• Home  
  • ಕಟಪಾಡಿಯಲ್ಲಿ ಬಸ್ಸು – ಬೈಕ್ ನಡುವೆ ಅಫಘಾತ: ಸವಾರ ಸ್ಥಳದಲ್ಲೇ ಮೃತ್ಯು
- ಅಪರಾಧ

ಕಟಪಾಡಿಯಲ್ಲಿ ಬಸ್ಸು – ಬೈಕ್ ನಡುವೆ ಅಫಘಾತ: ಸವಾರ ಸ್ಥಳದಲ್ಲೇ ಮೃತ್ಯು

Share: ಉಡುಪಿ: ಬೈಕ್ ಮತ್ತು ಬಸ್ಸಿನ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಕಟಪಾಡಿ ರಾಷ್ಟ್ರೀಯ ಹೆದ್ದಾರಿ 66 ರ ಸರ್ವಿಸ್ ರಸ್ತೆಯಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನ ಕಟಪಾಡಿ ಸರಕಾರಿ ಗುಡ್ಡೆ ನಿವಾಸಿ ಇಕ್ಬಾಲ್ (32) ಎಂದು ಗುರುತಿಸಲಾಗಿದೆ. ಇವರು ಮಲ್ಲಿಗೆ ಹೂವಿನ ವ್ಯಾಪಾರವನ್ನು ಮಾಡುತ್ತಿದ್ದರು. ಕಟಪಾಡಿ ರಾಷ್ಟ್ರೀಯ ಹೆದ್ದಾರಿ 66 ರ ಸರ್ವಿಸ್ ರಸ್ತೆಯಲ್ಲಿ ಉಡುಪಿಯಿಂದ ಮಂಗಳೂರು ಬಸ್ಸು ಇಕ್ಬಾಲ್ ಅವರು ಬೈಕಿಗೆ ಡಿಕ್ಕಿ ಹೊಡೆದಿದ್ದು, ಘಟನೆಯಲ್ಲಿ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನಾ […]

ಉಡುಪಿ: ಬೈಕ್ ಮತ್ತು ಬಸ್ಸಿನ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಕಟಪಾಡಿ ರಾಷ್ಟ್ರೀಯ ಹೆದ್ದಾರಿ 66 ರ ಸರ್ವಿಸ್ ರಸ್ತೆಯಲ್ಲಿ ನಡೆದಿದೆ.

ಮೃತ ವ್ಯಕ್ತಿಯನ್ನ ಕಟಪಾಡಿ ಸರಕಾರಿ ಗುಡ್ಡೆ ನಿವಾಸಿ ಇಕ್ಬಾಲ್ (32) ಎಂದು ಗುರುತಿಸಲಾಗಿದೆ. ಇವರು ಮಲ್ಲಿಗೆ ಹೂವಿನ ವ್ಯಾಪಾರವನ್ನು ಮಾಡುತ್ತಿದ್ದರು.

ಕಟಪಾಡಿ ರಾಷ್ಟ್ರೀಯ ಹೆದ್ದಾರಿ 66 ರ ಸರ್ವಿಸ್ ರಸ್ತೆಯಲ್ಲಿ ಉಡುಪಿಯಿಂದ ಮಂಗಳೂರು ಬಸ್ಸು ಇಕ್ಬಾಲ್ ಅವರು ಬೈಕಿಗೆ ಡಿಕ್ಕಿ ಹೊಡೆದಿದ್ದು, ಘಟನೆಯಲ್ಲಿ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಘಟನಾ ಸ್ಥಳಕ್ಕೆ ಕಾಪು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a comment

Your email address will not be published. Required fields are marked *

eMedia Kannada  @2025. All Rights Reserved.