ಕು. ಶಿಯಾ ಸಚಿನ್ ಪುತ್ರನ್ ರಾಜ್ಯ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟಕ್ಕೆ ಆಯ್ಕೆ
ಮುದರಂಗಡಿ ಸೈಂಟ್ ಫ್ರಾನ್ಸಿಸ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಕು. ಶಿಯಾ
(Padubidri) ಪಡುಬಿದ್ರಿ: ಮುದರಂಗಡಿ ಸೇಂಟ್ ಫ್ರಾನ್ಸಿಸ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಕುಮಾರಿ ಶಿಯಾ ಸಚಿನ್ ಪುತ್ರನ್ ರವರು ಕೊಕ್ಕರ್ಣೆಯ ಕರ್ನಾಟಕ ಪಬ್ಲಿಕ್ ಸ್ಕೂಲ್ ಕ್ರೀಡಾಂಗಣದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ 14 ವರ್ಷದ ವಯೋಮಾನದ ವಿಭಾಗದ 100 ಮೀಟರ್ ಓಟದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗುವ ಮೂಲಕ ಗಮನಾರ್ಹ ಸಾಧನೆ ಮಾಡಿದ್ದಾರೆ.
ಇದಲ್ಲದೆ, ಲಾಂಗ್ ಜಂಪ್ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದು, ವಿವಿಧ ಸ್ಪರ್ಧೆಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ ರಾಜ್ಯಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.
ಡಿಸೆಂಬರ್ 3 ಮತ್ತು 4ರಂದು ಮೈಸೂರಿನ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ನಡೆಯಲಿರುವ ರಾಜ್ಯಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಉಡುಪಿ ಜಿಲ್ಲಾ ತಂಡವನ್ನು ಶಿಯಾ ಸಚಿನ್ ಪುತ್ರನ್ ಪ್ರತಿನಿಧಿಸಲಿದ್ದಾರೆ.
ಶಿಯಾರವರು ಕುಮುಟಾ ಮೀನುಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ಸಚಿನ್ ಪುತ್ರನ್ ಕಾಪು ಹಾಗೂ ಅಮಿತಾ ಪುತ್ರನ್ ದಂಪತಿಗಳ ಪುತ್ರಿ.

