• Home  
  • ಕಾಪು ಶ್ರೀ ಹೊಸಮಾರಿಗುಡಿ ದೇವಸ್ಥಾನ ಜೀರ್ಣೋದ್ಧಾರ ಪ್ರಕ್ರಿಯೆ; ತಾತ್ಕಾಲಿಕ ಗುಡಿಯಲ್ಲಿ ಮಾರಿಯಮ್ಮ,ಉಚ್ಚಂಗಿ  ಸಾನಿಧ್ಯ ಪ್ರತಿಷ್ಠೆ
- ಕರಾವಳಿ - ಪ್ರಚಲಿತ

ಕಾಪು ಶ್ರೀ ಹೊಸಮಾರಿಗುಡಿ ದೇವಸ್ಥಾನ ಜೀರ್ಣೋದ್ಧಾರ ಪ್ರಕ್ರಿಯೆ; ತಾತ್ಕಾಲಿಕ ಗುಡಿಯಲ್ಲಿ ಮಾರಿಯಮ್ಮ,ಉಚ್ಚಂಗಿ  ಸಾನಿಧ್ಯ ಪ್ರತಿಷ್ಠೆ

Share:  ಕಾಪು, ಜೂ. ೧೨ : ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ನಡೆಯುತ್ತಿರುವ ಸುಮಾರು ೩೫ ಕೋಟಿ ರೂಪಾಯಿ ವೆಚ್ಚದ ಪ್ರಥಮ ಹಂತದ ಜೀರ್ಣೋದ್ಧಾರ ಯೋಜನೆಗಳಿಗೆ ಪೂರಕವಾಗಿ ದೇಗುಲದ ಪಕ್ಕದಲ್ಲಿ ನಿರ್ಮಿಸಲಾದ ತಾತ್ಕಾಲಿಕ ಗುಡಿಯಲ್ಲಿ ಸೋಮವಾರ ಬೆಳಿಗ್ಗೆ ೮ ಗಂಟೆಗೆ ಶ್ರೀ ಮಾರಿಯಮ್ಮ ದೇವಿ ಮತ್ತು ಶ್ರೀ ಉಚ್ಚಂಗಿ ದೇವಿ ಸಾನಿಧ್ಯ ಪ್ರತಿಷ್ಠೆ ಹಾಗೂ ನಿರ್ಮಾಣ ಹಂತದ ಶಿಲಾಮಯ ಗರ್ಭಗುಡಿಯ ಮಹಾದ್ವಾರ ಸ್ಥಾಪನಾ ಪೂಜೆ ನಡೆಯಿತು.  ಕಾಪು ಶ್ರೀ ಹೊಸ ಮಾರಿಗುಡಿ ಅಭಿವೃದ್ಧಿ ಸಮಿತಿ, ವ್ಯವಸ್ಥಾಪನಾ […]

 ಕಾಪು, ಜೂ. ೧೨ : ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ನಡೆಯುತ್ತಿರುವ ಸುಮಾರು ೩೫ ಕೋಟಿ ರೂಪಾಯಿ ವೆಚ್ಚದ ಪ್ರಥಮ ಹಂತದ ಜೀರ್ಣೋದ್ಧಾರ ಯೋಜನೆಗಳಿಗೆ ಪೂರಕವಾಗಿ ದೇಗುಲದ ಪಕ್ಕದಲ್ಲಿ ನಿರ್ಮಿಸಲಾದ ತಾತ್ಕಾಲಿಕ ಗುಡಿಯಲ್ಲಿ ಸೋಮವಾರ ಬೆಳಿಗ್ಗೆ ೮ ಗಂಟೆಗೆ ಶ್ರೀ ಮಾರಿಯಮ್ಮ ದೇವಿ ಮತ್ತು ಶ್ರೀ ಉಚ್ಚಂಗಿ ದೇವಿ ಸಾನಿಧ್ಯ ಪ್ರತಿಷ್ಠೆ ಹಾಗೂ ನಿರ್ಮಾಣ ಹಂತದ ಶಿಲಾಮಯ ಗರ್ಭಗುಡಿಯ ಮಹಾದ್ವಾರ ಸ್ಥಾಪನಾ ಪೂಜೆ ನಡೆಯಿತು.

