ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿಯವರಿಂದ ಮುಂಬಯಿಯಲ್ಲಿ ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ ಶಿಂಧೆ ಭೇಟಿ
ಕಾಪು ವಿಧಾನಸಭಾ ಕ್ಷೇತ್ರದ ಶಾಸಕ ಗುರ್ಮೆ ಸುರೇಶ್ ಶೆಟ್ಟಿಯವರು ಸೋಮವಾರ ಬೆಳಿಗ್ಗೆ ೧೧ ಗಂಟೆಗೆ ಮಹಾರಾಷ್ಟ್ರದ ಮುಖ್ಯಮಂತ್ರಿಗಳಾದ ಏಕನಾಥ ಶಿಂಧೆಯವರನ್ನು ಮುಂಬೈನಲ್ಲಿರುವ ಮುಖ್ಯಮಂತ್ರಿಗಳ ಕಚೇರಿಯಲ್ಲಿ ಭೇಟಿಯಾದರು.
ಕರ್ನಾಟಕ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಕಾಪು ಕ್ಷೇತ್ರಕ್ಕೆ ಗುರ್ಮೆ ಸುರೇಶ್ ಶೆಟ್ಟಿಯವರ ಪರವಾಗಿ ಚುನಾವಣಾ ಪ್ರಚಾರಕ್ಕೆ ಆಗಮಿಸಿದ ಮುಖ್ಯಮಂತ್ರಿ ಅವರಿಗೆ ಗುರ್ಮೆ ಕೃತಜ್ಞತೆ ಸಲ್ಲಿಸಿದರು.
ಕಾಪು ಕ್ಷೇತ್ರ ಸರ್ವಾಂಗೀಣ ರೀತಿಯಲ್ಲಿ ಅಭಿವೃದ್ಧಿ ಹೊಂದುವಂತಾಗಲಿ ಎಂದು ಮುಖ್ಯಮಂತ್ರಿ ಏಕನಾಥ ಶಿಂಧೆ ಹಾರೈಸಿದರು.
ಈ ಸಂದರ್ಭದಲ್ಲಿ ಹೋಟೆಲ್ ಉದ್ಯಮಿಗಳಾದ ರಿತೇಶ್ ಶೆಟ್ಟಿ, ಜೀವನ್ ಶೆಟ್ಟಿ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

