ಬೆಳ್ಕಳೆ ಶ್ರೀ ಮಹಾಲಿಂಗೇಶ್ವರ ದೇಗುಲದಲ್ಲಿ ಸಾಮೂಹಿಕ ಚಂಡಿಕಾಯಾಗ ಹಾಗೂ ಅನ್ನಸಂತರ್ಪಣೆ
ಪುತ್ತೂರು ಶ್ರೀನಿವಾಸ ತಂತ್ರಿ ಯವರ ನೇತೃತ್ವದಲ್ಲಿ ನಡೆದ ಧಾರ್ಮಿಕ ವಿಧಿಗಳು
(Udupi) ಉಡುಪಿ: ಬೆಳ್ಕಳೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನವರಾತ್ರಿಯ ಅಂಗವಾಗಿ ಪುತ್ತೂರು ಶ್ರೀನಿವಾಸ ತಂತ್ರಿ ಯವರ ನೇತೃತ್ವದಲ್ಲಿ ಶ್ರೀ ದುರ್ಗಾಪರಮೇಶ್ವರೀ ದೇವಿಯ ಸನ್ನಿಧಿಯಲ್ಲಿ ವಿಜಯದಶಮಿ ಪ್ರಯುಕ್ತ ಸಾಮೂಹಿಕ ಚಂಡಿಕಾಯಾಗ ನೆರವೇರಿತು.
ಸಾರ್ವಜನಿಕ ಅನ್ನಸಂತರ್ಪಣೆಯಲ್ಲಿ ಸಾವಿರಾರು ಭಕ್ತಾಧಿಗಳು ಮಹಾ ಅನ್ನ ಪ್ರಸಾದ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಪ್ರಧಾನ ಅರ್ಚಕ ಗೋಪಾಲಕೃಷ್ಣ ಭಟ್, ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಪ್ರಖ್ಯಾತ್ ಶೆಟ್ಟಿ, ಸಮಿತಿ ಸದಸ್ಯರುಗಳಾದ ಸುಂದರ ಶೆಟ್ಟಿ, ವೆಂಕಟೇಶ್ ಕುಲಾಲ್, ಪ್ರಭಾಕರ ಅಂಚನ್, ಮಮತಾ ಶೆಟ್ಟಿ, ಅನುಷಾ ಆಚಾರ್ಯ, ಸತೀಶ್, ಮೊಕ್ತೇಸರ ಐತು ಎಂ ಶೆಟ್ಟಿ, ಭಕ್ತ ವೃಂದದ ಅಧ್ಯಕ್ಷ ಉದಯ ಕುಮಾರ್ ಶೆಟ್ಟಿ, ಜೀರ್ಣೋದ್ದಾರ ಸಮಿತಿಯ ಶಂಬು ಶೆಟ್ಟಿ, ದೇವದಾಸ್ ಸುವರ್ಣ, ನಿಕಟಪೂರ್ವ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪ್ರಶಾಂತ್ ಶೆಟ್ಟಿ, ಅರ್ಚಕ ವೃಂದ, ಭಕ್ತಭಿಮಾನಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

