಯುವಕರು ಹಾಗೂ ಮಹಿಳಾ ಕಾರ್ಯಕರ್ತರ ನಡುವೆ ಸ್ನೇಹ, ಒಗ್ಗಟ್ಟು ಮತ್ತು ಸಂಘಟನಾ ಬಾಂಧವ್ಯವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ ಎಂದೂ ಪ್ರಬೋಧ ಚಂದ್ರ ಹೆಜಮಾಡಿ ತಿಳಿಸಿದ್ದಾರೆ .
ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲ್, ಕಾಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವೈ. ಸುಕುಮಾರ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ, ಉಡುಪಿ ಜಿಲ್ಲಾ ಅಥ್ಲೆಟಿಕ್ ಅಸೋಸಿಯೇಷನ್ ಅಧ್ಯಕ್ಷ ಹರಿಪ್ರಸಾದ್ ರೈ, ಅದಾನಿ ಪವರ್ ಕಾರ್ಪೋರೇಷನ್ ಅಧ್ಯಕ್ಷ ಕಿಶೋರ್ ಆಳ್ವ, ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಷನ್ ರಾಜ್ಯಾಧ್ಯಕ್ಷ ದೇವಿ ಪ್ರಸಾದ್ ಶೆಟ್ಟಿ, ಕಾಂಗ್ರೆಸ್ ಮುಖಂಡ ಪ್ರಸಾದ್ ರಾಜ್ ಕಾಂಚನ್ ಸೇರಿದಂತೆ ವಿವಿಧ ಕ್ಷೇತ್ರಗಳ ಗಣ್ಯರು ಭಾಗವಹಿಸಲಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಕಾಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವೈ. ಸುಕುಮಾರ್, ಹೆಜಮಾಡಿ ಗ್ರಾಮೀಣ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಪ್ರಬೋದ್ ಚಂದ್ರ ಹೆಜಮಾಡಿ, ಕೆಪಿಸಿಸಿ ಸಂಯೋಜಕ ಅಬ್ದುಲ್ ಅಜೀಜ್ ಹೆಜಮಾಡಿ, ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷ ಸುಧೀರ್ ಕರ್ಕೇರ, ಹೆಜಮಾಡಿ ಮಹಿಳಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ದೀಕ್ಷಾ ಕೆ., ಹಾಗೂ ಹೆಜಮಾಡಿ ಗ್ರಾಮೀಣ ಕಾಂಗ್ರೆಸ್ ಹಿಂದುಳಿದ ವರ್ಗಗಳ ಘಟಕದ ಅಧ್ಯಕ್ಷ ವಿಶಾಲ್ ವಿ. ಬಂಗೇರ ಉಪಸ್ಥಿತರಿದ್ದರು.

