ಅದಾನಿ ಸಿಎಸ್‌ಆರ್ ಪಡುಬಿದ್ರಿ ಗ್ರಾ ಪಂ ವ್ಯಾಪ್ತಿಯಲ್ಲಿ ರೂ. 20 ಲಕ್ಷ ವೆಚ್ಚದ ಕಾಮಗಾರಿಗೆ ಭೂಮಿ ಪೂಜೆ.
ಭೂಮಿಪೂಜೆ ನೆರವೇರಿಸಿದ ಅದಾನಿ ಸಮೂಹದ ಅಧ್ಯಕ್ಷ ಕಿಶೋರ್ ಆಳ್ವ
(Padubidri) ಪಡುಬಿದ್ರಿ: ಎಲ್ಲೂರು ಗ್ರಾಮದ ಉಳ್ಳೂರಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಅದಾನಿ ಪವರ್ ಲಿಮಿಟೆಡ್ ಸಂಸ್ಥೆಯು ತನ್ನ ಸಿಎಸ್‌ಆರ್ ಅಂಗವಾದ ಅದಾನಿ ಫೌಂಡೇಶನ್ ವತಿಯಿಂದ ಪಡುಬಿದ್ರಿ ಗ್ರಾಮ ಪಂಚಾಯತ್ ಕಛೇರಿ ಆವರಣದಲ್ಲಿ ಅಂದಾಜು ರೂ. 20 ಲಕ್ಷ ವೆಚ್ಚದಲ್ಲಿ ನಿರ್ಮಿಸಲಿರುವ ಕಾಂಪೌಂಡ್ ಗೋಡೆ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಲಾಯಿತು.
ಅದಾನಿ ಸಮೂಹದ ಅಧ್ಯಕ್ಷರು ಹಾಗೂ ಕಾರ್ಯನಿರ್ವಾಹಕ ನಿರ್ದೇಶಕರಾದ ಕಿಶೋರ್ ಆಳ್ವ ಅವರು ಭೂಮಿಪೂಜೆಯನ್ನು ನೆರವೇರಿಸಿದರು.
ಈ ಕಾಮಗಾರಿಯು ಸುಮಾರು 190 ಮೀಟರ್ ಉದ್ದದ ಕಾಂಪೌಂಡ್ ಗೋಡೆಯ ನಿರ್ಮಾಣವನ್ನು ಒಳಗೊಂಡಿದೆ. ಗ್ರಾಮ ಪಂಚಾಯತ್ ತನ್ನ ವಾರ್ಷಿಕ ಕ್ರಿಯಾ ಯೋಜನೆಯಡಿ ಗುರುತಿಸಿ ಸಲ್ಲಿಸಿರುವ ಸ್ಥಳೀಯ ಮೂಲ ಸೌಕರ್ಯ ಅಭಿವೃದ್ಧಿಯ ಅಗತ್ಯತೆಗಳ ಆಧಾರದ ಮೇಲೆ ಈ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿದೆ.
ಈ ಸಂದರ್ಭದಲ್ಲಿ ಪಡುಬಿದ್ರಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾದ ಮಂಜುನಾಥ ಶೆಟ್ಟಿ, ಗ್ರಾಮ ಪಂಚಾಯತ್‌ನ ಮಾಜಿ ಸದಸ್ಯರು, ಸ್ಥಳೀಯ ಪ್ರಮುಖರು,
ಅದಾನಿ ಫೌಂಡೇಶನ್ ನ ಸಿಬ್ಬಂದಿಗಳಾದ ಅನುದೀಪ್ ಮತ್ತು ಧೀರಜ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

