ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ ಕರ್ನಾಟಕ ರಾಜ್ಯೋತ್ಸವ ಆಚರಣೆ
ಉಡುಪಿ ಗೀತಾಂಜಲಿ ಶಾಪರ್ ಸಿಟಿಯಲ್ಲಿರುವ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್
(Udupi) ಉಡುಪಿ: ಗೀತಾಂಜಲಿ ಶಾಪರ್ ಸಿಟಿಯಲ್ಲಿರುವ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್‌ನ ಉಡುಪಿ ಮಳಿಗೆಯಲ್ಲಿ ಕರ್ನಾಟಕ ರಾಜ್ಯೋತ್ಸವವನ್ನು ಭಾನುವಾರ ಬೆಳಿಗ್ಗೆ ಸಂಭ್ರಮದಿಂದ ಆಚರಿಸಲಾಯಿತು.
ಶಾಖಾ ಮುಖ್ಯಸ್ಥರಾದ ವಿಜಯ್ ಕುಮಾರ್ ರವರು ಧ್ವಜಾರೋಹಣ ನೆರವೇರಿಸಿ, ಎಲ್ಲರಿಗೂ ಕರ್ನಾಟಕ ರಾಜ್ಯೋತ್ಸವದ ಶುಭ ಹಾರೈಸಿದರು.
ಕರ್ನಾಟಕ ರಾಜ್ಯೋತ್ಸವ ಹಾಗೂ ಮಲಬಾರ್ ದಿನದ ಅಂಗವಾಗಿ ಅಜ್ಜರಕಾಡು ಪಾರ್ಕ್‌ನಲ್ಲಿ ಸ್ವಚ್ಛತಾ ಶ್ರಮದಾನ ಕಾರ್ಯಕ್ರಮವನ್ನೂ ಹಮ್ಮಿಕೊಳ್ಳಲಾಯಿತು.
ಈ ಸಂದರ್ಭದಲ್ಲಿ ಶಾಖಾ ವ್ಯವಸ್ಥಾಪಕರಾದ ಪುರಂದರ ತಿಂಗಳಾಯ, ಹರೀಶ್ ಎಂ.ಜಿ., ರಾಘವೇಂದ್ರ, ಸುಧಾಕರ್, ಮಾರುಕಟ್ಟೆ ಉಸ್ತುವಾರಿ ತಂಝೀಮ್ ಶಿರ್ವ, ಗ್ರಾಹಕರು ಹಾಗೂ ಕನ್ನಡಾಭಿಮಾನಿಗಳು ಉಪಸ್ಥಿತರಿದ್ದರು.

