• Home  
  •  ಜಿಲ್ಲೆಯಲ್ಲಿ ಕುಸುಮ್-ಸಿ ಯೋಜನೆ ಅನುಷ್ಠಾನ ವಿಳಂಬ: ಸಿಎಂ ಡಿ.ಕೆ.ಶಿಗೆ ಸಂಸದ ಕೋಟ ದೂರು (Delay in implementation of KUSUM-C scheme in the district: MP Kota complains to CM D.K. Shivakumar)
- PROBLEMS

 ಜಿಲ್ಲೆಯಲ್ಲಿ ಕುಸುಮ್-ಸಿ ಯೋಜನೆ ಅನುಷ್ಠಾನ ವಿಳಂಬ: ಸಿಎಂ ಡಿ.ಕೆ.ಶಿಗೆ ಸಂಸದ ಕೋಟ ದೂರು (Delay in implementation of KUSUM-C scheme in the district: MP Kota complains to CM D.K. Shivakumar)

Share: ಜಿಲ್ಲೆಯಲ್ಲಿ ಕುಸುಮ್-ಸಿ ಯೋಜನೆ ಅನುಷ್ಠಾನ ವಿಳಂಬ: ಸಿಎಂ ಡಿ.ಕೆ.ಶಿಗೆ ಸಂಸದ ಕೋಟ ದೂರು ಉಚ್ಚಿಲದಲ್ಲಿ ದೂರು ನೀಡಿದ ಸಂಸದ ಕೋಟ (Uchila) ಉಚ್ಚಿಲ: ಉಡುಪಿ ಜಿಲ್ಲೆಯಲ್ಲಿ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಕುಸುಮ್-ಸಿ (Kusum -C) ಯೋಜನೆಯ ಅನುಷ್ಠಾನಕ್ಕೆ ಅರಣ್ಯ ಇಲಾಖೆಯ ಮರಗಳ ತೆರವು ಪ್ರಕ್ರಿಯೆಯಲ್ಲಿನ ವಿಳಂಬ ಅಡ್ಡಿಯಾಗಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಉಡುಪಿ–ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿಯವರು ಈ ಕುರಿತು ಉಚ್ಚಿಲಕ್ಕೆ ಆಗಮಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ರವರಿಗೆ ಲಿಖಿತ ದೂರು ಸಲ್ಲಿಸಿದ್ದಾರೆ.   […]

(Uchila) ಉಚ್ಚಿಲ: ಉಡುಪಿ ಜಿಲ್ಲೆಯಲ್ಲಿ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಕುಸುಮ್-ಸಿ (Kusum -C) ಯೋಜನೆಯ ಅನುಷ್ಠಾನಕ್ಕೆ ಅರಣ್ಯ ಇಲಾಖೆಯ ಮರಗಳ ತೆರವು ಪ್ರಕ್ರಿಯೆಯಲ್ಲಿನ ವಿಳಂಬ ಅಡ್ಡಿಯಾಗಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಉಡುಪಿ–ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿಯವರು ಈ ಕುರಿತು ಉಚ್ಚಿಲಕ್ಕೆ ಆಗಮಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ರವರಿಗೆ ಲಿಖಿತ ದೂರು ಸಲ್ಲಿಸಿದ್ದಾರೆ.

  ಕುಸುಮ್-ಸಿ ಯೋಜನೆಯಡಿ ಬೈಂದೂರು ತಾಲೂಕಿನ ಕಿರಿಮಂಜೇಶ್ವರದಲ್ಲಿ 13 ಎಕರೆ, ಬ್ರಹ್ಮಾವರ ತಾಲ್ಲೂಕಿನ ಕಾವಡಿಯಲ್ಲಿ 7.5 ಎಕರೆ ಹಾಗೂ ಕಾಪು ತಾಲ್ಲೂಕಿನ ಬೆಳ್ಳೆ ಗ್ರಾಮದಲ್ಲಿ 10 ಎಕರೆ ಜಾಗವನ್ನು ಸೌರ ವಿದ್ಯುತ್ ಘಟಕಗಳ ಸ್ಥಾಪನೆಗಾಗಿ ಗುರುತಿಸಲಾಗಿದೆ.  

  ಮುಖ್ಯ ಕಾರ್ಯದರ್ಶಿಯವರು ಅರಣ್ಯಾಧಿಕಾರಿಗಳಿಗೆ ಸ್ವತಃ ನಿರ್ದೇಶನ ನೀಡಿ, ಸಮಸ್ಯೆ ಪರಿಹಾರ ಮಾಡುವಂತೆ ನಿರ್ದೇಶಿಸಿದ್ದರು. ಮತ್ತು ರಾಜ್ಯ ಅರಣ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹಾಗೂ ಸಂಬಂಧಪಟ್ಟ ಹಿರಿಯ ಅಧಿಕಾರಿಗಳನ್ನು ಭೇಟಿಯಾಗಿ ಯೋಜನೆಗೆ ಎದುರಾಗಿರುವ ಅಡೆತಡೆಗಳನ್ನು ನಿವಾರಿಸುವಂತೆ ಮನವಿ ಮಾಡಲಾಗಿತ್ತು. ಇದಲ್ಲದೆ, ಜಿಲ್ಲಾಧಿಕಾರಿಗಳು ಹಾಗೂ ಅರಣ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಐದಕ್ಕಿಂತಲೂ ಹೆಚ್ಚು ಬಾರಿ ಸಭೆ ನಡೆಸಿ ಸಮಸ್ಯೆ ಪರಿಹಾರಕ್ಕೆ ಪ್ರಯತ್ನಿಸಲಾಗಿದೆ.

  ಆಡಳಿತಾತ್ಮಕ ವಿಳಂಬದಿಂದ ಕೇಂದ್ರ ಸರ್ಕಾರದ ಸುಮಾರು ₹22 ಕೋಟಿ ವೆಚ್ಚದ ಯೋಜನೆಗೆ ಮತ್ತಷ್ಟು ಹಿನ್ನಡೆಯಾಗದಂತೆ ಹಾಗೂ ಜಿಲ್ಲೆಯ ರೈತರಿಗೆ ಯೋಜನೆಯ ಪ್ರಯೋಜನ ಸಕಾಲದಲ್ಲಿ ದೊರೆಯುವಂತೆ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರವರನ್ನು ಮತ್ತೊಮ್ಮೆ ಲಿಖಿತ ದೂರಿನ ಮೂಲಕ ಆಗ್ರಹಿಸಿದ್ದಾರೆ.

Leave a comment

Your email address will not be published. Required fields are marked *

eMedia Kannada  @2025. All Rights Reserved.