• Home  
  • ವಕೀಲರ ಮೇಲಿನ ಹಲ್ಲೆ ಖಂಡಿಸಿ ಬ್ಯಾಡಗಿ ವಕೀಲರ ಸಂಘದಿಂದ ಪ್ರತಿಭಟನೆ (Byadagi Bar Association protests against assault on lawyers)
- protest

ವಕೀಲರ ಮೇಲಿನ ಹಲ್ಲೆ ಖಂಡಿಸಿ ಬ್ಯಾಡಗಿ ವಕೀಲರ ಸಂಘದಿಂದ ಪ್ರತಿಭಟನೆ (Byadagi Bar Association protests against assault on lawyers)

Share: ವಕೀಲರ ಮೇಲಿನ ಹಲ್ಲೆ ಖಂಡಿಸಿ ಬ್ಯಾಡಗಿ ವಕೀಲರ ಸಂಘದಿಂದ ಪ್ರತಿಭಟನೆ    ವಕೀಲರ ರಕ್ಷಣಾ ಕಾಯ್ದೆ ಜಾರಿಗೆ ಆಗ್ರಹಿಸಿ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಕೆ. (Byadagi) ಬ್ಯಾಡಗಿ : ರಾಜ್ಯದ ವಿವಿಧ ಭಾಗಗಳಲ್ಲಿ ವಕೀಲರ ಮೇಲೆ ನಡೆಯುತ್ತಿರುವ ಹಲ್ಲೆ, ದೌರ್ಜನ್ಯ ಹಾಗೂ ಹತ್ಯೆ ಪ್ರಕರಣಗಳನ್ನು ಖಂಡಿಸಿ, ವಕೀಲರಿಗೆ ಸೂಕ್ತ ರಕ್ಷಣೆ ಒದಗಿಸುವಂತೆ ಆಗ್ರಹಿಸಿ ಮಂಗಳವಾರ ಬ್ಯಾಡಗಿ ವಕೀಲರ ಸಂಘದ ವತಿಯಿಂದ ತಹಶೀಲ್ದಾರ್ ಅವರ ಮೂಲಕ ಕರ್ನಾಟಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.   ವಕೀಲರು ನ್ಯಾಯಾಂಗ ವ್ಯವಸ್ಥೆಯ […]

(Byadagi) ಬ್ಯಾಡಗಿ : ರಾಜ್ಯದ ವಿವಿಧ ಭಾಗಗಳಲ್ಲಿ ವಕೀಲರ ಮೇಲೆ ನಡೆಯುತ್ತಿರುವ ಹಲ್ಲೆ, ದೌರ್ಜನ್ಯ ಹಾಗೂ ಹತ್ಯೆ ಪ್ರಕರಣಗಳನ್ನು ಖಂಡಿಸಿ, ವಕೀಲರಿಗೆ ಸೂಕ್ತ ರಕ್ಷಣೆ ಒದಗಿಸುವಂತೆ ಆಗ್ರಹಿಸಿ ಮಂಗಳವಾರ ಬ್ಯಾಡಗಿ ವಕೀಲರ ಸಂಘದ ವತಿಯಿಂದ ತಹಶೀಲ್ದಾರ್ ಅವರ ಮೂಲಕ ಕರ್ನಾಟಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

  ವಕೀಲರು ನ್ಯಾಯಾಂಗ ವ್ಯವಸ್ಥೆಯ ಪ್ರಮುಖ ಭಾಗವಾಗಿದ್ದು, ಸಮಾಜದಲ್ಲಿ ನ್ಯಾಯ ಮತ್ತು ಕಾನೂನಿನ ರಕ್ಷಣೆಗಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಅಂತಹ ವಕೀಲರ ಮೇಲೆಯೇ ಹಲ್ಲೆ ಮತ್ತು ಹತ್ಯೆ ನಡೆಯುತ್ತಿರುವುದು ಅತ್ಯಂತ ಖಂಡನೀಯವಾಗಿದೆ.

  ವಕೀಲರ ಮೇಲಿನ ದೌರ್ಜನ್ಯ ತಡೆಗಟ್ಟಲು ಪ್ರತ್ಯೇಕ ವಕೀಲರ ರಕ್ಷಣಾ ಕಾಯ್ದೆಯನ್ನು ಜಾರಿಗೆ ತರಬೇಕು. ವಕೀಲರ ಮೇಲೆ ಹಲ್ಲೆ ನಡೆಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಯಿತು.

  ಈ ಸಂದರ್ಭದಲ್ಲಿ ಬ್ಯಾಡಗಿ ವಕೀಲರ ಸಂಘದ ಅಧ್ಯಕ್ಷರಾದ ಆರ್.ಸಿ. ಶಿಡೇನೂರು, ಉಪಾಧ್ಯಕ್ಷ ಜಿ.ಬಿ. ಯಲಗಚ್ಚ, ಕಾರ್ಯದರ್ಶಿ ಎಚ್.ಜಿ. ಮುಳಗುಂದ, ಜಂಟಿ ಕಾರ್ಯದರ್ಶಿಎಂ.ಎಸ್. ಕುಮ್ಮೂರು, ಕಾರ್ಯಕಾರಿ ಸಮಿತಿ ಸದಸ್ಯರುಗಳಾದ ಶ್ರೀಮತಿ ಬಿ.ಎಸ್. ಕುಲಕರ್ಣಿ,  ಶ್ರೀಮತಿ ಮಂಜುಳಾ ಜಿಗಲಿ, ಎಸ್.ಎಚ್. ಕಟೇನಹಳ್ಳಿ, ಜಿ.ಎನ್. ಹುಚ್ಚೆರ್, ಎಸ್.ಪಿ. ಪೂಜಾರ, ಎಂ.ಎ. ಮುಲ್ಲಾ,  ಎಚ್.ಆರ್. ಲಮಾಣಿ, ಎಂ.ಜಿ. ಹಿರೇಮಠ, ಎಂ.ಎ. ಮಾಳಿ. ಎನ್ ಎಂ ಹುಬ್ಬಳ್ಳಿ ಇವರೊಂದಿಗೆ ಬ್ಯಾಡಗಿ ವಕೀಲರ ಸಂಘದ ಹಿರಿಯ ವಕೀಲರು, ಸದಸ್ಯರು ಹಾಗೂ ಅನೇಕ ವಕೀಲರು ಪ್ರತಿಭಟನೆಯಲ್ಲಿ ಪಾಲ್ಗೊಂಡು ಮನವಿ ಸಲ್ಲಿಸಿದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.