ಶ್ರೀ ಕ್ಷೇತ್ರ ಧರ್ಮಸ್ಥಳ : ಕಾಪು ತಾಲೂಕು 15 ನೇ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ ಸಮಾರೋಪ
ಕಾರ್ಯಕ್ರಮ ಉದ್ಘಾಟಿಸಿದ ಜನಜಾಗೃತಿ ವೇದಿಕೆಯ ಜಿಲ್ಲಾ ನಿಕಟ ಪೂರ್ವ ಅಧ್ಯಕ್ಷ ನವೀನ್ ಅಮೀನ್ ಶಂಕರಪುರ
(Kaup) ಕಾಪು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಆಯೋಜನೆಯ ಕಾಪುತಾಲೂಕು 15 ನೇ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮದ ಸಮಾರೋಪ ಸಮಾರಂಭವು ಬುಧವಾರ ಶಂಕರಪುರ ಸೈoಟ್ ಜೋನ್ಸ್ ಪ್ರೌಢ ಶಾಲೆಯಲ್ಲಿ ಜರಗಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜನಜಾಗೃತಿ ವೇದಿಕೆಯ ಜಿಲ್ಲಾ ನಿಕಟ ಪೂರ್ವ ಅಧ್ಯಕ್ಷರಾದ ನವೀನ್ ಅಮೀನ್ ಶಂಕರಪುರ ಉದ್ಘಾಟಿಸಿ ಶುಭ ಹಾರೈಸಿದರು.
ಸಂಪನ್ಮೂಲ ವ್ಯಕ್ತಿಯಾಗಿ ಪತ್ರಕರ್ತ ರಾಕೇಶ್ ಕುಂಜೂರ್ ರವರು ದುಷ್ಚಟ ಮುಕ್ತ ಸಮಾಜದಲ್ಲಿ ವಿದ್ಯಾರ್ಥಿಗಳ ಪಾತ್ರದ ಕುರಿತು ಮಾತನಾಡಿದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾಪು ತಾಲೂಕು ಯೋಜನಾಧಿಕಾರಿ ಶ್ರೀಮತಿ ಮಮತಾ ಶೆಟ್ಟಿ, ಶಾಲಾ ಮುಖ್ಯ ಶಿಕ್ಷಕ ಅಶ್ವಿನ್ ರೋಡ್ರಿಗಸ್, ಕಾಪು ತಾಲೂಕು ವೇದಿಕೆಯ ಪದಾಧಿಕಾರಿಗಳಾದ ಭುವನೇಶ್ ಕುರ್ಕಾಲು, ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು, ವಲಯ ಮೇಲ್ವಿಚಾರಕರಾದ ಶ್ರೀಮತಿ ಸರೀತಾ, ಸೇವಾಪ್ರತಿನಿಧಿ ಶ್ರೀಮತಿ ಸುನಂದ ಉಪಸ್ಥಿತರಿದ್ದರು.

