ಕಾಂಚನ್ ಅಟೋಮೊಬೈಲ್ ಸಂಸ್ಥೆಯಿಂದ ಉಡುಪಿ ಜಿಲ್ಲಾ ಪೊಲೀಸ್ ಇಲಾಖೆಗೆ ಬೊಲೆರೋ ಜೀಪ್ ಕೊಡುಗೆ
ಉಡುಪಿ ಎಸ್ಪಿ ಹರಿರಾಮ್ ಶಂಕರ್ ರವರಿಗೆ ಜೀಪಿನ ಕೀಲಿ ಹಸ್ತಾಂತರಿಸಿದ ಪ್ರಸಾದ್ ರಾಜ್ ಕಾಂಚನ್
(Udupi) ಉಡುಪಿ: ಕಾಂಚನ್ ಅಟೋಮೊಬೈಲ್ ಸಂಸ್ಥೆಯ ಮಾಲಕರಾದ ಪ್ರಸಾದ್ ರಾಜ್ ಕಾಂಚನ್ ಇವರು ತಮ್ಮ ಸಂಸ್ಥೆಯ ಸಿಎಸ್ ಆರ್ ಯೋಜನೆಯಡಿಯಲ್ಲಿ ಮಹೇಂದ್ರ ಕಂಪನಿಯ ಬೊಲೆರೋ ಜೀಪನ್ನು ಉಡುಪಿ ಜಿಲ್ಲಾ ಪೊಲೀಸ್ ಇಲಾಖೆಗೆ ಹಸ್ತಾಂತರಿಸಿದರು.
ಉಡುಪಿ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಪ್ರಸಾದ್ ರಾಜ್ ಕಾಂಚನ್ ರವರು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಹರಿರಾಮ್ ಶಂಕರ್ ರವರಿಗೆ ಜೀಪಿನ ಕೀಲಿ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಪೊಲೀಸ್ ಉಪಾಧೀಕ್ಷಕ ತಿಮ್ಮಪ್ಪ ಗೌಡ, ಪೊಲೀಸ್ ನಿರೀಕ್ಷಕ ರವಿ ಕುಮಾರ್ ಮತ್ತು ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಸಿಬ್ಬಂದಿ ಉಪಸ್ಥಿತರಿದ್ದರು.

