• Home  
  • ಗ್ಯಾರಂಟಿ ಅನುಷ್ಠಾನಕ್ಕೆ ಕುಂದಾಪುರ ಕಾಂಗ್ರೆಸ್ ಹರ್ಷ
- ಕರಾವಳಿ - ರಾಜಕೀಯ

ಗ್ಯಾರಂಟಿ ಅನುಷ್ಠಾನಕ್ಕೆ ಕುಂದಾಪುರ ಕಾಂಗ್ರೆಸ್ ಹರ್ಷ

Share: ಕುಂದಾಪುರ: ವಿಧಾನಸಭಾ ಚುನಾವಣೆಗೆ ಮುನ್ನ ಕಾಂಗ್ರೆಸ್ ಪಕ್ಷವು ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದ್ದ ಐದು ಗ್ಯಾರೆಂಟಿಗಳನ್ನು ಅನುಷ್ಠಾನ ಘೋಷಣೆ ಮಾಡಿರುವುದನ್ನು ಕುಂದಾಪುರ ಬ್ಲಾಕ್ ಕಾಂಗ್ರೆಸ್ ಸ್ವಾಗತಿಸಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹರಿಪ್ರಸಾದ್ ಶೆಟ್ಟಿ ಕಾನ್ಮಕ್ಕಿಯವರು, ಬಿಜೆಪಿ ಮುಖಂಡರು ಗ್ಯಾರಂಟಿ ಬಗ್ಗೆ ಟೀಕೆ ಮತ್ತು ಲೇವಡಿ ಮಾಡಿ ಗ್ಯಾರಂಟಿಗೆ ವಾರಂಟಿ ಇಲ್ಲ ಮತ್ತು ಗ್ಯಾರಂಟಿ ಪುಸ್ತಕದೊಳಗಿನ ನವಿಲಗರಿ ಎಂದಿದ್ದರು. ಆದರೆ ಕಾಂಗ್ರೆಸ್ ನಡೆದಂತೆ ನುಡಿಯುವ ಪಕ್ಷ ಎಂದಿದ್ದಾರೆ. ಪ್ರಥಮ ಸಂಪುಟ […]

ಕುಂದಾಪುರ: ವಿಧಾನಸಭಾ ಚುನಾವಣೆಗೆ ಮುನ್ನ ಕಾಂಗ್ರೆಸ್ ಪಕ್ಷವು ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದ್ದ ಐದು ಗ್ಯಾರೆಂಟಿಗಳನ್ನು ಅನುಷ್ಠಾನ ಘೋಷಣೆ ಮಾಡಿರುವುದನ್ನು ಕುಂದಾಪುರ ಬ್ಲಾಕ್ ಕಾಂಗ್ರೆಸ್ ಸ್ವಾಗತಿಸಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹರಿಪ್ರಸಾದ್ ಶೆಟ್ಟಿ ಕಾನ್ಮಕ್ಕಿಯವರು, ಬಿಜೆಪಿ ಮುಖಂಡರು ಗ್ಯಾರಂಟಿ ಬಗ್ಗೆ ಟೀಕೆ ಮತ್ತು ಲೇವಡಿ ಮಾಡಿ ಗ್ಯಾರಂಟಿಗೆ ವಾರಂಟಿ ಇಲ್ಲ ಮತ್ತು ಗ್ಯಾರಂಟಿ ಪುಸ್ತಕದೊಳಗಿನ ನವಿಲಗರಿ ಎಂದಿದ್ದರು. ಆದರೆ ಕಾಂಗ್ರೆಸ್ ನಡೆದಂತೆ ನುಡಿಯುವ ಪಕ್ಷ ಎಂದಿದ್ದಾರೆ. ಪ್ರಥಮ ಸಂಪುಟ ಸಭೆಯಲ್ಲಿ ತಾತ್ವಿಕ ಅನುಮೋದನೆ ನೀಡಲಾಗಿದ್ದು, ಶುಭ ಶುಕ್ರವಾರ ನಡೆದ ಸಂಪುಟ ಸಭೆಯಲ್ಲಿ 5 ಗ್ಯಾರಂಟಿಗಳಿಗೆ ಸಂಪೂರ್ಣ ಅನುಮೋದನೆ ನೀಡಲಾಗಿದೆ. ಗ್ಯಾರಂಟಿ ಅನುಮೋದನೆ ಮಾಡಿರುವುದು ಕಾಂಗ್ರೆಸ್ ಪಕ್ಷ ತನ್ನ ಜನಪರ ಬದ್ಧತೆಯನ್ನು ತೋರಿಸಿದೆ ಎಂದಿರುವ ಹರಿಪ್ರಸಾದ್, ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಪ್ರತಿಯೊಬ್ಬರ ಖಾತೆಗೆ 15 ಲಕ್ಷ ರೂಪಾಯಿ ಜಮಾ ಮಾಡುತ್ತೇವೆ. ವಾರ್ಷಿಕ ಕೋಟಿ ಉದ್ಯೋಗ ಸೃಷ್ಟಿ ಮಾಡಲಾಗುವುದು ಮತ್ತು ರೈತರ ಆದಾಯ ದ್ವಿಗುಣ ಮಾಡಲಾಗುವುದು ಎಂದು ನೀಡಿದ ಭರವಸೆ ಈಡೇರಿಸಲಿ ಎಂದು ಆಗ್ರಹಿಸಿದ್ದಾರೆ.

Leave a comment

Your email address will not be published. Required fields are marked *

eMedia Kannada  @2025. All Rights Reserved.