ಶ್ರೀ ಕ್ಷೇತ್ರ ಧರ್ಮಸ್ಥಳ. ಗ್ರಾ. ಯೋ. ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ, ಕಾರ್ಯಕ್ರಮ
ವಿಚಾರಗೋಷ್ಠಿ ಉದ್ಘಾಟಿಸಿದ ಯೋಜನೆಯ ಪ್ರಾದೇಶಿಕ ನಿರ್ದೇಶಕ ಆನಂದ ಸುವರ್ಣ
Kaup) ಕಾಪು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ನ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ ಶನಿವಾರ ಕಾಪು ಶ್ರೀ ವೀರಭದ್ರ ದೇವಸ್ಥಾನದ ಸಭಾಭವನದಲ್ಲಿ ನೆರವೇರಿತು.
ವಿಚಾರಗೋಷ್ಠಿಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ನ ಪ್ರಾದೇಶಿಕ ನಿರ್ದೇಶಕ ಆನಂದ ಸುವರ್ಣ ಉದ್ಘಾಟಿಸಿದರು.
ಅವರು ಮಾತನಾಡಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಹೆಸರಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಪರಮಪೂಜ್ಯ ಪದ್ಮವಿಭೂಷಣ, ರಾಜರ್ಷಿ ಡಾ. ವೀರೇಂದ್ರ ಹೆಗ್ಗಡೆಯವರು ಮತ್ತು ಮಾತೃಶ್ರೀ ಡಾ. ಹೇಮಾವತಿ ವಿ. ಹೆಗ್ಗಡೆಯವರ ಶುಭಾಶೀರ್ವಾದದೊಂದಿಗೆ ಮಹಿಳೆಯರ ಸಬಲೀಕರಣಕ್ಕಾಗಿ, ಸಾಮಾಜಿಕ ಕಾರ್ಯಕ್ಕಾಗಿ, ಆರೋಗ್ಯ, ಶಿಕ್ಷಣಕ್ಕಾಗಿಗಾಗಿ ಹತ್ತು ಹಲವು ಕಾರ್ಯಗಳನ್ನು ಹಮ್ಮಿಕೊಂಡಿದ್ದಾರೆ. ಕುಹಕಿಗಳ ಯಾವುದೇ ಮಾತಿಗೆ ಬಗ್ಗದೆ ಖಾವಂದರ ಸೇವೆ ನಿತ್ಯ ನಿರಂತರವಾಗಿ ನಡೆಯುತ್ತಿದೆ ಎಂದೂ ಆನಂದ ಸುವರ್ಣ ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಿರ್ವ ಮಹಿಳಾ ಮಂಡಳಿಯ ಗೌರವಾಧ್ಯಕ್ಷೆ ಶ್ರೀಮತಿ ಬಬಿತಾ ಅರಸ ವಹಿಸಿದ್ದರು.
ಕಾಪು ತಾಲೂಕು ತಾಲೂಕು ಜನಜಾಗೃತಿ ವೇದಿಕೆಯ ಅಧ್ಯಕ್ಷ ಸತ್ಯೇಂದ್ರ ಪೈ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ಶ್ರೀಮತಿ ಗೀತಾಂಜಲಿ ಸುವರ್ಣ, ಕಾಪು ವ್ಯವಸಾಯಿಕ ಸಂಘದ ಅಧ್ಯಕ್ಷ ಕಾಪು ದಿವಾಕರ ಶೆಟ್ಟಿ, ಕಾಪು ಶ್ರೀ ವೀರಭದ್ರ ದೇವಸ್ಥಾನದ ಆಡಳಿತ ಮೊಕ್ತೇಸರ ಅಶೋಕ ಶೆಟ್ಟಿಗಾರ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾಪು ತಾಲೂಕು ಯೋಜನಾಧಿಕಾರಿ ಶ್ರೀಮತಿ ಮಮತಾ ಶೆಟ್ಟಿ ಮಾತನಾಡಿದರು.
ಸಂಪನ್ಮೂಲ ವ್ಯಕ್ತಿ ಕಲ್ಯಾ ಕಾರ್ಕಳದ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕಿ ಶ್ರೀಮತಿ ಶಾರದ ಆರ್. ಶೇಟ್ ರವರು “ಮಹಿಳೆ ಸುಂದರ ಬದುಕನ್ನು ರೂಪಿಸಿಕೊಳ್ಳುವಲ್ಲಿ ನೈತಿಕ ಮೌಲ್ಯಗಳ ಅವಶ್ಯಕತೆ” ಬಗ್ಗೆ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಹೂಗುಚ್ಚ ಸ್ಪರ್ಧೆ, ರಂಗೋಲಿ ಸ್ಪರ್ಧೆ, ಕುಣಿತ ಭಜನೆ, ನೃತ್ಯ ಪ್ರದರ್ಶನ ನೆರವೇರಿತು.
ಈ ಸಂದರ್ಭ ಜ್ಞಾನವಿಕಾಸ ಸಮನ್ವಯಾಧಿಕಾರಿ ಶ್ರೀಮತಿ ಸವಿತಾ, ಕೇಂದ್ರ ಒಕ್ಕೂಟದ ಅಧ್ಯಕ್ಷ ರಾಘವೇಂದ್ರ ಶೆಟ್ಟಿ, ಸೇವಾ ಪ್ರತಿನಿಧಿಗಳು, ಸಂಯೋಜಕಿಯರು ಮತ್ತು ಸರ್ವ ಸದಸ್ಯರು ಉಪಸ್ಥಿತರಿದ್ದರು.
ಯೋಜನೆಯ ಸೂಡಾ ಕೇಂದ್ರದ ಸದಸ್ಯರು ಪ್ರಾರ್ಥಿಸಿದರು. ಯೋಜನಾಧಿಕಾರಿ ಶ್ರೀಮತಿ ಮಮತಾ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು. ಆಶಾ ಮಜೂರು ನಿರೂಪಿಸಿದರು. ಮೇಲ್ವಿಚಾರಕಿ ಶ್ರೀಮತಿ ವಿನುತಾ ವಂದಿಸಿದರು.

