• Home  
  •   ಹೇಡಿಗಳ ವಿಚಾರ ಪಠ್ಯದಲ್ಲಿರಲು ಬಿಡಲ್ಲ: ಬಿ.ಕೆ. ಹರಿಪ್ರಸಾದ್
- ರಾಜಕೀಯ

  ಹೇಡಿಗಳ ವಿಚಾರ ಪಠ್ಯದಲ್ಲಿರಲು ಬಿಡಲ್ಲ: ಬಿ.ಕೆ. ಹರಿಪ್ರಸಾದ್

Share: ಶಿವಮೊಗ್ಗ: ಆರ್‌ ಎಸ್‌ ಎಸ್‌ ಸಂಸ್ಥಾಪಕರಲ್ಲೊಬ್ಬರಾದ ಕೇಶವ ಬಲಿರಾಮ್ ಹೆಡಗೇವಾರ್ ತರಹದ ಹೇಡಿಗಳ ಪಾಠಗಳನ್ನು ಶಾಲೆಗಳ ಪಠ್ಯದಲ್ಲಿರಲು ಬಿಡುವುದಿಲ್ಲ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್ ಹೇಳಿದರು.   ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿಕ್ಷಣ ಸೇರಿದಂತೆ ಸರ್ಕಾರದ ಯಾವ ಇಲಾಖೆಯಲ್ಲೂ ಸಂಘ ಪರಿವಾರದ ಸಿದ್ಧಾಂತಗಳು ನುಸುಳಲು ಅವಕಾಶ ನೀಡುವುದಿಲ್ಲ. ಹೆಡಗೇವಾರ್ ತರಹದ ರಣಹೇಡಿಗಳ ವಿಚಾರ ಇನ್ನು ಮುಂದೆ ಪಠ್ಯದಲ್ಲಿ ಇರುವುದಿಲ್ಲ ಎಂದರು.  ಹೆಡಗೇವಾರ್ ಒಬ್ಬ ಸ್ವಾತಂತ್ರ್ಯ ಹೋರಾಟಗಾರ ಎಂಬುದನ್ನು ಬಿಜೆಪಿಯವರು ಸಾಬೀತು ಮಾಡಲಿ. ಬ್ರಿಟಿಷರ […]

ಶಿವಮೊಗ್ಗ: ಆರ್‌ ಎಸ್‌ ಎಸ್‌ ಸಂಸ್ಥಾಪಕರಲ್ಲೊಬ್ಬರಾದ ಕೇಶವ ಬಲಿರಾಮ್ ಹೆಡಗೇವಾರ್ ತರಹದ ಹೇಡಿಗಳ ಪಾಠಗಳನ್ನು ಶಾಲೆಗಳ ಪಠ್ಯದಲ್ಲಿರಲು ಬಿಡುವುದಿಲ್ಲ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್ ಹೇಳಿದರು.

  ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿಕ್ಷಣ ಸೇರಿದಂತೆ ಸರ್ಕಾರದ ಯಾವ ಇಲಾಖೆಯಲ್ಲೂ ಸಂಘ ಪರಿವಾರದ ಸಿದ್ಧಾಂತಗಳು ನುಸುಳಲು ಅವಕಾಶ ನೀಡುವುದಿಲ್ಲ. ಹೆಡಗೇವಾರ್ ತರಹದ ರಣಹೇಡಿಗಳ ವಿಚಾರ ಇನ್ನು ಮುಂದೆ ಪಠ್ಯದಲ್ಲಿ ಇರುವುದಿಲ್ಲ ಎಂದರು.

 ಹೆಡಗೇವಾರ್ ಒಬ್ಬ ಸ್ವಾತಂತ್ರ್ಯ ಹೋರಾಟಗಾರ ಎಂಬುದನ್ನು ಬಿಜೆಪಿಯವರು ಸಾಬೀತು ಮಾಡಲಿ. ಬ್ರಿಟಿಷರ ಕ್ಷಮಾಪಣೆ ಕೇಳಿದ ನಕಲಿ ಸ್ವಾತಂತ್ರ್ಯ ಹೋರಾಟಗಾರರಿಗೆಲ್ಲಾ ಮನ್ನಣೆ ನೀಡಲು ಸಾಧ್ಯವಿಲ್ಲ. ಅವರೆಲ್ಲ ಬ್ರಿಟಿಷರಿಗೆ ಕ್ಷಮಾಪಣಾ ಪತ್ರ ನೀಡಿದ್ದು ಏಕೆ ಎಂಬುದನ್ನು ಬಹಿರಂಗಪಡಿಸಲಿ ಎಂದು ಸವಾಲು ಹಾಕಿದರು.

 ಬಿಜೆಪಿ ಅವಧಿಯಲ್ಲಿ ಕೃಷಿ, ಕಾರ್ಮಿಕ, ಶಿಕ್ಷಣ ಇಲಾಖೆಗಳನ್ನು ಸಂಪೂರ್ಣವಾಗಿ ಕೇಸರೀಕರಣ ಮಾಡಲು ಬಿಜೆಪಿ ಹೊರಟಿತ್ತು. ಎಲ್ಲೆಲ್ಲಿ ಸಂಘ ಪರಿವಾರದ ತತ್ವ ಸಿದ್ಧಾಂತಗಳನ್ನು ತುರುಕಲು ಹೊರಟಿದ್ದರೋ ಅದನ್ನೆಲ್ಲಾ ಸರಿಪಡಿಸುವ ಕೆಲಸವನ್ನು ಮಾಡಲಿದ್ದೇವೆ’ ಎಂದು ತಿಳಿಸಿದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.