ಕಸಾಪ ಉಡುಪಿ : ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜಿನ ಗ್ರಂಥಾಲಯಕ್ಕೆ ಪುಸ್ತಕಗಳ ಕೊಡುಗೆ
ಮನೆಯೇ ಗ್ರಂಥಾಲಯ ಅಭಿಯಾನದ ಅಂಗವಾಗಿ ಕಸಾಪ ದಿಂದ ಪುಸ್ತಕ ಕೊಡುಗೆ
(Udupi) ಉಡುಪಿ: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕ ಇದರ ವತಿಯಿಂದ ಮನೆಯೇ ಗ್ರಂಥಾಲಯ ಅಭಿಯಾನದ ಅಂಗವಾಗಿ ಉಡುಪಿ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜಿನ ಗ್ರಂಥಾಲಯಕ್ಕೆ ಪುಸ್ತಕಗಳನ್ನು ಹಸ್ತಾಂತರಿಸಲಾಯಿತು.
ಈ ಸಂದರ್ಭದಲ್ಲಿ ಕಸಾಪ ಉಡುಪಿ ತಾಲೂಕು ಅಧ್ಯಕ್ಷ ರವಿರಾಜ್ ಹೆಚ್.ಪಿ, ಪ್ರಭಾರ ಪ್ರಾಂಶುಪಾಲೆ ಡಾ. ಉಷಾ, ರಾಷ್ಟ್ರೀಯ ಸೇವಾಯೋಜನಾ ಘಟಕದ ಕಾರ್ಯಕ್ರಮಾಧಿಕಾರಿ ಶುಭಗೀತಾ, ಸಾಹಿತಿ ಸುಧಾ ಆಡುಕಳ, ಪದಾಧಿಕಾರಿಗಳಾದ ಸತೀಶ್ ಕೊಡವೂರು, ರಂಜನಿ ವಸಂತ್, ದೀಪಾ ಚಂದ್ರಕಾಂತ್ ಮನೆಯೇ ಗ್ರಂಥಾಲಯ ಅಭಿಯಾನದ ಸಂಚಾಲಕ ರಾಘವೇಂದ್ರ ಪ್ರಭು ಕವಾ೯ಲು ಮುಂತಾದವರು ಉಪಸ್ಥಿತರಿದ್ದರು.

