• Home  
  • ಬಂಟಕಲ್‌ ತಾಂತ್ರಿಕ ಮಹಾವಿದ್ಯಾಲಯದ ಪ್ರಥಮ ವರ್ಷದ ಎಂಬಿಎ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಕಾರ್ಯಕ್ರಮ (Orientation Programme for MBA Students at SMVITM, Bantakal)
- ಶಾಲಾ ಕಾಲೇಜು

ಬಂಟಕಲ್‌ ತಾಂತ್ರಿಕ ಮಹಾವಿದ್ಯಾಲಯದ ಪ್ರಥಮ ವರ್ಷದ ಎಂಬಿಎ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಕಾರ್ಯಕ್ರಮ (Orientation Programme for MBA Students at SMVITM, Bantakal)

Share:    ಬಂಟಕಲ್‌ ತಾಂತ್ರಿಕ ಮಹಾವಿದ್ಯಾಲಯದ ಪ್ರಥಮ ವರ್ಷದ ಎಂಬಿಎ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಕಾರ್ಯಕ್ರಮ ಕಾರ್ಯಕ್ರಮ ಉದ್ಘಾಟಿಸಿದ ಫೆಡರಲ್ ಬ್ಯಾಂಕ್ ನ ಉಪಾಧ್ಯಕ್ಷ ಸತೀಶ್ ಜೋಶಿ   (Bantakal) ಬಂಟಕಲ್: ಬಂಟಕಲ್‌ ಶ್ರೀ ಮಧ್ವ ವಾದಿರಾಜ ತಾತ್ರಿಕ ಮಹಾವಿದ್ಯಾಲಯದ  ಎಂಬಿಎ ವಿಭಾಗದ 2026-27 ಸಾಲಿನ ವಿದ್ಯಾರ್ಥಿಗಳಿಗೆ  “ಆರಂಭ 2 A 26” ಮಾರ್ಗದರ್ಶನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.   ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಫೆಡರಲ್ ಬ್ಯಾಂಕ್ ಲಿಮಿಟೆಡ್‌ನ ಉಪಾಧ್ಯಕ್ಷರಾದ ಸತೀಶ್ ಜೋಶಿ ಇವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಅವರು […]

  (Bantakal) ಬಂಟಕಲ್: ಬಂಟಕಲ್‌ ಶ್ರೀ ಮಧ್ವ ವಾದಿರಾಜ ತಾತ್ರಿಕ ಮಹಾವಿದ್ಯಾಲಯದ  ಎಂಬಿಎ ವಿಭಾಗದ 2026-27 ಸಾಲಿನ ವಿದ್ಯಾರ್ಥಿಗಳಿಗೆ  “ಆರಂಭ 2 A 26” ಮಾರ್ಗದರ್ಶನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

  ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಫೆಡರಲ್ ಬ್ಯಾಂಕ್ ಲಿಮಿಟೆಡ್‌ನ ಉಪಾಧ್ಯಕ್ಷರಾದ ಸತೀಶ್ ಜೋಶಿ ಇವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಅವರು ಮಾತನಾಡಿ, ವೃತ್ತಿ ಜೀವನದಲ್ಲಿ ಯಶಸ್ಸು ಸಾಧಿಸಲು ಕಠಿನ ಪರಿಶ್ರಮ, ಶಿಸ್ತು, ತಾಳ್ಮೆ ಹಾಗೂ ಕೌಶಲ್ಯಾಭಿವೃದ್ಧಿಯ ಮಹತ್ವದ ಬಗ್ಗೆ  ವಿವರಿಸಿದರು. 

  ಶ್ರೀ ಸೋದೆ ವಾದಿರಾಜ ಮಠ ಶಿಕ್ಷಣ ಪ್ರತಿಷ್ಠಾನದ ಕಾರ್ಯದರ್ಶಿಗಳಾದ ರತ್ನಕುಮಾರ್ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಇಂಗ್ಲೀಷ್ ಭಾಷಾ ಸಾಮರ್ಥ್ಯ ಮತ್ತು ಸಾಮಾನ್ಯ ಜ್ಞಾನವನ್ನು ವೃದ್ಧಿಸಿಕೊಳ್ಳಲು ಪ್ರತಿದಿನ ದಿನಪತ್ರಿಕೆಗಳನ್ನು ಓದುವ ಅಭ್ಯಾಸ ಬೆಳೆಸಿಕೊಳ್ಳಬೇಕೆಂದು ಸಲಹೆ ನೀಡಿದರು.

  ಸಂಸ್ಥೆಯ ಪ್ರಾಂಶುಪಾಲ ಡಾ. ನಾಗರಾಜ್ ಭಟ್ ರವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ಸಮಗ್ರ ಶಿಕ್ಷಣ, ಪ್ರಾಯೋಗಿಕ ಕೌಶಲ್ಯಗಳ ಅಭಿವೃದ್ಧಿ ಹಾಗೂ ವ್ಯಕ್ತಿತ್ವ ವಿಕಸನಕ್ಕೆ ಹೆಚ್ಚಿನ ಆದ್ಯತೆ ನೀಡುವಂತೆ ಪ್ರೇರೇಪಿಸಿದರು.

  ಎಂಬಿಎ ವಿಭಾಗದ ಮುಖ್ಯಸ್ಥರಾದ ಡಾ. ಮಹೇಶ್ ಎಂ ವಂಜೇರಿ ಅವರು ಸ್ವಾಗತಿಸಿದರು. ಪ್ರಾಧ್ಯಾಪಕಿ ಡಾ. ನೇಹಾ ಲಖೋಟಿಯಾ ಕಾರ್ಯಕ್ರಮ ನಿರೂಪಿಸಿದರು. ಪ್ರಾಧ್ಯಾಪಕ ಸ್ಟೀವನ್ ರೋಬರ್ಟ್ ಟೆಲ್ಲಿಸ್ ವಂದಿಸಿದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.