 ಕಾಪು ಶ್ರೀ ಹೊಸ ಮಾರಿಗುಡಿ ಅಭಿವೃದ್ಧಿ ಸಮಿತಿ, ವ್ಯವಸ್ಥಾಪನಾ ಸಮಿತಿ ಮತ್ತು ವಿವಿಧ ಉಪಸಮಿತಿಗಳು ಹಾಗೂ ಎಲ್ಲಾ ಸಮಾಜಗಳ ಮುಖಂಡರ ಉಪಸ್ಥಿತಿಯಲ್ಲಿ ದೇಗುಲದ ತಂತ್ರಿಗಳಾದ ಜ್ಯೋರ್ತಿವಿದ್ವಾನ್ ಕೆ. ಪಿ. ರಾಘವೇಂದ್ರ ತಂತ್ರಿ ಕೊರಂಗ್ರಪಾಡಿ, ಜ್ಯೋರ್ತಿವಿದ್ವಾನ್ ಕೆ. ಪಿ. ಕುಮಾರಗುರು ತಂತ್ರಿ ಕೊರಂಗ್ರಪಾಡಿ ಮತ್ತು ಪ್ರಧಾನ ಅರ್ಚಕ ವೇ| ಮೂ| ಶ್ರೀನಿವಾಸ ತಂತ್ರಿ ಕಲ್ಯ ಅವರ ನೇತೃತ್ವದಲ್ಲಿ ಸಾನಿಧ್ಯ ಚಾಲನೆ ಮತ್ತು ಸಾನಿಧ್ಯ ಪ್ರತಿಷ್ಠೆ ಸಹಿತ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ನೆರವೇರಿಸಲಾಯಿತು.

ಈ ಸಂದರ್ಭ ಉಡುಪಿ ಜಿಲ್ಲಾಧಿಕಾರಿ ಡಾ| ಕೂರ್ಮಾ ರಾವ್ ಎಂ, ಶ್ರೀ ಹೊಸ ಮಾರಿಗುಡಿ ಅಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ಮತ್ತು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಶ್ರೀ ಹೊಸ ಮಾರಿಗುಡಿ ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ, ಶ್ರೀ ಹೊಸ ಮಾರಿಗುಡಿ ಅಭಿವೃದ್ಧಿ ಸಮಿತಿ ಗೌರವಾಧ್ಯಕ್ಷ, ಮಾಜಿ ಶಾಸಕ ಲಾಲಾಜಿ ಆರ್. ಮೆಂಡನ್, ಅನಿಲ್ ಬಲ್ಲಾಳ್ ಬೀಡುಬದಿ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರಮೇಶ್ ಹೆಗ್ಡೆ ಕಲ್ಯ, ಮುಂಬೈ ಸಮಿತಿ ಕಾರ್ಯಾಧ್ಯಕ್ಷ ರವಿ ಸುಂದರ್ ಶೆಟ್ಟಿ, ಆರ್ಥಿಕ ಸಮಿತಿ  ಕಾರ್ಯಾಧ್ಯಕ್ಷ ಉದಯ ಸುಂದರ ಶೆಟ್ಟಿ, ಉಪಾಧ್ಯಕ್ಷರಾದ ಸೂರ್ಯಕಾಂತ್‌ ಜಯ ಸುವರ್ಣ, ಶಶಿಧರ ಕೆ ಶೆಟ್ಟಿ, ಕಾರ್ಯದರ್ಶಿ ಸದಾಶಿವ ಎ. ಕರ್ಕೇರಾ, ಕೋಶಾಧಿಕಾರಿ ಗಣೇಶ್‌ ಕೆ. ಶೆಟ್ಟಿ, ಪುಣೆ, ಸಮಿತಿ ಕಾರ್ಯಾಧ್ಯಕ್ಷ ಮಾಧವ ಶೆಟ್ಟಿ, ದಾನಿಗಳಾದ ಎನ್. ಬಿ. ಶೆಟ್ಟಿ ಮುಂಬಯಿ, ಪ್ರಭಾಕರ ಶೆಟ್ಟಿ ಮುಂಬಯಿ, ವಿವಿಧ ಸಮಾಜದ ಮುಖಂಡರಉಗಳು ಉಪಸ್ಥಿತರಿದ್ದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.