• Home  
  • ಉಡುಪಿ ಉಚ್ಚಿಲ ದಸರಾ 2026 ಉದ್ಘಾಟಿಸಿದ ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿಕೆ (Udupi Deputy Commissioner Swaroopa T.K. inaugurated the Udupi Uchila Dasara 2026.)
- ಜಿಲ್ಲಾಡಳಿತ - ಧಾರ್ಮಿಕ

ಉಡುಪಿ ಉಚ್ಚಿಲ ದಸರಾ 2026 ಉದ್ಘಾಟಿಸಿದ ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿಕೆ (Udupi Deputy Commissioner Swaroopa T.K. inaugurated the Udupi Uchila Dasara 2026.)

Share:      ಉಡುಪಿ ಉಚ್ಚಿಲ ದಸರಾ 2026 ಉದ್ಘಾಟಿಸಿದ ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿಕೆ ವಸ್ತು ಪ್ರದರ್ಶನ ಉದ್ಘಾಟಿಸಿದ ಉಡುಪಿ ಪೊಲೀಸ್‌ ವರಿಷ್ಠಾಧಿಕಾರಿ ಜಯರಾಮ ಶಂಕರ್ (ಚಿತ್ರ ಕೃಪೆ : ಸಚಿನ್‌ ಉಚ್ಚಿಲ)  (Uchila) ಉಚ್ಚಿಲ: ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಅ. 11ರಿಂದ 21ರವರೆಗೆ ನಡೆಯಲಿರುವ ಐದನೇ ವರ್ಷದ ಉಡುಪಿ ಉಚ್ಚಿಲ ದಸರಾ-2026 ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿಕೆಯವರು ಭಾನುವಾರ ಬೆಳಿಗ್ಗೆ ಉದ್ಘಾಟಿಸಿದರು.   ದಸರಾ ವಸ್ತುಪ್ರದರ್ಶನಕ್ಕೆ ಉಡುಪಿ […]

 (Uchila) ಉಚ್ಚಿಲ: ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಅ. 11ರಿಂದ 21ರವರೆಗೆ ನಡೆಯಲಿರುವ ಐದನೇ ವರ್ಷದ ಉಡುಪಿ ಉಚ್ಚಿಲ ದಸರಾ-2026 ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿಕೆಯವರು ಭಾನುವಾರ ಬೆಳಿಗ್ಗೆ ಉದ್ಘಾಟಿಸಿದರು.

  ದಸರಾ ವಸ್ತುಪ್ರದರ್ಶನಕ್ಕೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಚಾಲನೆ ನೀಡಿದರು.

  ಉದ್ಘಾಟನೆಯ ಪೂರ್ವಭಾವಿಯಾಗಿ ಪೂಜಾ ವಿಧಿಯನ್ನು ದೇವಳದ ಪ್ರಧಾನ ಅರ್ಚಕ ಕೆವಿ ರಾಘವೇಂದ್ರ ಉಪಾಧ್ಯಾಯ ಮತ್ತು ವಿಷ್ಣುಮೂರ್ತಿ ಶ್ರೀನಿವಾಸ ಉಪಾಧ್ಯಾಯರವರು ಮಾತೆ ಶಾರದೆಗೆ ಪೂಜೆ ಸಲ್ಲಿಸಿ ಜಿಲ್ಲಾಧಿಕಾರಿಯವರಿಗೆ ಪ್ರಸಾದ ವಿತರಿಸಿದರು.

 ಜಿಲ್ಲಾಧಿಕಾರಿ ಸ್ವರೂಪ ಅವರನ್ನು ದೇವಸ್ಥಾನದ ವತಿಯಿಂದ ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಗೌರವ ಸಲಹೆಗಾರರಾದ ನಾಡೋಜಾ ಡಾ. ಜಿ ಶಂಕರ್‌ ಅವರನ್ನು ಸನ್ಮಾನಿಸಲಾಯಿತು.

  ಈ ಸಂದರ್ಭ ನಾಡೋಜಾ ಡಾ. ಜಿ ಶಂಕರ್‌ ಪ್ರಾಸ್ತಾವಿಕವಾಗಿ ಮಾತನಾಡಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಸರ್ಕಾರ ಹಾಗೂ ಭಕ್ತಾಭಿಮಾನಿಗಳ ಸಹಕಾರದೊಂದಿಗೆ ಶ್ರೀ ಕ್ಷೇತ್ರ ಉಚ್ಚಿಲದ ಶ್ರೀಮತಿ ಶಾಲಿನಿ ಡಾ. ಜಿ. ಶಂಕರ್ ಸಭಾಂಗಣದಲ್ಲಿ 11 ದಿನಗಳ ಕಾಲ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಹಾಗೂ ಸಾಮಾಜಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಕಳೆದ ನಾಲ್ಕು ವರ್ಷಗಳಲ್ಲಿ ಜನಮನ್ನಣೆ ಗಳಿಸಿರುವ ಉತ್ಸವವು ಐದನೇ ವರ್ಷಕ್ಕೆ ಕಾಲಿಟ್ಟಿದ್ದು, ಈ ಬಾರಿಯೂ ವೈಭವದ ಆಚರಣೆಗೆ ಸಜ್ಜಾಗಿದೆ ಎಂದರು.

  ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ., ನವರಾತ್ರಿ ಹಬ್ಬವು ನಮ್ಮಲ್ಲಿರುವ ಧೈರ್ಯ, ಶಕ್ತಿ ಮತ್ತು ಜ್ಞಾನವನ್ನು ಜಾಗೃತಗೊಳಿಸಿ, ನಮ್ಮ ಸಾಮರ್ಥ್ಯವನ್ನು ಗುರುತಿಸಿಕೊಳ್ಳಲು ಪ್ರೇರಣೆ ನೀಡುತ್ತದೆ. ದೇವಿಯ ಆರಾಧನೆಯ ಮೂಲಕ ಆಶೀರ್ವಾದ ಪಡೆದು ಜೀವನದಲ್ಲಿ ಸಕಾರಾತ್ಮಕತೆ ಹಾಗೂ ಆತ್ಮವಿಶ್ವಾಸ ಬೆಳೆಸಿಕೊಳ್ಳಬಹುದು. ನಮ್ಮೊಳಗಿನ ಶಕ್ತಿಯನ್ನು ಅರಿತು ಅದನ್ನು ಸದುಪಯೋಗಪಡಿಸಿಕೊಳ್ಳುವ ಸಂಕಲ್ಪದೊಂದಿಗೆ ದೇವಿಯ ಕೃಪೆಗೆ ಪಾತ್ರರಾಗೋಣ ಎಂದರು.
  ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ದ.ಕ. ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ.ಕೋಟ್ಯಾನ್ ಬೆಳ್ಳಂಪಳ್ಳಿ, ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷ ಗಿರಿಧರ ಸುವರ್ಣ ಮೂಳೂರು, ಉಡುಪಿ ಉಚ್ಚಿಲ ದಸರಾ ಸಮಿತಿ ಅಧ್ಯಕ್ಷ ವಿನಯ್ ಕರ್ಕೇರ, ಮಹಿಳಾ ಮಹಾಜನ ಸಂಘದ ಅಧ್ಯಕ್ಷೆ ಕವಿತಾ ಶರತ್, ಮಹಾಜನ ಸಂಘದ ಉಪಾಧ್ಯಕ್ಷ ಮೋಹನ್‌ ಬೇಂಗ್ರೆ, ಪ್ರಧಾನ ಕಾರ್ಯದರ್ಶಿ ಶರಣ್ ಕುಮಾರ್ ಮಟ್ಟು, ಕೋಶಾಧಿಕಾರಿ ರತ್ನಾಕರ ಸಾಲ್ಯಾನ್, ದಸರಾ ಸಮಿತಿ ಪ್ರಧಾನ ಕಾರ್ಯದರ್ಶಿ ಸತೀಶ್ ಕುಂದರ್ ಮಲ್ಪೆ, ನಾಲ್ಕುಪಟ್ಟ ಮೊಗವೀರ ಸಂಘದ ಅಧ್ಯಕ್ಷ ಮನೋಜ್ ಕಾಂಚನ್, ಮಹಿಳಾ ಸಂಘ ಅಧ್ಯಕ್ಷೆ ಸುಗುಣ ಕರ್ಕೇರ, ಶ್ರೀಪತಿ ಭಟ್‌ ಉಚ್ಚಿಲ, ದಿನೇಶ್‌ ಎರ್ಮಾಳು, ವಾಸುದೇವ ಸಾಲ್ಯಾನ್‌, ಗುಂಡು ಬಿ ಅಮೀನ್‌, ರತ್ನಾಕರ ಸಾಲ್ಯಾನ್ ಮಲ್ಪೆ, ವಿಶ್ವಾಸ್‌ ಅಮೀನ್‌, ದೇವಳದ ಪ್ರಬಂಧಕ ಸತೀಶ್ ಅಮೀನ್ ಪಡುಕೆರೆ ಉಪಸ್ಥಿತರಿದ್ದರು,

Leave a comment

Your email address will not be published. Required fields are marked *

eMedia Kannada  @2025. All Rights Reserved.